ಅಂತೂರ-ಬೆಂತೂರಲ್ಲಿ ಬಸಿ ನೀರಿನದ್ದೇ ಸಮಸ್ಯೆ!

ಮನೆಯಂಗಳದಲ್ಲಿ ಜಿನುಗುತ್ತಿದೆ ನೀರು,ಗ್ರಾಮದ ಕೆರೆ ನೀರು ಖಾಲಿ ಮಾಡಲು ತಹಸೀಲ್ದಾರ್‌ಗೆ ಪತ್ರ

Team Udayavani, Nov 28, 2020, 2:54 PM IST

ಅಂತೂರ-ಬೆಂತೂರಲ್ಲಿ ಬಸಿ ನೀರಿನದ್ದೇ ಸಮಸ್ಯೆ!

ಗದಗ: ಇತ್ತೀಚೆಗೆ ಸುರಿದ ಸತತ ಮಳೆಯಿಂದ ಈ ಊರಿನ ಕೆರೆ ಮೈದುಂಬಿದೆ. ಆದರೆ ಈ ಊರಿನ ಜನರಿಗೆ ಈ ವಿಷಯ ಸಂಭ್ರಮಕ್ಕಿಂತ ಸಮಸ್ಯೆಯಾಗಿಯೇ ಪರಿಣಮಿಸಿದೆ.

ಹೌದು. ತಾಲೂಕಿನ ಅಂತೂರ-ಬೆಂತೂರ ಗ್ರಾಮದ ಬೃಹತ್‌ ಕೆರೆ ಜೀವ ಜಲದಿಂದ ಮೈದುಂಬಿದೆ. ಸುಮಾರು 350 ಅಡಿ ಬೋರ್‌ವೆಲ್‌ ಕೊರೆದರೂ ಬಾರದ ನೀರು ಈಗ ಮನೆಯಂಗಳದಲ್ಲೇ ಜಿನುಗುತ್ತಿದ್ದು, ಸಮಸ್ಯೆ ತಂದೊಡ್ಡಿದೆ, ಹೀಗಾಗಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಕೆರೆ ನೀರು ಖಾಲಿ ಮಾಡುವಂತೆ ಗ್ರಾಪಂ ಆಡಳಿತ ಜಿಲ್ಲಾಡಳಿತಕ್ಕೆ ಪತ್ರ ಬರೆದಿದೆ.

ಬಸಿ ನೀರಿನ ಸಮಸ್ಯೆ: ಹಲವು ದಶಕಗಳ ಬಳಿಕ ಕೆರೆ ತುಂಬಿದ್ದರೂ ಗ್ರಾಮಸ್ಥರಿಗೆ ಸಂಭ್ರಮವಿಲ್ಲ. ಕಳೆದ ಆಗಸ್ಟ್‌ನಲ್ಲಿ ಉಂಟಾಗಿರುವ ಅತಿವೃಷ್ಟಿಯೊಂದಿಗೆ ಕೆರೆ ಭರ್ತಿಯಾಗಿದ್ದರಿಂದ ಭೂಮಿಯಲ್ಲಿ ತೇವಾಂಶ ವಿಪರೀತ ಹೆಚ್ಚಾಗಿದ್ದರಿಂದ ಉಭಯ ಗ್ರಾಮಗಳಲ್ಲಿ ಅಂತರ್ಜಲಮಟ್ಟ ಹೆಚ್ಚಿದ್ದರಿಂದ ವಿವಿಧ ಓಣಿಗಳ ತಗ್ಗು ಪ್ರದೇಶದ ಮನೆಗಳಲ್ಲಿ ಬಸಿ ನೀರಿನ ಸಮಸ್ಯೆ ಶುರುವಾಗಿದೆ. ಮಳೆಗಾಲ ಬಳಿಕವೂ ಬಸಿ ನೀರಿನ ಸಮಸ್ಯೆ ಮುಂದುವರಿದಿದೆ. ಮನೆ ಹಾಗೂ ದನದ ಕೊಟ್ಟಿಗೆಯ ಗುನ್ನೇವುಗಳಲ್ಲಿ ಹೆಚ್ಚಿನ ನೀರು ಜಿನುಗುತ್ತದೆ. ಬಸಿ ನೀರು ಖಾಲಿ ಮಾಡಿದ ಕೆಲವೇ ಸಮಯದಲ್ಲಿ ಮತ್ತೆ ಅಷ್ಟೇ ಪ್ರಮಾಣದ ನೀರು ಸಂಗ್ರಹವಾಗುತ್ತಿರುವುದು ಜನರ ನಿದ್ದೆಗೆಡಿಸಿದೆ.

ಬೋರ್‌ವೆಲ್‌ ಬೀಳದ ಊರು: ಜಿಲ್ಲೆಯಲ್ಲಿ ಎಲ್ಲ ಹಳ್ಳಿಗಳಿಗೆ ನದಿ ನೀರು ಪೂರೈಸುವ ಡಿಬಿಒಟಿ ಯೋಜನೆ ಅನುಷ್ಠಾನಕ್ಕೂ ಮುನ್ನ ಅಂತೂರ-ಬೆಂತೂರ ಗ್ರಾಮದಕುಡಿಯುವ ನೀರಿನ ಸಮಸ್ಯೆ ಹೇಳತೀರದಾಗಿತ್ತು. ಅದರಲ್ಲೂ ಬೇಸಿಗೆಯಲ್ಲಿ ಸುಮಾರು ನಾಲ್ಕೈದು ಕಿ.ಮೀ. ದೂರದ ಅಕ್ಕಪಕ್ಕದ ಊರುಗಳಿಂದ ಸೈಕಲ್‌, ದ್ವಿಚಕ್ರ ವಾಹನಗಳ ಮೇಲೆ ನೀರು ತರುವುದು ಅನಿವಾರ್ಯವಾಗಿತ್ತು. ಗ್ರಾಮದಲ್ಲಿ 350 ಅಡಿ ಕೊಳವೆ ಬಾವಿ ಕೊರೆದರೂ ನೀರು ಸಿಗುತ್ತಿರಲಿಲ್ಲ. ಗ್ರಾಪಂಆಡಳಿತ ಹಾಗೂ ಖಾಸಗಿ ವ್ಯಕ್ತಿಗಳು ಹಲವೆಡೆ ಬೋರ್‌ ಕೊರೆಯುವ ಪ್ರಯತ್ನ ನಡೆಸಿದ್ದರೂ ಫಲಿಸಿರಲಿಲ್ಲ. ಹೀಗಾಗಿ, ಅಂತೂರ್‌ ಗ್ರಾಪಂ ವತಿಯಿಂದ ಸುಮಾರು 3 ಕಿ.ಮೀ. ದೂರದ ನೀಲಗುಂದ ಸರಹದ್ದಿನಲ್ಲಿ ಬೋರ್‌ ವೆಲ್‌ ಕೊರೆಯಿಸಿ ಅಂತೂರ-ಬೆಂತೂರ ಗ್ರಾಮಗಳಿಗೆ ನೀರು ಪೂರೈಸಲಾಗುತ್ತಿತ್ತು. ಆದರೆ, ಇತ್ತೀಚೆಗೆ ಉಂಟಾದ ಅತಿವೃಷ್ಟಿ ಮತ್ತು ಕೆರೆ ತುಂಬಿದ್ದರಿಂದ ಗ್ರಾಮದಲ್ಲಿ ಅಂತರ್ಜಲ ಗಣನೀಯವಾಗಿ ಹೆಚ್ಚಿದೆ.

ಗ್ರಾಮದಲ್ಲಿ ಮೂರ್‍ನಾಲ್ಕು ಅಡಿ ತಗ್ಗು ತೋಡಿದರೂ ನೀರು ಜಿನುಗುತ್ತಿದೆ. ಕೆರೆ ಸುತ್ತಲಿನ ಸುಮಾರು 15ಕ್ಕೂ ಹೆಚ್ಚು ಕುಟುಂಬಗಳು ಸ್ವಂತ ಮನೆ ತೊರೆದು ಬೇರೆಡೆ ಬಾಡಿಗೆ ಪಡೆದಿದ್ದಾರೆ. ಇನ್ನು ಕೆಲ ಮನೆಗಳು ಬಿರುಕು ಬಿಟ್ಟಿವೆ. ಕೆರೆ ಖಾಲಿ ಮಾಡದ ಹೊರತು ಬೇರೆ ದಾರಿಯಿಲ್ಲ ಎಂಬುದು ಗ್ರಾಮಸ್ಥರ ಮಾತು.

ಗ್ರಾಮದ ಕೆರೆಯಿಂದ ಸಮಸ್ಯೆ ಉಂಟಾಗುತ್ತಿದ್ದು, ಕೆರೆ ಖಾಲಿ ಮಾಡಬೇಕೆಂದು ಗ್ರಾಮಸ್ಥರ ಮನವಿ ಮೇರೆಗೆ ಕಂದಾಯ ಇಲಾಖೆ, ಜಿಪಂ ಹಾಗೂ ಡಿಸಿಗೆ ಗ್ರಾಪಂ ವತಿ ಯಿಂದ ಪತ್ರ ಬರೆಯಲಾಗಿದೆ. ಅದನ್ನು ಆಧರಿಸಿ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ನಿರ್ಧಾರ ಕೈಗೊಂಡಿಲ್ಲ. ಖೇಮಸಿಂಗ್‌ ಡಿ.ರಾಠೊಡ್‌, ಅಂತೂರ್‌ ಗ್ರಾಪಂ ಆಡಳಿತಾಧಿಕಾರಿ

ಮಳೆಗಾಲ ಮುಗಿದು ಎರಡ್ಮೂರು ತಿಂಗಳು ಕಳೆದರೂ ಗ್ರಾಮದಲ್ಲಿ ಬಸಿ ನೀರಿನ ಸಮಸ್ಯೆ ಕಡಿಮೆಯಾಗುತ್ತಿಲ್ಲ. ಇದರಿಂದ ಮುಂದೆ ಸಾಂಕ್ರಾಮಿಕ ಕಾಯಿಲೆಗಳು ಎದುರಾಗಬಹುದು. ಕೆರೆ ನೀರು ಹೊರಗೆ ಹರಿಸುವಂತೆ ಕೋರಿ ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ. ಅಮಾಗಿ, ಗ್ರಾಮದ ಹಿರಿಯರು

 

ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

1-bank

Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.