ಕಾರ್ಮಿಕ ವಿರೋಧಿ ನೀತಿಗೆ ವಿರೋಧ
Team Udayavani, Nov 29, 2020, 5:58 PM IST
ಕೂಡ್ಲಿಗಿ: ಕಾರ್ಮಿಕ ವಿರೋಧಿ ನೀತಿ ಕಾನೂನು ಜಾರಿಗೆ ತರುವುದನ್ನು ವಿರೋ ಧಿಸಿ ದೇಶ ವ್ಯಾಪಿ ನಡೆಯುವ ಹೋರಾಟ ಬೆಂಬಲಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ತಾಲೂಕು ಸಮಿತಿ ವತಿಯಿಂದ ತಹಶೀಲ್ದಾರ್ ಎಸ್. ಮಹಾಬಲೇಶ್ವರ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.
ದೇಶದಲ್ಲಿ ಕಾರ್ಮಿಕ ಮತ್ತು ರೈತ ಮಹಿಳೆಯರ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳುತಂದಿರುವ ನೀತಿ ವಿರೋಧಿ ಸಿ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ತಾಲೂಕು ಅಧ್ಯಕ್ಷ ಬಿ.ಮಹಾಂತಮ್ಮ ಅಭಿಪ್ರಾಯಪಟ್ಟರು.
ಎಐಟಿಯುಸಿ ಗೌರವಾಧ್ಯಕ್ಷ ಎಚ್.ವೀರಣ್ಣ ಮಾತನಾಡಿ, ಸರ್ಕಾರ ದುಡಿಯುವ ಮಹಿಳೆಯರಿಗೆ ಸಮಾನ ವೇತನ ನೀಡದೇ ಎಲ್‌ಕೆಜಿ ಮತ್ತು ಯುಕೆಜಿ ಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭಿಸದೇ ಕಾರ್ಯಕರ್ತೆಯರನ್ನು ಕೇಂದ್ರದಿಂದ ಹೊರ ಹಾಕುವ ಹುನ್ನಾರ ನಡೆಸುತ್ತಿದ್ದಾರೆ ಎಂದರು. ಸಿಪಿಐ ಪಂಪಾಪತಿ, ಪಿಎಸೈ ತಿಮ್ಮಣ್ಣ ಚಾಮನೂರ್ ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ಒದಗಿಸಲಾಗಿತ್ತು.
ಉಪಾಧ್ಯಕ್ಷರು ಕೆ. ರಾಮಕ್ಕ, ಪ್ರಧಾನ ಕಾರ್ಯದರ್ಶಿ ಎನ್.ಸುಮ, ಸಹ ಕಾರ್ಯದರ್ಶಿ ಜಿ.ಬಸಮ್ಮ, ಸಂಚಾಲಕರಾದ ಕೆ.ಎನ್. ಕವಿತಾ, ಎ.ಶಾಂತಮ್ಮ, ಸುಜಾತಾ, ಶಾರದಾ, ಪದ್ಮಾವತಿ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಮನವಿ :
ಸಿರುಗುಪ್ಪ: ಜನಸಾಮಾನ್ಯರಿಗೆ ಮಾರಕವಾದ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ಅಖೀಲ ಭಾರತ ಸಮನ್ವಯ ತಾಲೂಕು ಸಮಿತಿ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಮಿತಿ ತಾಲೂಕು ಅಧ್ಯಕ್ಷ ವಾ. ಹುಲುಗಯ್ಯ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಕರ್ನಾಟಕ ಭೂಸುಧಾರಣೆ ಕಾಯ್ದೆ ಸೇರಿ 19ಕ್ಕೂ ಹೆಚ್ಚು ಕಾಯ್ದೆಗಳನ್ನು ತಿದ್ದುಪಡಿ ಮಾಡಿರುವುದು ಬಂಡವಾಳ ಶಾಹಿಗಳಿಗೆ ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ಹಾಗೂ ಕಪ್ಪು ಹಣ ಹೊಂದಿದವರಿಗೆ ಹೆಚ್ಚು ಭೂಮಿ ಕ್ರೂಡೀಕರಿಸಲು, ಕಪ್ಪು ಹಣ ಬಿಳಿಯಾಗಿಸಿಕೊಳ್ಳಲು ಇಂಥ ಕಂಪನಿಗಳ ಮಾಲೀಕರಿಗೆ ಅನುಕೂಲವಾಗಲಿದೆ. ಈ ಕಾನೂನುಗಳನ್ನು ಸರ್ಕಾರ ಹಿಂಪಡೆಯಬೇಕು. ಕರ್ನಾಟಕದಲ್ಲಿ ಅನೇಕ ವರ್ಷಗಳಿಂದ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಹಕ್ಕುಪತ್ರ ಕೊಡಲು ಫಾರಂ ನಂ.50, 53, 57ರ ಅಡಿಯಲ್ಲಿ ಅರ್ಜಿಗಳನ್ನು ಸರ್ಕಾರಕ್ಕೆ ಇಲ್ಲಿಯವರೆಗೆ ಸಲ್ಲಿಸುತ್ತ ಬಂದಿದ್ದರೂ ಅವರಿಗೆ ಹಕ್ಕುಪತ್ರಗಳನ್ನು ನೀಡದೆ ಇರುವುದು ಖಂಡನೀಯ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಿದ್ದುಪಡಿ ಮಾಡಿರುವ 20ಕ್ಕೂ ಹೆಚ್ಚು ಕಾಯ್ದೆಗಳನ್ನು ಕೈಬಿಡಬೇಕೆಂದು ಒತ್ತಾಯಿಸಿದರು.
ಮುಖಂಡರಾದ ವಿ.ಮಾರುತಿ, ಜೆ. ಸಿದ್ದರಾಮಗೌಡ, ಎಚ್.ಎಂ. ವೀರೇಶಪ್ಪ, ಓಬಳೇಶಪ್ಪ, ಎಚ್. ತಿಪ್ಪಯ್ಯ, ಲತೀಫ್ ಖಾಜ ಮತ್ತು ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.