ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಶುರು

Team Udayavani, Nov 29, 2020, 4:51 PM IST

ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಶುರು

ಬೀದರ: ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ. ಆಗಲೇ ಕಾಂಗ್ರೆಸ್‌ ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಕೆಪಿಸಿಸಿ ರಚಿಸಿರುವ ಅಭ್ಯರ್ಥಿ ಆಯ್ಕೆ ಸಮಿತಿಯ ಮೊದಲ ಸಭೆ ನಗರದ ಖಾಸಗಿ ಹೊಟೇಲ್‌ನಲ್ಲಿ ಶನಿವಾರ ನಡೆದಿದೆ. ಸಮಿತಿಯ ಅಧ್ಯಕ್ಷರಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಸಂಯೋಜಕರಾಗಿರುವ ಶಾಸಕರಾಜಶೇಖರ ಪಾಟೀಲ ನೇತೃತ್ವದಲ್ಲಿ ಸದಸ್ಯರು ಸಭೆ ನಡೆಸಿದ್ದಾರಲ್ಲದೇ ಟಿಕೆಟ್‌ ಆಕಾಂಕ್ಷಿಗಳೊಂದಿಗೆ ಸಮಿತಿ ಪ್ರತ್ಯೇಕ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದೆ.

ಬಳಿಕ 20 ಜನ ಟಿಕೆಟ್‌ ಆಕಾಂಕ್ಷಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ 8 ಜನ ಆಕಾಂಕ್ಷಿಗಳು ವೈಯಕ್ತಿಕ ಟಿಕೆಟ್‌ ಆಗ್ರಹದ ಜತೆಗೆ ಸ್ಥಳೀಯರಿಗೆ ಮಾತ್ರ ಟಿಕೆಟ್‌ ನೀಡಬೇಕು ಎಂದು ಮನವಿ ಮಾಡಿದರೆ, ಇನ್ನೂ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಈ ಬಾರಿ ಅಲ್ಪಸಂಖ್ಯಾತರ ಒಬ್ಬರಿಗೆ ಟಿಕೆಟ್‌ ನೀಡಬೇಕು ಎಂದು ಒತ್ತಾಯಿಸಿದರು.  ಮತ್ತೆ ಕೆಲವರು ಹೈಕಮಾಂಡ್‌ ನಿರ್ಣಯಕ್ಕೆ ಬದ್ಧರಾಗಿ ಇರುತ್ತೇವೆ ಎಂದು ಹೇಳಿದರು.

ಎಂಎಲ್‌ಸಿ ವಿಜಯಸಿಂಗ್‌ ಅವರು ಎಂಎಲ್‌ಸಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ ಮತ್ತು ಕ್ಷೇತ್ರದಲ್ಲಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ.ಹೀಗಾಗಿ ತಮಗೆ ಟಿಕೆಟ್‌ ನೀಡಬೇಕು ಎಂದು ಕೋರಿದರು. ಇದೇ ವೇಳೆ ವಿಜಯಸಿಂಗ್‌ ಮತ್ತು ಗೌತಮನಾರಾಯಣರಾವ್‌ ಅವರ ಪರ ಬೆಂಬಲಿಗರು ಸಮಿತಿಗೆ ಮನವಿ ಸಲ್ಲಿಸಿ ಟಿಕೆಟ್‌ಗಾಗಿ ಗಮನ ಸೆಳೆದರು.

ಆಕಾಂಕ್ಷಿಗಳೊಂದಿಗೆ ಸಭೆ ಬಳಿಕ ಮಾತನಾಡಿದ ಸಮಿತಿ ಅಧ್ಯಕ್ಷ ಈಶ್ವರ ಖಂಡ್ರೆ, ಆಯ್ಕೆ ಸಮಿತಿ ಆಕಾಂಕ್ಷಿತ ಅಭ್ಯರ್ಥಿಗಳ ವರದಿಯನ್ನು ಶೀಘ್ರ ವರಿಷ್ಠರಿಗೆ ಸಲ್ಲಿಸಲಿದ್ದು, ಅರ್ಹರನ್ನು ಪಕ್ಷ ಆಯ್ಕೆ ಮಾಡಲಿದೆ. ಉಳಿದವರೆಲ್ಲರೂ ಪಕ್ಷದ ನಿರ್ಣಯಕ್ಕೆ ಬದ್ಧರಾಗಿ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಬೇಕು ಎಂದು ತಿಳಿಸಿದರು. ಸಮಿತಿ ಸದಸ್ಯರಾದ ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌, ಶಾಸಕ ಶರಣಪ್ರಕಾಶ ಪಾಟೀಲ, ಸಂತೋಷ ಲಾಡ, ಮಾಜಿ ಉಪ ಸಭಾಪತಿ ಬಿಆರ್‌ ಪಾಟೀಲ, ಮಾಜಿ ಸಂಸದ ನರಸಿಂಗರಾವ್‌ ಸೂರ್ಯವಂಶಿ, ಮಾಜಿ ಎಂಎಲ್‌ಸಿ ಅಲ್ಲಮಪ್ರಭು ಪಾಟೀಲ ಭಾಗವಹಿಸಿದ್ದರು. ಶಾಸಕ ಪ್ರಿಯಾಂಕ ಖರ್ಗೆ ಗೈರಾಗಿದ್ದರು.

ಟಾಪ್ ನ್ಯೂಸ್

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.