ಕನ್ನಂಪಲ್ಲಿ ಕೆರೆಗೆ ಶಾಸಕ ಕೃಷ್ಣಾ ರೆಡ್ಡಿ ದಂಪತಿ ಬಾಗಿನ
Team Udayavani, Nov 29, 2020, 2:21 PM IST
ಚಿಂತಾಮಣಿ: ನಗರದ ಜೀವಜಲ ಮೂಲವಾಗಿರುವ ಕನ್ನಂಪಲ್ಲಿ ಕೆರೆ ಕಳೆದ ಎರಡು ದಿನಗಳಿಂದ ಬಿದ್ದ ಮಳೆಗೆ ಕೋಡಿ ಹರಿಯುತ್ತಿದ್ದು, ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ದಂಪತಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಶನಿವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಬೆಳಗ್ಗೆ ಕೆರೆಯ ಬಳಿ ತೆರಳಿ ವೇದಪಂಡಿತರು ಹಾಗೂ ವಾದ್ಯಮೇಳಗಳೊಂದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ನಂತರ ಗಂಗಾಮಾತೆಯನ್ನುಅಲಂಕೃತ ತೆಪ್ಪದಲ್ಲಿಕೂರಿಸಿ ಕೆರೆಪ್ರದಕ್ಷಿಣೆ ಮಾಡಲಾಯಿತು ಹಾಗೂ ನಾರಸಿಂಹಪೇಟೆಯ ಗ್ರಾಮದೇವತೆ ಗಂಗಮ್ಮನವರಿಗೆ ಪೂಜೆ ಸಲ್ಲಿಸಿ ಅಲಂಕೃತ ಪಲ್ಲಕ್ಕಿ ಮುಖಾಂತರ ಮೆರವಣಿಗೆ ಮಾಡಲಾಯಿತು.
ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಪತ್ರಿಕೆಯೊಂದಿಗೆ ಮಾತನಾಡಿ, ತಾನೂ ಶಾಸಕನಾದ ಬಳಿಕ ಕನ್ನಂಪಲ್ಲಿ ಕೆರೆ ಮೂರನೇ ಬಾರಿಗೆ ತುಂಬಿ ಕೋಡಿ ಹರಿಯುತಿರುವುದು ಸಂತಸದ ವಿಷಯ ವಾಗಿದ್ದು, ಪ್ರತಿವರ್ಷ ಇದೇ ರೀತಿ ತಾಲೂಕಿನ ಎಲ್ಲಾ ಕೆರೆಗಳು ತುಂಬಿ ಕೋಡಿ ಹರಿದು ಸಕಾಲಕ್ಕೆ ಜನಜಾನುವಾರುಗಳಿಗೆ ಮೇವು, ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.
ಬಾಗಿನ ವೇಳೆ ಚಿಂತಾಮಣಿ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ತಹಶೀಲ್ದಾರ್ ಹನುಮಂತರಾಯಪ್ಪ, ನಗರಸಭೆ ಪರಿಸರ ಅಭಿಯಂತರ ಉಮಾಶಂಕರ್, ಆರತಿ, ಬಿಇಒ ಸುರೇಶ್, ತಾಲೂಕು ಆರೋಗ್ಯಾಧಿಕಾರಿ ಸ್ವಾತಿ ಸೇರಿದಂತೆ ನಗರಸಭೆ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು ಚಿಂತಾ ಮಣಿ ಗ್ರಾಮಾಂತರ ಪೊಲೀಸ್ ಠಾಣೆ ಆರಕ್ಷಕ ವೃತ್ತ ನಿರೀಕ್ಷಕ ಶ್ರೀನಿವಾಸಪ್ಪ ಹಾಗೂ ಗ್ರಾಮಾಂತರ ಠಾಣೆ ಪಿಎಸ್‌ಐ ನರೇಶ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.