ಶೀಘ್ರದಲ್ಲೇ ಸಂಪುಟ ವಿಸ್ತರಣೆ; ಕಾನೂನಾತ್ಮಕವಾಗಿ ಲಿಂಗಾಯತ ಓಬಿಸಿ ಸೇರ್ಪಡೆ: ಕಾರಜೋಳ
Team Udayavani, Nov 30, 2020, 1:45 PM IST
ವಿಜಯಪುರ: ರಾಜ್ಯ ಸಂಪುಟ ವಿಸ್ತರಣೆ ಮಾಡಲು ಹೈಕಮಾಂಡ್ ನಿರ್ದೇಶನಕ್ಕಾಗಿ ಕಾಯಲಾಗುತ್ತಿದೆ. ಕೇಂದ್ರ ನಾಯಕರು ಪೂರ್ವ ನಿರ್ಧಾರಿತ ಕಾರ್ಯಕ್ರಮಗಳ ಪ್ರವಾಸದಲ್ಲಿ ಇದ್ದಾರೆ. ಹೈಕಮಾಂಡ್ ಭೇಟಿಗೆ ಹೋಗಿದ್ದ ಸಿಎಂ ಅವರಿಗೆ ವರಿಷ್ಠರು ಉದ್ದೇಶ ಪೂರ್ವಕವಾಗಿ ಭೆಟಿಗರ ಅವಕಾಶ ನೀಡುತ್ತಿಲ್ಲ ಎಂಬುದು ಸರಿಯಲ್ಲ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಆಗಲಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹಸಚಿವ ಅಮಿತ್ ಶಾ ಪ್ರವಾಸದಲ್ಲಿದ್ದ ಕಾರಣ ಸಿಎಂ ಭೇಟಿಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.
ಮುಖ್ಯಮಂತ್ರಿ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ, ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.
ಲಿಂಗಾಯತ ಸಮುದಾಯಕ್ಕೆ ಓಬಿಸಿ ಮಾನ್ಯತೆ ನೀಡುವ ವಿಚಾರದಲ್ಲಿ ಸಿಎಂ ಅಥವಾ ನಮ್ಮ ಸರಕಾರ ಆತುರದ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿರುವ ನಾವು ಈ ವಿಷಯದಲ್ಲಿ ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ನಿರ್ಧಾರ ಕೈಗೊಳ್ಳಲಾಗುತ್ತದೆ. ಹೀಗಾಗಿ ಕಾನೂನು ಸಲಹೆ ಪಡೆಯಲಾಗುತ್ತದೆ ಎಂದು ಸಮಜಾಯಿಷಿ ನೀಡಿದರು.
ಇದನ್ನೂ ಓದಿ:ದೆಹಲಿ ನಾಯಕರ ಮುಂದೆ ರಾಜ್ಯದ ನಾಯಕತ್ವ ಬದಲಾವಣೆ ವಿಚಾರವೇ ಇಲ್ಲ: ಅಶೋಕ್
ಅನ್ಯ ಪಕ್ಷಗಳಿಂದ ಬಿಜೆಪಿಗೆ ವಲಸೆ ಬಂದು ತ್ಯಾಗ ಮಾಡಿದವರಿಗೆ ಸಚಿವ ಸ್ಥಾನ ಸಿಗಬೇಕು. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಕೇಂದ್ರ ನಾಯಕರು ಈ ವಿಷಯದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದ ಬಗ್ಗೆ ನಿಖರವಾಗಿ ನನಗೆ ತಿಳಿದಿಲ್ಲ. ಪ್ರಕರಣವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ರಾಜಕೀಯಕ್ಕೆ ಬಳಸಿಕೊಳ್ಳುವ ಕ್ರಮ ಸರಿಯಲ್ಲ ಎಂದರು.
ಗ್ರಾಮ ಸ್ವರಾಜ್ಯ ಸಮಾವೇಶದ ಮೂಲಕ ರಾಜ್ಯದಲ್ಲಿ ಗ್ರಾ.ಪಂ. ಚುನಾವಣೆಯಲ್ಲಿ ಕಾರ್ಯಕರ್ತರನ್ನು ಗೆಲ್ಲಿಸುವ ಯೋಜನೆ ರೂಪಿಸಲಾಗುತ್ತದೆ. ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯಾದ್ಯಂತ ಗ್ರಾಮ ಸ್ವರಾಜ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ವಿಜಯಪುರ ಜಿಲ್ಲೆಯ ನಾಗಠಾಣ ಕ್ಷೇತ್ರದ ಜೆಡಿಎಸ್ ಶಾಸಕ ದೇವಾನಂದ ಚೌಹಾಣ ಜೀವ ಬೆದರಿಕೆ ಇದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಜನರಿಂದ ದೂರವಾಗಿರುವ ಶಾಸಕ ದೇವಾನಂದ ಭ್ರಮೆಯಲ್ಲಿದ್ದಾರೆ. ಶಾಸಕ ದೇವಾನಂದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಹೀಗಾಗಿ ಜೀವಬೆದರಿಕೆ ಎನ್ನುವ ಮೂಲಕ ಜನರ ಅನುಕಂಪ ಗಿಟ್ಡಿಸಲು ಯತ್ನಿಸುತ್ತಿದ್ದಾರೆ. ಇಷ್ಟಕ್ಕೂ ಅವರಿಗೆ ಯಾರಿಂದ ಜೀವಬೆದರಿಕೆ ಇದೆ ಎಂದು ಪ್ರಶ್ನಿಸಿದರು.
ಕ್ಷೇತ್ರದ ಅಭಿವೃದ್ಧಿಗೆ ಹಣ ತಡೆಯಲಾಗುತ್ತದೆ ಎನ್ನುವ ದೇವಾನಂದ ಆರೋಪ ಆರೋಪ ಅಲ್ಲಗಳೆದ ಕಾರಜೋಳ, ಕಳೆದ 27 ವರ್ಷಗಳಿಂದಲೂ ನಾನು ದೇವಾನಂದ ಅವರನ್ನು ಬಲ್ಲೆ. ಆತ ಹೇಗೆಂದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಛೇಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.