ನಿಗಮ,ನಾಮ ನಿರ್ದೇಶನಕ್ಕೆ ಆಕಾಂಕ್ಷಿಗಳ ದಂಡು

200ಕ್ಕೂಹೆಚ್ಚುಮಂದಿ ಮುಖಂಡರ ಪಟ್ಟಿ ರವಾನೆ

Team Udayavani, Nov 29, 2020, 4:23 PM IST

ನಿಗಮ,ನಾಮ ನಿರ್ದೇಶನಕ್ಕೆ ಆಕಾಂಕ್ಷಿಗಳ ದಂಡು

ಮಂಡ್ಯ: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಸರ್ಕಾರದ ನಾಮನಿರ್ದೇಶನಗಳಿಗೆ ಲಾಬಿ ನಡೆಯುತ್ತಿದ್ದು, ಅದರಂತೆ ಮಂಡ್ಯ ಜಿಲ್ಲೆಯಲ್ಲೂ ಆಕಾಂಕ್ಷಿತರ ದಂಡು ಹೆಚ್ಚಾಗಿದೆ.

ಈಗಾಗಲೇ ಕಾಡಾ, ಮೂಡಾಗಳಿಗೆ ಅಧ್ಯಕ್ಷರ ನೇಮಕ ನಡೆದಿದೆ. ಮನ್‌ ಮುಲ್‌, ಡಿಸಿಸಿ ಬ್ಯಾಂಕ್‌ ಸೇರಿದಂತೆ ವಿವಿಧ ಸಹಕಾರ ಸಂಘಗಳಿಗೆ ಸರ್ಕಾರದಿಂದ ನಾಮ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ಇದೀಗ ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನೇಮಕ ಮಾಡುವಂತೆ ಜಿಲ್ಲೆಯಿಂದ ಪಟ್ಟಿ ರವಾನೆಯಾಗಿದೆ. ಸ್ಥಳೀಯ ಸಂಸ್ಥೆಗಳಿಂದ ನಗರಸಭೆ, ಪುರಸಭೆ, ಎಪಿಎಂಸಿಗಳಿಗೆ ನಾಮನಿರ್ದೇಶನ ಬಾಕಿ ಉಳಿದಿದ್ದು, ಅದರಲ್ಲಾದರೂ ನಮ್ಮನ್ನು ಪರಿಗಣಿಸಬೇಕು. ಅಲ್ಲದೆ, ವಿವಿಧ ನಿಗಮ ಹಾಗೂ ಮಂಡಳಿಗಳಿಗೆ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಜಿಲ್ಲೆಯಿಂದ ಸುಮಾರು 200ಕ್ಕೂ ಹೆಚ್ಚು ಮಂದಿ ಬಿಜೆಪಿ ಮುಖಂಡರ ಪಟ್ಟಿ ರವಾನೆಯಾಗಿದೆ ಎಂದು ತಿಳಿದು ಬಂದಿದೆ.

ಭುಗಿಲೇಳುವ ಅಸಮಾಧಾನ: ಮೂಡಾ ಅಧ್ಯಕ್ಷರಾದ ಕೆ.ಶ್ರೀನಿವಾಸ್‌ ಅವರನ್ನುನೇಮಕ ಮಾಡಿದಾಗಲೂ ವಿರೋಧ ವ್ಯಕ್ತವಾಗಿತ್ತು. ಮನ್‌ಮುಲ್‌ಗೆ ನಾಮನಿರ್ದೇಶಕರಾಗಿ ಕೆ.ಜಿ. ತಮ್ಮಣ್ಣ ಅವರನ್ನು ಆಯ್ಕೆ ಮಾಡಿದಾಗ ಅಸಮಾಧಾನ ಉಂಟಾಗಿತ್ತು. ಡಿಸಿಸಿ ಬ್ಯಾಂಕ್‌ ನಾಮನಿರ್ದೇಶಕರಾದ ಸಿ.ಪಿ.ಉಮೇಶ್‌,ಕಾಡಾ ಅಧ್ಯಕ್ಷ ಶಿವಲಿಂಗಯ್ಯಹಾಗೂ ಮೈಷುಗರ್‌ ಅಧ್ಯಕ್ಷರಾಗಿರುವ ಜೆ.ಶಿವಲಿಂಗೇಗೌಡ ಅವರ ನೇಮಕಕ್ಕೂ ವಿರೋಧ ವ್ಯಕ್ತವಾಗಿದ್ದು, ಬಹಿರಂಗವಾಗದಿದ್ದರೂಆಕಾಂಕ್ಷಿಗಳು, ಮುಖಂಡರು, ಕಾರ್ಯಕರ್ತರಲ್ಲಿ ಭಿನ್ನಮತ ಬೂದಿ ಮುಚ್ಚಿದ ಕೆಂಡದಂತೆ ಹೊಗೆಯಾಡುತ್ತಲೇ ಇದೆ. ಅಲ್ಲದೆ, ಬಿಜೆಪಿ ಮೂಲ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಕೇಳಿ ಬರುತ್ತಿದೆ.

ಪಕ್ಷ ಸಂಘಟನೆಗೆ ಹೊಡೆತ: ಬಿಜೆಪಿ ಪಕ್ಷದಲ್ಲಿ ‌ನಿಷ್ಠಾವಂತರಾಗಿ ದುಡಿದಿರುವ ಕಾರ್ಯಕರ್ತರು ಅನೇಕರಿದ್ದಾರೆ.ಅವರನ್ನೆಲ್ಲಬಿಟ್ಟುಬೇರೆ ಕಡೆಯಿಂದಬರುವವರೆಗೆ ಹೆಚ್ಚು ಮಹತ್ವ ನೀಡುತ್ತಿರುವುದರಿಂದ ಮೂಲ ಕಾರ್ಯಕರ್ತರು ಪಕ್ಷ ಸಂಘಟನೆಯತ್ತ ಮುಖ ಮಾಡುತ್ತಿಲ್ಲ. ಅಲ್ಲದೆ, ಕಾರ್ಯಕರ್ತರಲ್ಲಿಯೇ ವೈಯಕ್ತಿಕ ಭಿನ್ನಮತ, ಅಸಮಾಧಾನಗಳು ಹೆಚ್ಚಾಗಿದೆ. ಇದರಿಂದ ಪಕ್ಷ ಸಂಘಟನೆಗೆ ಹೊಡೆತ ಬೀಳುತ್ತಿದೆ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದರು.

ಪ್ರಮುಖ ಆಕಾಂಕ್ಷಿಗಳು: ರಾಜ್ಯದ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷ ಹಾಗೂ ಸ್ಥಳೀಯ ಸಂಸ್ಥೆಗಳ ನಾಮ ನಿರ್ದೇಶನಗಳಿಗೆ ಪರಿಗಣಿಸುವಂತೆ ಪ್ರಮುಖ ಮುಖಂಡರು ಮನವಿ ಮಾಡಿದ್ದಾರೆ. ಅದ ರಲ್ಲಿ ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯಡಾ.ಸಿದ್ದರಾಮಯ್ಯ, ಬಿಜೆಪಿ ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷ ಕೆ.ಎಸ್‌.ನಂಜುಂಡೇಗೌಡ, ಮಾಜಿ ಅಧ್ಯಕ್ಷರಾದ ಎಚ್‌ .ಪಿ.ಮಹೇಶ್‌, ಕೆ.ನಾಗಣ್ಣಗೌಡ, ನಗರ ಘಟಕ ಮಾಜಿ ಅಧ್ಯಕ್ಷಎಚ್‌.ಆರ್‌.ಅರವಿಂದ್‌,ಎಚ್‌.ಆರ್‌.ಅಶೋಕ್‌ ಕುಮಾರ್‌, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷ ಟಿ. ಶ್ರೀಧರ್‌ ಸೇರಿದಂತೆಮತ್ತಿತರರು ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಮಂದಿಯ ಪಟ್ಟಿ ರವಾನಿಸಲಾಗಿದೆ.

ಜಿಲ್ಲೆಯಲ್ಲಿ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದೆ. ಸುಮಾರು 200ಕ್ಕೂ ಹೆಚ್ಚು ಮುಖಂಡರ ಪಟ್ಟಿ ಸಿದ್ಧಪಡಿಸಿ, ವರಿಷ್ಠರಿಗೆ ಕಳುಹಿಸಲಾಗಿದೆ.ಯಾರಿಗೆ ನೀಡಿದರೂ ನಮ್ಮ ವಿರೋಧವಿಲ್ಲ.ಯಾರೇ ಅಧ್ಯಕ್ಷರು, ಉಪಾಧ್ಯಕ್ಷರು, ನಾಮನಿರ್ದೇಶನಗೊಂಡರೂ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು. ಕೆ.ಜೆ.ವಿಜಯ ಕುಮಾರ್‌, ಜಿಲ್ಲಾಧ್ಯಕ್ಷ, ಬಿಜೆಪಿ

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.