ಸಿದ್ದುಗೆ ಲವ್ ಜೆಹಾದ್ ಆಕ್ರೋಶ; ಶಾಂತಿ ಕದಡುವುದೇ ಉದ್ದೇಶ ಎಂದ ಸಿದ್ದು
ಕಾಂಗ್ರೆಸ್‌ನಿಂದ ಓಲೈಕೆ ರಾಜಕಾರಣ ಎಂದ ಬಿಜೆಪಿ
Team Udayavani, Dec 2, 2020, 6:20 AM IST
ಬೆಂಗಳೂರು: ಲವ್ ಜೆಹಾದ್ ಕಾಯ್ದೆ ವಿರೋಧಿಸುವ ಭರದಲ್ಲಿ ವಿಪಕ್ಷ ನಾಯಕ ಸಿದ್ದ ರಾಮಯ್ಯ ಅವರು ಬಳಸಿದ ಆಕ್ಷೇಪಾರ್ಹ ಪದಗಳ ಬಗ್ಗೆ ಭಾರೀ ವಿವಾದ ಭುಗಿಲೆದ್ದಿದೆ. ಈ ಬಗ್ಗೆ ಬಿಜೆಪಿ ನಾಯಕರು ಕಟುವಾದ ತಿರುಗೇಟು ನೀಡಿದ್ದಾರೆ.
ಉತ್ತರ ಪ್ರದೇಶ ಮಾದರಿಯಲ್ಲಿ ಲವ್ ಜೆಹಾದ್ ತಡೆ ಕಾಯ್ದೆ ಜಾರಿಗೊಳಿಸುವುದಾಗಿ ಹೇಳಿರುವ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ, ಸಂವಿಧಾನದಲ್ಲಿ ಇಂಥ ಕಾನೂನು ಜಾರಿಗೆ ಅವಕಾಶ ಇಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಮತ್ತು ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಆದರೂ ಇಂಥದೊಂದು ಕೆಲಸಕ್ಕೆ ಸರಕಾರ ಕೈಹಾಕಿರುವುದು ದುರುದ್ದೇಶವಲ್ಲದೆ ಬೇರೇನು? ಶಾಂತಿ ಕದಡಬೇಕು ಎಂಬ ಬಿಜೆಪಿಯವರ ಉದ್ದೇಶ ಇದರಿಂದ ಸ್ಪಷ್ಟವಾಗುತ್ತಿದೆ ಎಂದಿದ್ದರು.
ಉತ್ತರ ಪ್ರದೇಶದ ಲವ್ ಜೆಹಾದ್ ತಡೆ ಕಾನೂನು ಅಸಾಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ -ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನ ದಲ್ಲಿ ಇಲ್ಲ. ಹಿಂದೂ ಮುಸ್ಲಿಮನ್ನು, ಮುಸ್ಲಿಮನು, ಹಿಂದೂವನ್ನು ಮದುವೆಯಾಗುವಂತಿಲ್ಲ ಎಂಬ ನಿಯಮ ರೂಪಿಸುವುದು ತಪ್ಪು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.