ಜಲ ಮಂಡಳಿಯ ಎಡವಟ್ಟು: ಮನೆ ಮೇಲೆ ಮುರಿದು ಬಿದ್ದ ಮರ
Team Udayavani, Nov 29, 2020, 10:48 AM IST
ವಿಜಯಪುರ: ನಗರ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ತೋಡಿದ ಗುಂಡಿಯಿಂದ ನಗರದಲ್ಲಿ ಬೃಹತ್ ಮರವೊಂದು ಉರುಳಿ ಬಿದ್ದು ಮನೆಗಳು ಹಾನಿಗೀಡಾಗಿದ್ದು, ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಜರುಗಿದೆ.
ನಗರದ ಮನಗೂಳಿ ರಸ್ತೆಯಲ್ಲಿ ಇರುವ ಮರಾಠಿ ವಿದ್ಯಾಲಯದ ಬಳಿ ಮುಖ್ಯ ರಸ್ತೆಯನ್ನು ಕೆಲವೇ ತಿಂಗಳ ಹಿಂದೆ ಸಿ.ಸಿ. ರಸ್ತೆ ಮಾಡಲಾಗಿದೆ. ಜಲ ಮಂಡಳಿ ಇದೇ ರಸ್ತೆಯ ಅಡಿಯಲ್ಲಿ ಕುಡಿಯುವ ನೀರಿನ ಪೈಪ್ ದುರಸ್ತಿಗೆ ಮುಂದಾಗಿ, ರಸ್ತೆ ಅಗಿಯುವ ಕೆಲಸ ಆರಂಭಿಸಿತ್ತು.
ಸದರಿ ಕಾಮಗಾರಿ ಸ್ಥಳದಲ್ಲೇ ಬೃಹತ್ ಮರವಿದ್ದು, ಕಾರ್ಮಿಕರು ಮರದ ಬೇರುಗಳನ್ನು ಹಾನಿ ಮಾಡಿದ್ದರಿಂದ ಆಸರೆ ಕಳೆದುಕೊಂಡು ರಸ್ತೆ ಬದಿಯ ಮನೆಗಳ ಮೇಲೆ ಉರುಳಿ ಬಿದ್ದಿದೆ.
ಘಟನೆ ಜರುಗಿದ ರಸ್ತೆ ಜನನಿಬಿಡ ಪ್ರದೇಶವಾಗಿದೆ. ಆದರೆ ರಾತ್ರಿ ವೇಳೆ ಮರ ನೆಲಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಜೀವ ಹಾನಿ ಆಗಿಲ್ಲ. ತಮ್ಮ ಮನೆ ಮೇಲೆ ಮರ ಬಿದ್ದ ಕಾರಣ ಗಾಬರಿಗೊಂಡ ಮನೆಯವರು ಹೊರಗೆ ಓಡಿ ಬಂದಿದ್ದಾರೆ.
ರಸ್ತೆ ಕಾಮಗಾರಿ ಮಾಡುವಾಗ ಸುಮ್ಮನಿದ್ದ ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳು, ದುರಸ್ತಿಯಾದ ರಸ್ತೆಯನ್ನು ಅಗಿದು ಹಾಳು ಮಾಡಿದ್ದಾರೆ. ಅಲ್ಲದೇ ರಸ್ತೆ ಅಗಿಯುವಾಗ ಸ್ಥಳದಲ್ಲೇ ಇದ್ದು, ಉಸ್ತುವಾರಿ ನೋಡಿಕೊಳ್ಳದೇ ಬೇಜವಾಬ್ದಾರಿ ತೋರಿದ್ದಾರೆ. ಇದರಿಂದಾಗಿ ಈ ಅವಘಡ ಸಂಭವಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.