ಶೀಘ್ರವೇ 16 ಸಾವಿರ ಪೊಲೀಸರ ನೇಮಕ: ಬೊಮ್ಮಾಯಿ
Team Udayavani, Nov 30, 2020, 9:07 AM IST
ಗದಗ, ನ. 29: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 16 ಸಾವಿರ ಸಿಬಂದಿಯ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ಸಿಕ್ಕಿದ್ದು, ಸದ್ಯದಲ್ಲೇ ನೇಮಕವಾಗಲಿದೆ. ಇನ್ನುಳಿದ ಹುದ್ದೆಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ಹಾಗೂ ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಈ ಕುರಿತಂತೆ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ ಎಂದರು.
17 ಮಂದಿಗೆ ಗೌರವ :
ಕಳೆದ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತದ ಕೊರತೆಯಿಂದ ವಿಪಕ್ಷದಲ್ಲಿ ಕುಳಿತುಕೊಳ್ಳುವಂತಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬ ಜನರ ಅಭಿ ಲಾಷೆಯಂತೆ ಇತರ ಪಕ್ಷಗಳ 17 ಶಾಸಕರು ರಾಜೀನಾಮೆ ನೀಡಿ ಪಕ್ಷ ಸೇರಿದ್ದರಿಂದ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅವರನ್ನು ನಾವು ಎಂದೂ ಮರೆಯುವುದಿಲ್ಲ. ಅವರಿಗೆ ಕೊಟ್ಟ ಭರವಸೆ ಈಡೇರಿಸಲು ಸಿಎಂ ಯಡಿಯೂರಪ್ಪ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣವು ಪ್ರತಿಕ್ರಿಯೆ ನೀಡುವಷ್ಟು ದೊಡ್ಡ ವಿಚಾರ ವಲ್ಲ. ಅವರು ಗುಣಮುಖರಾಗುತ್ತಿದ್ದಾರೆ. ಅವರಿಂದಲೇ ಸತ್ಯ ಹೊರಗಡೆ ಬರುತ್ತದೆ. ಊಹಾಪೋಹಗಳಿಗೆ ನಾನು ಉತ್ತರ ಕೊಡಲು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.