ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ಭಾಷೆ ಬಿಟ್ಟು ಇತರ ಭಾಷೆಗೆ ಮನ್ನಣೆ : ಕಸಾಪ ತೀವ್ರ ಆಕ್ಷೇಪ
Team Udayavani, Dec 1, 2020, 2:58 PM IST
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಬಿಟ್ಟು ಇತರ ಭಾಷೆಗೆ ಮನ್ನಣೆ ನೀಡಿದ್ದನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ವನ್ನು ತೆಗೆದು ಹಾಕಿದ್ದು ಸರಿಯಾದ ಕ್ರಮವಲ್ಲ.ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡ ಕ್ಕೆ ಆಧ್ಯತೆ. ನಾಮಫಲಕದಲ್ಲಿ ಮೊದಲು ಕನ್ನಡ ಇರಬೇಕು ಆನಂತರ ಇತರ ಭಾಷೆ. ಒಂದು ಧಾರ್ಮಿಕ ಸಂಸ್ಥೆ ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ. ನಾಮ ಫಲಕದ ಈ ಪ್ರಕರಣ ಸರ್ಕಾರದ ಕಾನೂನಿನ ಸ್ವಷ್ಟ ಉಲ್ಲಂಘನೆಯಾಗಿದೆ ಇದನ್ನು ಕೂಡಲೇ ಸರಿಪಡಿಸಬೇಕು ಎಂದರು. ಈ ಕುರಿತು ಜಿಲ್ಲಾಡಳಿತಕ್ಕೆ ಮನವಿಯನ್ನು ಸಲ್ಲಿಸಲಾಗುವುದು ಜೊತೆಗೆ ಕನ್ನಡ ಭಾಷೆಯಲ್ಲಿ ನಾಮಫಲಕ ಹಾಕುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದಿದ್ದಾರೆ.