ಮೆಕ್ಕೆಜೋಳ ಸ್ಥಳೀಯವಾಗಿಯೇ ಖರೀದಿಸಿ
Team Udayavani, Dec 1, 2020, 3:54 PM IST
ದಾವಣಗೆರೆ: ಜಿಲ್ಲೆಯಲ್ಲಿರುವ ಮೆಕ್ಕೆಜೋಳ ಸಂಸ್ಕರಣೆ ಆಧಾರಿತ ಸ್ಥಳೀಯ ಕೈಗಾರಿಕೆಗಳು ಸ್ಥಳೀಯವಾಗಿಯೇ ಬೆಳೆದ ಮೆಕ್ಕೆಜೋಳ ಖರೀದಿಸುವ ನಿಟ್ಟಿನಲ್ಲಿ ಉದ್ದಿಮೆದಾರರ ಸಭೆ ಕರೆದು ಕ್ರಮ ಕೈಗೊಳ್ಳಬೇಕು ಎಂದು ಸೋಮವಾರ ಜಿಪಂ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಯಿತು.
ಸದಸ್ಯ ಸುರೇಂದ್ರ ನಾಯ್ಕ ಮಾತನಾಡಿ, ಮೆಕ್ಕೆಜೋಳ ಬೆಳೆ ಕಟಾವಿಗೆ ಬಂದಿದೆ. ಈವರೆಗೂ ಖರೀದಿ ಕೇಂದ್ರ ತೆರೆದಿಲ್ಲ. ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆಧ್ವನಿಗೂಡಿಸಿದ ಸದಸ್ಯರಾದ ವಿಶ್ವನಾಥ್, ಕೆ.ಎಸ್. ಬಸವಂತಪ್ಪ, ಕೆ.ಎಚ್. ಓಬಳಪ್ಪ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸದಸ್ಯರೇ ರೈತರ ಪರವಾಗಿ ಪ್ರಶ್ನೆ ಕೇಳಿರುವುದು ಒಳ್ಳೆಯ ವಿಚಾರ. ಆದರೆ ಮುಖ್ಯಮಂತ್ರಿಯವರು ಮೆಕ್ಕೆಜೋಳ ಆಹಾರ ವಸ್ತುವಲ್ಲ ಎಂದು ಕೇಂದ್ರ ಹೇಳಿದ್ದು ಮೆಕ್ಕೆಜೋಳ ಖರೀದಿ ಕೇಂದ್ರ ಸ್ಥಾಪಿಸಲು ಸಾಧ್ಯವಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮಾನವೀಯತೆ ಆಧಾರದಲ್ಲಿ ಜಿಲ್ಲೆಯಲ್ಲಿ ಮೆಕ್ಕೆಜೋಳ ಆಧರಿಸಿ ನಡೆಯುವ ಕೈಗಾರಿಕೆಯವರಾದರೂ ಕೇಂದ್ರ ಸರ್ಕಾರ ಘೋಷಿಸಿರುವ 1800 ರೂ. ಬೆಂಬಲ ಬೆಲೆಯಡಿ ಮೆಕ್ಕೆಜೋಳ ಖರೀದಿಸುವಂತಾಗಬೇಕು. ಇದರಿಂದ ಕೆಲವು ರೈತರಿಗಾದರೂ ಅನುಕೂಲವಾಗುತ್ತದೆ. ಈ ಬಗ್ಗೆ ಉದ್ಯಮಿಗಳ ಸಭೆ ಕರೆದ ಮನವೊಲಿಸಬೇಕು ಎಂದು ಸಲಹೆ ನೀಡಿದರು.
ಪ್ರತಿಭಟನೆಗೆ ಒತ್ತಾಯ: ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ ಜಿಪಂನ ಎಲ್ಲ ಸದಸ್ಯರು, ಪಕ್ಷಾತೀತವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸೋಣ ಎಂದರು. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ಜಿಪಂ ಅಧ್ಯಕ್ಷರ ಮೇಲೆ ಒತ್ತಡ ಹೇರಿದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷದವರೇ ಆದ ಜಿಪಂ ಅಧ್ಯಕ್ಷೆ ದೀಪಾ ಜಗದೀಶ್, ವಿರೋಧ ಪಕ್ಷದ ಸದಸ್ಯರ ಒತ್ತಡಕ್ಕೆ ಮಣಿಯಲಿಲ್ಲ. ಎಲ್ಲದಕ್ಕೂ ಪ್ರತಿಭಟನೆಯೇ ಪರಿಹಾರವಲ್ಲ. ಈ ಕುರಿತು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುವುದು ಎಂದು ಹೇಳಿ ಪ್ರತಿಭಟನೆ ವಿಚಾರಕ್ಕೆ ತೆರೆ ಎಳೆದರು. ಹಳ್ಳಿಯಲ್ಲೂ ಪೌರ ಕಾರ್ಮಿಕರನ್ನು ನೇಮಿಸಿ: ಗ್ರಾಮ ಪಂಚಾಯಿತಿಯಲ್ಲಿ ಸ್ವತ್ಛತೆಗಾಗಿ ವರ್ಷಕ್ಕೆ ಎರಡ್ಮೂರು ಲಕ್ಷ ರೂ. ಖರ್ಚು ಹಾಕಲಾಗುತ್ತದೆ. ಇದರಿಂದ ಹಳ್ಳಿಗಳಲ್ಲಿ ಸರಿಯಾಗಿ ಸ್ವತ್ಛತೆ ಕೆಲಸ ಆಗುತ್ತಿಲ್ಲ. ಒಂದೆರೆಡು ಕಡೆ ಸ್ವತ್ಛ ಮಾಡಿದಂತೆ ಮಾಡಿ ಹಣ ಪಡೆಯಲಾಗುತ್ತಿದೆ. ಆದ್ದರಿಂದ ನಗರ ಪ್ರದೇಶಗಳ ಮಾದರಿಯಲ್ಲಿ ಗ್ರಾಮಗಳಲ್ಲಿಯೂ ಗುತ್ತಿಗೆ ಇಲ್ಲವೇ ಹೊರಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕರನ್ನುನೇಮಿಸಿಕೊಳ್ಳಬೇಕು. ಇದರಿಂದ ಹಳ್ಳಿಗಳಲ್ಲಿಯೂ ಸ್ವಚ್ಛತೆ ಎದ್ದು ಕಾಣುತ್ತದೆ ಎಂದು ಸದಸ್ಯ ಕೆ.ಎಸ್. ಬಸವಂತಪ್ಪ ಸಲಹೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಪಂ ಸಿಇಒ ಪದ್ಮಾ ಬಸವಂತಪ್ಪ, ಯಾವುದೇ ರೀತಿಯ ನೇಮಕಾತಿ ಮಾಡಿಕೊಳ್ಳದಂತೆ ಸರ್ಕಾರ ನಿರ್ದೇಶನ ನೀಡಿದೆ. ಆದರೆ ಗುತ್ತಿಗೆ ಕರೆದು ಸ್ವತ್ಛತೆ ಕೆಲಸ ನೀಡಬಹುದಾಗಿದೆ ಎಂದರು. ಇದಕ್ಕೆ ಒಪ್ಪಿದ ಸದಸ್ಯರು, ಸ್ವತ್ಛತೆಯನ್ನು ಟೆಂಡರ್ ಮೂಲಕವೇ ಏಜೆನ್ಸಿಗೆ ಜವಾಬ್ದಾರಿ ಕೊಟ್ಟು ನಿಗದಿತ ಕಾರ್ಮಿಕರಿಂದ ಸ್ವತ್ಛತೆ ಮಾಡಿಸುವಂತಾಗಲಿ. ನಗರ, ಮಹಾನಗರ ಪಾಲಿಕೆಯಲ್ಲಿಯೂ ಏಜೆನ್ಸಿ ಮೂಲಕ ಕೆಲಸವಾಗುತ್ತಿದೆ ಎಂದರು. ಸದಸ್ಯೆ ಶೈಲಜಾ ಈ ಕುರಿತು ನಿರ್ಣಯ ಕೈಗೊಳ್ಳಲು ಸೂಚಿಸಿದರು. ಜಿಪಂ ಅಧ್ಯಕ್ಷರು ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದರು. ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.
ವಸತಿರಹಿತರ ಪಟ್ಟಿಯಲ್ಲೇ ಆಯ್ಕೆಯಾಗಲಿ: ಸದಸ್ಯ ವಿಶ್ವನಾಥ್ ಮಾತನಾಡಿ, ಪ್ರತಿ ಗ್ರಾಪಂಗೆ 20 ಆಶ್ರಯ ಮನೆ ಮಂಜೂರಿ ಮಾಡಲಾಗುತ್ತಿದ್ದು ಈಗಾಗಲೇ ಸಿದ್ಧಪಡಿಸಿರುವ ವಸತಿರಹಿತರ ಪಟ್ಟಿಯಲ್ಲಿರುವವರನ್ನೇ ಆಯ್ಕೆ ಮಾಡಬೇಕು. ಆ ಪಟ್ಟಿ ಬಿಟ್ಟು ಮಾಡುವುದಾದರೆ ಎಲ್ಲ ಹಂತದ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಹೊಸದಾಗಿ ಗ್ರಾಮಸಭೆ ಮಾಡಿ ಆಯ್ಕೆ ಮಾಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಜಿಪಂ ಅಧ್ಯಕ್ಷೆ ದೀಪಾ ಜಗದೀಶ್, ವಸತಿರಹಿತರ ಪಟ್ಟಿಯಲ್ಲಿಯೇ ಮನೆಯ ಅವಶ್ಯಕತೆ ಹಾಗೂ ಮನೆ ಕಟ್ಟಿಸಿಕೊಳ್ಳುವ ಆಸಕ್ತಿ ಆಧರಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಸದಸ್ಯ ಕೆ.ಎಚ್. ಓಬಳಪ್ಪ ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಆಹಾರ ಸರಬರಾಜಿಗೆ ಸಂಬಂಧಿಸಿದ ಟೆಂಡರ್ ನೀಡುವಲ್ಲಿ ಅಧಿಕಾರಿಗಳು ಕಾನೂನು ಉಲ್ಲಂಘಿಸಿದ್ದು ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ಈ ಬಗ್ಗೆ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಭೆ ತೀರ್ಮಾನಿಸಿತು. ಜಿಪಂ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರಾದ ಫಕೀRರಪ್ಪ, ಲೋಕೇಶ್ ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.