ಆತ್ಮ ನಿರ್ಭರ ಸಾಲ ಸೌಲಭ್ಯಕ್ಕೆ ಶೇ.35 ಅರ್ಜಿಗಳು ಮಂಜೂರು

Team Udayavani, Dec 3, 2020, 3:59 PM IST

ಆತ್ಮ ನಿರ್ಭರ ಸಾಲ ಸೌಲಭ್ಯಕ್ಕೆ ಶೇ.35 ಅರ್ಜಿಗಳು ಮಂಜೂರು

ಯಾದಗಿರಿ: ಆತ್ಮ ನಿರ್ಭರ್‌ ಯೋಜನೆಯಡಿ ರಾಜ್ಯದಲ್ಲಿ ಯಾದಗಿರಿ ಜಿಲ್ಲೆ ಉತ್ತಮ ಸಾಧನೆ ಮಾಡುತ್ತಿದ್ದು, ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳಲ್ಲಿ ಶೇ.35.53 ರಷ್ಟು ಅರ್ಜಿಗಳಿಗೆಸಾಲ, ಸೌಲಭ್ಯಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಸ್ವನಿ  ಯೋಜನೆಯಪರಿಶೀಲನಾ ಸಭೆಯಲ್ಲಿ ಅವರುಮಾತನಾಡಿದರು. ಜಿಲ್ಲೆಗೆ ನಿಗದಿಪಡಿಸಿದ ಒಟ್ಟು 2,505 ಗುರಿಗಳಲ್ಲಿ ಪ್ರಸ್ತುತ ಒಟ್ಟು 2,254 ಅರ್ಜಿಗಳು ವಿವಿಧ ಬ್ಯಾಂಕ್‌ಗಳಿಗೆ ಸ್ವೀಕೃತವಾಗಿದೆ.

ಶಹಾಪುರ ನಗರಸಭೆ ಮತ್ತು ಗುರುಮಠಕಲ್‌ ಪುರಸಭೆಗಳು ಗುರಿಗಳಗಿಂತ ಹೆಚ್ಚಿಗೆ ಅರ್ಜಿಗಳನ್ನು ಸ್ವೀಕರಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದ ಅರ್ಜಿಗಳಿಗೂ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್‌ ಗಳು ಕ್ರಮವಹಿಸುವಂತೆ ಜಿಲ್ಲಾಲೀಡ್‌ ಬ್ಯಾಂಕ್‌ ಮ್ಯಾನೇಜರ್‌ಗೆ ಸೂಚಿಸಿದರು.

ಯಾದಗಿರಿ ನಗರಸಭೆ, ಸುರಪುರ, ಕೆಂಭಾವಿ ಮತ್ತು ಕಕ್ಕೇರಾಗಳು ಇನ್ನೂಹೆಚ್ಚಿನ ಅರ್ಜಿಗಳನ್ನು ಸ್ವೀಕರಿಸಿ ಆನ್‌ಲೈನ್‌ ಮೂಲಕ ಅಪ್‌ಡೆಟ್‌ ಮಾಡುವಂತೆ ಜಿಲ್ಲೆಯ ನಗರಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಮತ್ತು ಮುಖ್ಯಾ ಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಆತ್ಮ ನಿರ್ಭರ್‌ ಯೋಜನೆಯಡಿ ಗುರಿಗಳಿಗೆ ಯಾವುದೇ ನಿರ್ಬಂಧ ಇಲ್ಲ.ನಿಗದಿಪಡಿಸಿದ ಗುರಿಗಳಿಗಿಂತ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಬಹುದು ಹಾಗೂ ನಗರಸಭೆವ್ಯಾಪ್ತಿಗಳಲ್ಲಿ ಹೆಚ್ಚು ಸಂಖ್ಯೆಯ ಬೀದಿ ವ್ಯಾಪಾರಿಗಳು ಇರುವುದರಿಂದ ಈಗಾಗಲೇ ನಿಗದಿಪಡಿಸಿದ ಗುರಿಗಳಿಗಿಂತ ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ 200 ಮತ್ತು ಸುರಪುರ ನಗರಸಭೆ ವ್ಯಾಪ್ತಿಯಲ್ಲಿ ಇನ್ನೂ 100 ಅರ್ಜಿಗಳನ್ನು ಸ್ವೀಕರಿಸುವಂತೆ ಹಾಗೂ ಅಂತಹ ಅರ್ಜಿಗಳಿಗೆ ಸಂಬಂಧಿಸಿದ ಬ್ಯಾಂಕ್‌ಗಳು ನಿಗದಿತ ಅವಧಿಯೊಳಗೆ ಸಾಲ ಮಂಜೂರು ಮಾಡುವಂತೆ ಹಾಗೂ ವಿಳಂಬಕ್ಕೆ ಆಸ್ಪದ ನೀಡದಂತೆ ಕ್ರಮವಹಿಸಲು ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜನರ್‌ಗೆ ಜಿಲ್ಲಾಧಿಕಾರಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ್‌, ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌, ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಸಭೆಯಲ್ಲಿದ್ದರು.

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.