“ಕರ್ನಾಟಕ-ಎಲ್‌ಎಂಎಸ್’ ಚಾಲನೆ: ಬಡ ವಿದ್ಯಾರ್ಥಿಗಳಿಗೆ ಅನುಕೂಲ: ಮುಖ್ಯಮಂತ್ರಿ
Team Udayavani, Dec 1, 2020, 1:28 AM IST
ಕರ್ನಾಟಕ ಲರ್ನಿಂಗ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ಗೆ ಸಿಎಂ ಚಾಲನೆ ನೀಡಿದರು.
ಬೆಂಗಳೂರು: ಸರಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲ ಕ್ಕಾಗಿ ರೂಪಿಸಿರುವ ನೂತನ ಕಲಿಕಾ ನಿರ್ವಹಣ ವ್ಯವಸ್ಥೆ “ಕರ್ನಾಟಕ-ಎಲ್‌ಎಂಎಸ್’ (ಲರ್ನಿಂಗ್ ಮ್ಯಾನೇಜೆ¾ಂಟ್ ಸಿಸ್ಟಮ್)ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಿದರು.
ಸೋಮವಾರ “ಕೃಷ್ಣಾ’ದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ವಿದ್ಯಾರ್ಥಿಗಳು ತಾವಿದ್ದ ಲಿಂದಲೇ ಕಲಿಯಬಹುದು. “ಲರ್ನಿಂಗ್ ಫ್ರಮ್ ಎನಿವೇರ್’ ಪರಿಕಲ್ಪನೆಯನ್ನು ಇದು ಸಾಕಾರಗೊಳಿಸುತ್ತದೆ. ಇದು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚು ಸಹಕಾರಿಯಾಗಿದೆ ಎಂದರು.
ದೇಶದಲ್ಲೇ ಮೊದಲು
ಡಿಜಿಟಲ್ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ದೇಶದಲ್ಲೇ ಪ್ರಥಮ ವಾಗಿ ಎಲ್‌ಎಂಎಸ್ ಕಾರ್ಯ ಕ್ರಮವನ್ನು ಜಾರಿಗೆ ತರುತ್ತದೆ. ರಾಜ್ಯದ 430 ಸರಕಾರಿ ಪ್ರಥಮ ದರ್ಜೆ ಕಾಲೇಜು, 87 ಸರಕಾರಿ ಪಾಲಿ ಟೆಕ್ನಿಕ್ ಕಾಲೇಜು ಮತ್ತು 14 ಸರಕಾರಿ ಎಂಜಿನಿ ಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಇದರಿಂದ 4.5 ಲಕ್ಷ ವಿದ್ಯಾರ್ಥಿಗಳು ಹಾಗೂ 24 ಸಾವಿರ ಅಧ್ಯಾಪಕರಲ್ಲಿ ಸಕಾರಾತ್ಮಕ ಪರಿಣಾಮ ಉಂಟಾಗಲಿದೆ ಎಂದು ಹೇಳಿದರು. ಡಿಸಿಎಂ ಡಾ| ಅಶ್ವತ್ಥನಾರಾಯಣ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಉಪಸ್ಥಿತರಿದ್ದರು.
ರಾ. ಶಿಕ್ಷಣ ನೀತಿ ಜಾರಿಗೆ ಶೀಘ್ರ ಅನುಮೋದನೆ
ಬೆಂಗಳೂರು, ನ. 30: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನೂತನ ಶಿಕ್ಷಣ ನೀತಿಯನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ.ರಂಗನಾಥ್ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಕಾರ್ಯಪಡೆಯು ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ತನ್ನ ವರದಿಯನ್ನು ಮುಖ್ಯಮಂತ್ರಿಗೆ ಒಪ್ಪಿಸಿತು. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ, ಡಾ| ಕೆ.ಕಸ್ತೂರಿ ರಂಗನ್ ನೇತೃತ್ವದ ಸಮಿತಿ ರಚಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕರ್ನಾಟಕ ಛಾಪು ಹೆಚ್ಚಿದೆ. ಕೇಂದ್ರ ಸರಕಾರ ಈ ನೀತಿ ಕುರಿತಂತೆ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದ್ದು, ಜಾರಿ ಕುರಿತಂತೆ ಮೇಲುಸ್ತುವಾರಿ ನಡೆಸುತ್ತಿದೆ. ನೀತಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಒಂದು ಹೊಸ ರೂಪ ಪಡೆದುಕೊಳ್ಳಲಿದ್ದು, ನಾಡಿನ ಎಲ್ಲ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ ಎಂದರು. ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥ ನಾರಾಯಣ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಮೂಲಕ ಕರ್ನಾಟಕ ಬೇರೆ ರಾಜ್ಯಗಳಿಗೆ ಮಾದರಿಯಾಗಲಿದೆ. ಈ ಶತಮಾನದ ಮೊದಲ ಶಿಕ್ಷಣ ನೀತಿ ಇದಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಒಂದು ಆಂದೋಲನದ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಸರಕಾರ ಮುಂದಾಗಿದೆ ಎಂದರು. ಕಾರ್ಯಪಡೆ ಅಧ್ಯಕ್ಷ ಎಸ್.ವಿ.ರಂಗನಾಥ್, ಸದಸ್ಯರಾದ ಪ್ರೊ| ಬಿ.ತಿಮ್ಮೇಗೌಡ, ಡಾ| ಎಂ.ಕೆ. ಶ್ರೀಧರ್, ಅರುಣ್ ಶಹಾಪುರ, ಡಾ| ಅನುರಾಗ್ ಬೆಹರ್ ಉಪಸ್ಥಿತರಿದ್ದರು.
ವ್ಯವಸ್ಥೆಯ ವಿಶೇಷತೆ
ಡಿಜಿಟಲ್ ಕಲಿಕೆಗೆ ಎಲ್ಲೆಡೆ ಹೆಚ್ಚು ಒತ್ತು ಸಿಗುತ್ತಿದೆ. ಸರಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ. ಅವರ ಕಲಿಕೆಯ ಮಟ್ಟವನ್ನು ಈ ಹೊಸ ಪದ್ಧತಿ ಸುಧಾರಿಸಲಿದೆ. ಎಲ್‌ಎಂಎಸ್ ಆಧಾರಿತ ಡಿಜಿಟಲ್ ಕಲಿಕೆ ಪದ್ಧತಿಯು ವಿಷಯ ಸಂವಹನ, ವಿಷಯ ಲಭ್ಯತೆ ಮತ್ತು ಮೌಲ್ಯಮಾಪನದಲ್ಲಿ ಗುರುತರ, ಮಹತ್ವದ ಬದಲಾವಣೆಗಳನ್ನು ತರುತ್ತದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಬೋಧಕರು, ವಿವಿಧ ಭಾಷೆಗಳಲ್ಲಿ 14 ಸಂಯೋಜಿತ ವಿವಿಗಳ ಪಠ್ಯಕ್ಕೆ ಪೂರಕವಾಗಿ ಸ್ವ-ಕಲಿಕೆ ಮತ್ತು ಬೋಧನೆಗೆ ಸೂಕ್ತವಾದ ಇ-ಕಂಟೆಂಟ್, ಪಿಪಿಟಿ, ವೀಡಿಯೋ, ಅಸೈನ್ಮೆಂಟ್, ಇ-ಅಧ್ಯಯನ ಮಾಹಿತಿ, ಪ್ರಶ್ನೋತ್ತರ ವಿವರ, ಕ್ವಿಜ್ ರೂಪದಲ್ಲಿ ಅಭಿವೃದ್ಧಿ ಗೊಳಿಸಿದ್ದು, ವಿಶ್ವವಿದ್ಯಾಲಯದ ಕೇಂದ್ರಿಕೃತ ಪಠ್ಯಕ್ರಮವೂ ಬೋಧಕರಿಗೆ ಲಭ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.