ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್ ಅಭಿಮತ
Team Udayavani, Nov 28, 2020, 10:21 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: “ಕೃಷಿ ಮತ್ತು ಮೀನುಗಾರಿಕೆ ಕ್ಷೇತ್ರಗಳಲ್ಲಿ ಮಾಹಿತಿ ತಂತ್ರಜ್ಞಾನದ ಸಮರ್ಪಕ ಬಳಕೆಗೆ ರಾಷ್ಟ್ರೀಯ ಮಟ್ಟದಲ್ಲಿ ವ್ಯವಸ್ಥಿತ ಚೌಕಟ್ಟು ರೂಪಿಸುವ ಅಗತ್ಯವಿದೆ’ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ (ಇಸ್ರೋ) ಅಧ್ಯಕ್ಷ ಡಾ| ಕೆ. ಶಿವನ್ ಹೇಳಿದರು.
ಇಲ್ಲಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಶನಿವಾರ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 54ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, “ಬೆಂಗಳೂರು ದೇಶದ ಸಾಫ್ಟ್ವೇರ್‌ಗಳ ರಾಜಧಾನಿಯಾಗಿದೆ. ಆದರೆ, ಕೃಷಿ ವಿಜ್ಞಾನ ಮತ್ತು ಮೀನುಗಾರಿಕೆ ವಿಜ್ಞಾನದಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆಯಲ್ಲಿ ನಾವು ನಿರೀಕ್ಷೆ ಪ್ರಗತಿ ಸಾಧಿಸಿಲ್ಲ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಚೌಕಟ್ಟು ರೂಪಿಸಿ, ಆ ಮೂಲಕ ಐಟಿಗೆ ಸೂಕ್ತ ವೇದಿಕೆ ಕಲ್ಪಿಸಬೇಕು’ ಎಂದು ಹೇಳಿದರು.
ಕೃಷಿಯಲ್ಲಿ ಡ್ರೋನ್ ಮತ್ತಿತರ ತಂತ್ರಜ್ಞಾನಗಳ ಬಳಕೆಯಾಗುತ್ತಿದೆ; ಇದು ಸಾಲದು. ಕೃಷಿ ಅಥವಾ ಮೀನುಗಾರಿಕೆ ವಿಜ್ಞಾನದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಬಿಗ್ ಡಾಟಾ ಅನಾಲಿಟಿಕ್ಸ್ ಡೊಮೇನ್ ಬಳಕೆಗೆ ವಿಪುಲ ಅವಕಾಶಗಳಿವೆ. ಆದರೆ, ಸಾಫ್ಟ್ವೇರ್ ಎಂಜಿನಿಯರ್‌ಗಳು ಇದರಲ್ಲಿ ಅಷ್ಟೊಂದು ಪರಿಣಿತರಲ್ಲ. ಆದ್ದರಿಂದ ರಾಷ್ಟ್ರೀಯ ಮಟ್ಟದಲ್ಲಿ ಇದಕ್ಕೊಂದು ಚೌಕಟ್ಟು ರೂಪಿಸಿ, ಸಮರ್ಪಕ ತಂತ್ರಜ್ಞಾನಗಳ ಬಳಕೆಗೆ ಮುಂದಾಗಬೇಕಿದೆ ಎಂದರು.
ಗ್ರಾಮ ದತ್ತು
ಕೃಷಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ರಾಜ್ಯದಲ್ಲಿ ಒಟ್ಟು ಆರು ಕೃಷಿ ವಿಶ್ವವಿದ್ಯಾನಿಲಯಗಳಿವೆ. ಇವು ಪ್ರತಿ ವರ್ಷ ಕನಿಷ್ಠ ತಲಾ ನಾಲ್ಕು ಗ್ರಾಮಗಳನ್ನು ದತ್ತು ಪಡೆದು, ಅದನ್ನು ಕೃಷಿ ಜತೆಗೆ ಸಮಗ್ರವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಬೇಕು. ಕೃಷಿಯಲ್ಲಿನ ಸಾಧನೆಗಳು ರೈತರ ಜಮೀನುಗಳನ್ನು ತಲುಪಲು ಇದು ಉತ್ತಮ ಪ್ರಯೋಗ ಎಂದರು.
ಆಹಾರ ಭದ್ರತೆಗೆ ಗಮನ
2030ರ ವೇಳೆಗೆ ವಿಶ್ವದ ಜನಸಂಖ್ಯೆ ಸಾವಿರ ಕೋಟಿ ಆಗಲಿದೆ. ಆಗ ಆಹಾರ ಉತ್ಪಾದನೆ ಪ್ರಮಾಣ ಶೇ. 70ರಷ್ಟು ಹೆಚ್ಚಳ ಆಗಬೇಕಾಗುತ್ತದೆ. ಈ ನಿಟ್ಟಿನಲ್ಲಿ ಬಾಹ್ಯಾಕಾಶ ತಂತ್ರಜ್ಞಾನವು ಭವಿಷ್ಯದಲ್ಲಿ ಎದುರಾಗಬಹುದಾದ ಆಹಾರ ಭದ್ರತೆ ಕಡೆಗೆ ತನ್ನ ಗಮನ ಕೇಂದ್ರೀಕರಿಸುವ ಅಗತ್ಯವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.