ಜಯಣ್ಣ-ಒಡೆಯರ್‌ ಹೋರಾಟ ಮಾದರಿ: ಆಂಜನೇಯ

Team Udayavani, Nov 30, 2020, 4:23 PM IST

ಜಯಣ್ಣ-ಒಡೆಯರ್‌ ಹೋರಾಟ ಮಾದರಿ: ಆಂಜನೇಯ

ಚಿತ್ರದುರ್ಗ: ಅಧಿಕಾರ ಅವಕಾಶ ವಂಚಿತರಾಗಿ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ದಲಿತ ನಾಯಕ ಎಂ. ಜಯಣ್ಣ ಹಾಗೂ ಅಹಿಂದ ಹೋರಾಟಗಾರ ಮುರುಘರಾಜೇಂದ್ರ ಒಡೆಯರ್‌ ಜನಪ್ರಿಯ ನಾಯಕರಾಗಿ ಎಲ್ಲರ ಮನದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ ಎಂದು ಮಾಜಿ ಸಚಿವ ಎಚ್‌. ಆಂಜನೇಯ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಗರದಐಎಂಎ ಸಭಾಂಗಣದಲ್ಲಿ ಆಯೋಜಿಸಿದ್ದ ಹೋರಾಟಗಾರರಾದ ಎಂ. ಜಯಣ್ಣ ಹಾಗೂ ಮುರುಘರಾಜೇಂದ್ರ ಒಡೆಯರ್‌ ನುಡಿನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಬ್ಬರು ಹೋರಾಟಗಾರರುತಮ್ಮ ವೈಯಕ್ತಿಕ ಬದುಕಿನ ಕಡೆಗೆ ಎಂದಿಗೂ ಗಮನ ಕೊಟ್ಟವರಲ್ಲ. ದಲಿತ ಚಳವಳಿ, ರೈತ ಚಳವಳಿ, ನೀರಾವರಿಗಾಗಿ ಹೋರಾಟ ಹೀಗೆ ಒಂದಲ್ಲ ಒಂದು ರೀತಿಯ ಹೋರಾಟಕ್ಕಾಗಿಯೇ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದು ಸ್ಮರಿಸಿದರು.

ಜಿಲ್ಲೆ ಇಬ್ಬರು ಹೋರಾಟಗಾರರನ್ನು ಕಳೆದುಕೊಂಡು ಬಡವಾಗಿದೆ. ಈ ಇಬ್ಬರು ಹೋರಾಟಗಾರರು ಯಾವುದಾದರೂ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೆ ರಾಜಕೀಯ ಅಧಿಕಾರದಲ್ಲಿರುತ್ತಿದ್ದರು. ನಾನು ಕೂಡ ಶಾಸಕ, ಮಂತ್ರಿಯಾಗುತ್ತೇನೆಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಕಾಂಗ್ರೆಸ್‌ ಪಕ್ಷದಲ್ಲಿ ನಿಷ್ಠೆ ಮತ್ತು ಬದ್ಧತೆಯಿಂದ ಇದ್ದ ಕಾರಣಕ್ಕಾಗಿ ಅಧಿಕಾರ ಅನುಭವಿಸಲು ಸಾಧ್ಯವಾಯಿತು ಎಂದು ತಿಳಿಸಿದರು.

ಆರ್ಥಿಕ ಚಿಂತಕ ಡಾ| ಜಿ.ಎನ್‌. ಮಲ್ಲಿಕಾರ್ಜುನಪ್ಪ ಮಾತನಾಡಿ, ಜನಪರ ಹೋರಾಟದಿಂದ ಮಾತ್ರ ಸಮಾಜದಲ್ಲಿ ಪರಿವರ್ತನೆ ತರಬಹುದು. ಬುದ್ಧ, ಬಸವ, ಅಂಬೇಡ್ಕರ್‌, ಗಾಂಧಿ  ಕೂಡ ಚಳವಳಿಗಾರರೇ ಆಗಿದ್ದಾರೆ. ಅಂತರಂಗದಲ್ಲಿ ಆಗುವ ತಲ್ಲಣಗಳೇಬಹಿರಂಗ ಚಳವಳಿಗೆ ಕಾರಣವಾಗುತ್ತವೆ. ಸಮಾಜ ಕಟ್ಟುವ ಹೋರಾಟಗಾರರು ಎಂದಿಗೂ ವೈಯಕ್ತಿಕಬದುಕಿನ ಕಡೆಗೆ ಗಮನ ಕೊಡುವುದಿಲ್ಲ. ಎಂ. ಜಯಣ್ಣ, ಮುರುಘರಾಜೇಂದ್ರ ಒಡೆಯರ್‌ ಕೂಡ ದಲಿತ ಚಳವಳಿ, ರೈತ ಚಳುವಳಿಗೆಮೀಸಲಾಗಿದ್ದರೇ ಹೊರತು ಸ್ವಂತಕ್ಕಾಗಿ ಎಂದಿಗೂ ಬದುಕಿದವರಲ್ಲ ಎಂದರು.

ಕಸಾಪ ಜಿಲ್ಲಾಧ್ಯಕ್ಷ ಡಾ| ದೊಡ್ಡಮಲ್ಲಯ್ಯ ಅಧ್ಯಕ್ಷತೆ ವಹಿಸಿದ್ದರು. ಫಾ| ಎಂ.ಎಸ್‌. ರಾಜು, ಎಂ. ಜಯಣ್ಣ ಮತ್ತು ಮುರುಘರಾಜೇಂದ್ರ ಒಡೆಯರ್‌ ಪುತ್ರರು ಮತ್ತು ರಂಗಾ ನಾಯಕ್‌ವೇದಿಕೆಯಲ್ಲಿದ್ದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಂ.ಆರ್‌. ದಾಸೇಗೌಡ, ಹಿರಿಯ ಪತ್ರಕರ್ತ ಜಿ.ಎಸ್‌. ಉಜ್ಜಿನಪ್ಪ, ಕಸಾಪ ಗೌರವ ಕಾರ್ಯದರ್ಶಿ ಕೆ.ಎಂ. ಯೂಸೂಫ್‌, ಷರಿಫಾಬೀ, ಜಯಣ್ಣ ಮತ್ತು ಮುರುಘರಾಜೇಂದ್ರ ಒಡೆಯರ್‌ರವರ ಅಭಿಮಾನಿಗಳು ಹಾಗೂ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.