ಯಾದಗಿರಿ: ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆ
Team Udayavani, Nov 29, 2020, 4:56 PM IST
ಯಾದಗಿರಿ: ಕೈಗಾರಿಕಾ ಪ್ರದೇಶದಲ್ಲಿ ನಿವೇಶನ ಹಂಚಿಕೆ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಪರಿಶೀಲಿಸಿ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿ ಕಾರಿ ಡಾ| ರಾಗಪ್ರಿಯ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಕಡೇಚೂರ ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ಹಂಚಿಕೆಯಾಗಿರುವ ಘಟಕಗಳಿಗೆ ಕೈಗಾರಿಕೆ ಸ್ಥಾಪಿಸುವ ಕುರಿತು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಕೆ.ಐ.ಎ.ಡಿ.ಬಿ ಅಧಿಕಾರಿಗಳು ಕ್ರಮ ವಹಿಸುವಂತೆ ತಿಳಿಸಿದರು.
ವಿದ್ಯುತ್ ಸಂಪರ್ಕ ಕಲ್ಪಿಸಲು ಕೈಗೊಳ್ಳಲಾಗಿರುವ ವಿದ್ಯುತ್ ಉಪ ಕೇಂದ್ರದ ಕಾಮಗಾರಿಗಳನ್ನು ನಿಗ ತ ಅವಧಿ ಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಮುಂದೆ ಬರುವ ಯೋಜನೆಗಳ ಅನುಮೋದನೆ ಹಾಗೂ ಜಮೀನು ಹಂಚಿಕೆ ಕುರಿತು ಪರಿಷ್ಕೃತ ಮಾರ್ಗಸೂಚಿಗಳ ಬಗ್ಗೆ ಸರ್ಕಾರದ ಆದೇಶದ ಕುರಿತು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಾಣಿಕ್ .ವಿ. ರಘೋಜಿ ಸಭೆಗೆ ಮಾಹಿತಿ ನೀಡಿದರು.
ಸುಭಾಷ ನಾಯಕ, ದೇವಿಕಾ, ರಾಘವೇಂದ್ರ, ರೇಖಾ, ಎನ್ ಮ್ಯಾಗೇರಿ, ಎಂ.ಎ ಸಲೀಮ್, ಕಾಸಿಯಾ ಪ್ರತಿನಿ ಹಾಗೂ ಚೇಂಬರ್ ಆಫ್ ಕಾಮರ್ಸ್‌ನ ಪ್ರತಿನಿಧಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.