ಕಾರ್ಖಾನೆ ವಿರುದ್ಧ ಅರೆ ಬೆತ್ತಲೆ ಪ್ರತಿಭಟನೆ


Team Udayavani, Dec 3, 2020, 7:05 PM IST

mysuru-tdy-1

ನಂಜನಗೂಡು: ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಇದೇ ಘಟಕದಲ್ಲಿ ಉದ್ಯೋಗ ಅಥವಾ ಭೂಮಿ ವಾಪಸ್‌ ಎಂಬ ಬೇಡಿಕೆಯೊಂದಿಗೆ ಆರಂಭಿಸಿರುವ ಅಹೋರಾತ್ರಿ ಹೋರಾಟ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಅರೆ ಬೆತ್ತಲೆಯ ಪ್ರತಿಭಟನೆಯಾಗಿ ಮಾರ್ಪಟ್ಟಿತ್ತು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜನಾಂದೋಲನ ಮಹಾಮೈತ್ರಿ ದಲಿತ ಸಂಘಟನೆ, ಸ್ವರಾಜ್‌ ಇಂಡಿಯಾ ಸಹಯೋಗದೊಂದಿಗೆ ಬುಧವಾರ ನಡೆದ ಧರಣಿಯಲ್ಲಿ ಅಖೀಲ ಭಾರತ ಯುವಜನ ಮಹಿಳಾ ಸಂಘ, ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘ ಮತ್ತಿತರರ ಸಂಘಟನೆಗಳು ಪಾಲ್ಗೊಂಡರು ಸಾಥ್‌ ನೀಡಿದವು.

ಅಹೋರಾತ್ರಿ ಪ್ರತಿಭಟನೆಯನ್ನು ಅರೆ ಬೆತ್ತಲೆಯಾಗಿ ರೈತರು ಮುನ್ನಡೆಸಿದರು. ತಾಲೂಕಿನ ಅಡಕನಹಳ್ಳಿ ಹುಂಡಿಯ ಕೈಗಾರಿಕಾವಲಯದಏಷಿಯನ್‌ಪೇಂಟ್ಸ್‌ಕಾರ್ಖಾನೆ ಎದುರು ನಡೆಸುತ್ತಿರುವ ಧರಣಿಯನ್ನುದ್ದೇಶಿಸಿ ಮಾತನಾಡಿದರಾಜ್ಯ ರೈತ ಸಂಘದ ನಾಯಕ ಅಶ್ವತ್ಥ್ ನಾರಾಯ ಅರಸು,ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಯುವಜನ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ಉಮಾದೇವಿ, ಮಹಿಳಾ ಸಾಂಸ್ಕೃತಿಕ ಸಂಘದ ಅಧ್ಯಕ್ಷೆ ಸಂಧ್ಯಾ, ಮುದ್ದು ಕೃಷ್ಣ ಮತ್ತಿತರರು ಮಾತನಾಡಿ,ಇದೇಘಟಕದಲ್ಲಿಉದ್ಯೋಗ ನೀಡಿ ಇಲ್ಲವೇ ಭೂಮಿ ವಾಪಸ್‌ ಆಗುವವರಿಗೂ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದುಎಚ್ಚರಿಕೆ ನೀಡಿದರು.

ತಾಳ್ಮೆ ಪರೀಕ್ಷಿಸಬೇಡಿ:ಹೋರಾಟಗಾರರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಸರ್ಕಾರದ ನಿರ್ಲಕ್ಷ್ಯ ಧೋರಣೆ ಹೀಗೆ ಮುಂದುವರಿದರೆ ಹೋರಾಟದಸ್ವರೂಪವೇಬದಲಾಗುತ್ತದೆ. ಇದಕ್ಕೆ ಅವಕಾಶ ನೀಡಬೇಡಿ ಎಂದು ತಿಳಿಸಿದರು.ಈವೇಳೆರೈತಮುಖಂಡರಾದಹೊಸಕೋಟೆ ಬಸವರಾಜು, ಶಿರಮಳ್ಳಿಸಿದ್ದಪ್ಪ, ಬೊಕ್ಕಳ್ಳಿ ನಂಜುಂಡಸ್ವಾಮಿ, ಹೆಜ್ಜಿಗೆಪ್ರಕಾಶ, ಪ್ರಸನ್ನಗೌಡ, ಪ್ರಮೋದ, ಆಕಾಶ,ಸಚಿನ್‌, ಚಂದ್ರಕಲಾ, ಆಶಿಯಾಬೇಗಂ, ತಿ.ನರಸೀಪುರದ ಶಿವನಂಜು, ಬನ್ನೂರಿನಹುಚ್ಚೇಗೌಡ, ತಾಲೂಕು ವಸತಿ ನಿಲಯಗಳ ಸಂಘಟನೆಯ ಚಂದ್ರಮ್ಮ, ಸಿದ್ದಯ್ಯ ಮತ್ತಿತರರು ಉಪಸ್ಥಿತರಿದ್ದರು.

ಬಂದ್‌ಗೆ ಮೈಸೂರು ಉದ್ಯಮ ಸಂಘಗಳ ಒಕ್ಕೂಟ ಬೆಂಬಲ ಇಲ್ಲ :

ಮೈಸೂರು: ಕನ್ನಡ ಪರ ಸಂಘಟನೆಗಳು ಡಿ.5 ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲ ನೀಡದಿರಲು ಮೈಸೂರು ಉದ್ಯಮ ಸಂಘಗಳ ಒಕ್ಕೂಟವು ನಿರ್ಧಾರಿಸಿದೆ.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳುಮಾತನಾಡಿ, ಈಗಾಗಲೇ ಕೊರೊನಾ ಹೊಡೆತದಿಂದ ನೆಲಕಚ್ಚಿರುವ ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ಉದ್ದಿಮಗಳು ಈಗ ತಾನೆ ಚಿಗುರೊಡೆಯುತ್ತಿವೆ.ಚೇತರಿಸಿಕೊಳ್ಳುವ ಸಮಯದಲ್ಲಿ ಬಂದ್‌ಗೆ ಕರೆನೀಡಿರುವುದು ಸರಿಯಲ್ಲ. ಕನ್ನಡ ನಾಡು ನುಡಿ, ಭಾಷೆಮತ್ತು ಜಲಕ್ಕೆ ಸಂಬಂಧಿಸಿದಂತೆ ಹೋರಾಟಕ್ಕೆ ಬದ್ಧವಾಗಿದ್ದೇವೆ. ಬಂದ್‌ ಉದ್ದೇಶವನ್ನು ಬೆಂಬಲಿಸುತ್ತೇವೆ. ಆದರೆ, ಸಂಕಷ್ಟ ಪರಿಸ್ಥಿತಿಯಲ್ಲಿ ಬಂದ್‌ ನಡೆಸುತ್ತಿರುವುದಕ್ಕೆ ನಮ್ಮ

ವಿರೋಧವಿದೆ.ಹೀಗಾಗಿಮೈಸೂರಿನಲ್ಲಿ ಟ್ಯಾಕ್ಸಿಟ್ರಾವೆಲ್ಸ್, ಹೋಟೆಲ್‌, ಬಸ್‌, ಪೆಟ್ರೋಲ್‌ ಬಂಕ್‌, ಮಾರುಕಟ್ಟೆ ಸೇರಿದಂತೆ ಹಲವು ಸೇವೆ ಎಂದಿನಂತೆ ಮುಂದುವರಿಸುವುದಾಗಿ ತಿಳಿಸಿದರು.

ಮೈಸೂರು ಟ್ರಾವೆಲ್ಸ್ ಅಸೋಸಿಯೇಷೆನ್‌, ಮೈಸೂರು ಹೋಟೆಲ್‌ ಮಾಲೀಕರ ಸಂಘ, ಜಿಲ್ಲಾ ಪ್ರವಾಸಿ ವಾಹನ ಚಾಲಕ ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ಅನುಮೋದಿತ ಪ್ರವಾಸಿ ಮಾರ್ಗದರ್ಶಿಗಳ ಸಂಘ, ಜಿಲ್ಲಾ ಮತ್ತು ನಗರ ಮ್ಯಾಕ್ಸಿಕ್ಯಾಬ್‌ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ಮೈಸೂರು ರೀಜನ್‌ಪೆಟ್ರೋಲಿಯಂ ಡೀಲರ್ಸ್‌ ಅಸೋಸಿಯೇಷನ್‌, ದೇವರಾಜ್‌ ಅರಸ್‌ ರಸ್ತೆ ಟ್ರೇಡರ್ಸ್‌ ಅಸೋಸಿಯೇಷನ್‌, ವರ್ತಕರ ಸಂಘ, ಮೈಸೂರು ಟೈಕ್ಸ್‌ ಟೈಲ್ಸ್‌ ಮತ್ತು ಗಾರ್ಮೆಂಟ್‌ ಮರ್ಚೆಂಟ್‌ ಅಸೋಸಿಯೇಷನ್‌, ಜಿಲ್ಲಾ ಡಿಸ್ಟ್ರಿಬ್ಯೂಟರ್‌ ಅಸೋಸಿಯೇಷನ್‌, ಕಲ್ಯಾಣ ಮಂಟಪ ಮಾಲೀಕರ ಸಂಘಮತ್ತು ಮೈಸೂರು ಮಹಾನಗರಪಾಲಿಕೆಮಂಡಿಮಾರುಕಟ್ಟೆಬಾಡಿಗೆದಾರರ ಸಂಘದ ಪ್ರತಿನಿಧಿಗಳು ತಿಳಿಸಿದ್ದಾರೆ.

ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್‌ ಗೌರವಾಧ್ಯಕ್ಷ ಬಿ.ಎಸ್‌.ಪ್ರಶಾಂತ್‌, ಜಿಲ್ಲಾ ಪ್ರವಾಸಿ ವಾಹನ ಚಾಲಕ ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ನಾಗರಾಜ್‌, ಮೈಸೂರು ಅನುಮೋದಿತ ಪ್ರವಾಸಿ ಮಾರ್ಗದರ್ಶಿಗಳ ಸಂಘದ ಅಶೋಕ್‌, ಜಿಲ್ಲಾಮತ್ತು ನಗರ ಮ್ಯಾಕ್ಸಿಕ್ಯಾಬ್‌ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ರವಿ, ದೇವರಾಜ್‌ ಅರಸ್‌ ರಸ್ತೆ ಟ್ರೇಡರ್ಸ್‌ ಅಸೋಸಿಯೇಷನ್‌ ವೀರಭದ್ರಪ್ಪ, ಕಲ್ಯಾಣ ಮಂಟಪ ಮಾಲೀಕರ ಸಂಘದ ಕೆ. ಶರತ್‌. ಸತ್ಯನಾರಾಯಣ,ಮೈಸೂರು ಮಹಾನಗರ ಪಾಲಿಕೆ ಮಂಡಿ ಮಾರುಕಟ್ಟೆ ಬಾಡಿಗೆದಾರರ ಸಂಘದ ಮಹದೇವು ಇದ್ದರು.

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore: ಹಾಡಹಗಲೇ ಕಾರು ಅಡ್ಡಗಟ್ಟಿ ರಾಬರಿ; ಹಣದೊಂದಿಗೆ ಕಾರು ಕೂಡಾ ದೋಚಿದರು!

Mysore: ಹಾಡಹಗಲೇ ಕಾರು ಅಡ್ಡಗಟ್ಟಿ ರಾಬರಿ; ಹಣದೊಂದಿಗೆ ಕಾರು ಕೂಡಾ ದೋಚಿದರು!

Hunasur: ಪ್ರೇಯಸಿಗೆ ಚಿನ್ನ ಖರೀದಿಸಲು ಎಟಿಎಂ ಗೆ ತುಂಬಬೇಕಿದ್ದ ಹಣ ಎಗರಿಸಿದ ಯುವಕ

Hunasur: ಪ್ರೇಯಸಿಗೆ ಚಿನ್ನ ಖರೀದಿಸಲು ಎಟಿಎಂ ಗೆ ತುಂಬಬೇಕಿದ್ದ ಹಣ ಎಗರಿಸಿದ ಯುವಕ

Mysuru ಮುಟ್ಟುಗೋಲು: 142 ನಿವೇಶನ ಮಾಹಿತಿ ಬಹಿರಂಗಕ್ಕೆ ಸ್ನೇಹಮಯಿ ಕೃಷ್ಣ ಒತ್ತಾಯ

Mysuru ಮುಟ್ಟುಗೋಲು: 142 ನಿವೇಶನ ಮಾಹಿತಿ ಬಹಿರಂಗಕ್ಕೆ ಸ್ನೇಹಮಯಿ ಕೃಷ್ಣ ಒತ್ತಾಯ

ತ್ರಿವೇಣಿ ಸಂಗಮ ಕುಂಭಮೇಳಕ್ಕೆ 10 ಕೋಟಿ ರೂ. ಪ್ರಸ್ತಾವನೆ: ಸಚಿವ ಮಹದೇವಪ್ಪ

ತ್ರಿವೇಣಿ ಸಂಗಮ ಕುಂಭಮೇಳಕ್ಕೆ 10 ಕೋಟಿ ರೂ. ಪ್ರಸ್ತಾವನೆ: ಸಚಿವ ಮಹದೇವಪ್ಪ

15

Mysuru: ಸಿದ್ದರಾಮಯ್ಯ ಹೆಸರು ದುರ್ಬಳಕೆಗೆ ಇ.ಡಿ. ಮೂಲಕ ಯತ್ನ; ಯತೀಂದ್ರ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.