ಶೀಘ್ರ ಪುರಸಭೆ ಕಟ್ಟಡ ಉದ್ಘಾಟನೆ
Team Udayavani, Dec 1, 2020, 3:09 PM IST
ಭಾಲ್ಕಿ: ಪಟ್ಟಣದ ಸರಕಾರಿ ಉರ್ದು ಪ್ರಾಥಮಿಕ ಶಾಲೆ ಎದುರು ನೂತನವಾಗಿ ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಪುರಸಭೆಯ ನೂತನ ಕಟ್ಟಡಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಈಶ್ವರ ಖಂಡ್ರೆ ಭೇಟಿ ನೀಡಿ ಅಂತಿಮ ಹಂತದ ಕಾಮಗಾರಿ ವೀಕ್ಷಿಸಿದರು.
ನಂತರ ಮಾತನಾಡಿದ ಅವರು, ನಾನು ಪೌರಾಡಳಿತ ಇಲಾಖೆ ಸಚಿವನಾಗಿದ್ದಾಗ ಪುರಸಭೆಯ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ಒದಗಿಸಿದ್ದೇನೆ. ಕಾಮಗಾರಿ ನೀರಿಕ್ಷೆಯಂತೆ ನಡೆದಿದ್ದು, ಕಟ್ಟಡ ಸುಸಜ್ಜಿತವಾಗಿ ನಿರ್ಮಾಣಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಕಟ್ಟಡ ಕಲ್ಯಾಣ ಕರ್ನಾಟಕ ವಿಭಾಗಕ್ಕೆ ಮಾದರಿಯಾಗಲಿದೆ. ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಹಂತದ ಸಣ್ಣಪುಟ್ಟ ಕೆಲಸಗಳುನಡೆಯುತ್ತಿವೆ. ಜ.15ರಂದು ಕಟ್ಟಡ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದ್ದು, ಬಾಕಿ ಉಳಿದಿರುವ ಕೆಲಸ ಪೂರ್ಣಗೊಳಿಸುವಂತೆ ಅಲ್ಲಿದ್ದ ಗುತ್ತಿಗೆದಾರರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ಮುಖಂಡ ಪ್ರಕಾಶ ಮಾಶೆಟ್ಟೆ, ಪುರಸಭೆ ಸದಸ್ಯ ವಿಜಯಕುಮಾರ ರಾಜಭವನ, ಗುತ್ತಿಗೆದಾರ ಚನ್ನಬಸವ ಬಳತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.