2023ರಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ತರಲು ಶ್ರಮ


Team Udayavani, Dec 3, 2020, 7:14 PM IST

2023ರಲ್ಲಿ ಜೆಡಿಎಸ್‌ ಪಕ್ಷ ಅಧಿಕಾರಕ್ಕೆ ತರಲು ಶ್ರಮ

ಮದ್ದೂರು: ಮುಂಬರುವ 2023ರ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯದಲ್ಲಿ ಪ್ರವಾಸ ಕೈಗೊಂಡು, ಎಚ್‌.ಡಿ.ಕುಮಾರ ಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಶ್ರಮಿಸುತ್ತೇವೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖೀಲ್‌ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದ ಪೇಟೇಬೀದಿಯಲ್ಲಿ ಶ್ರೀಮತಿ ಸಿಲ್ಕ್ ಆ್ಯಂಡ್‌ ಕಂಚಿಕೋ ನೂತನ ಮಳಿಗೆ ಅನಾವರಣಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ದಿನಗಳಲ್ಲಿ 30 ಜಿಲ್ಲೆಗಳ ಪ್ರವಾಸ ಕೈಗೊಂಡು ಯುವಕರನ್ನು ಸಂಘಟಿಸುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ ತಂದು ರೈತ, ಕಾರ್ಮಿಕರ ಪ್ರಗತಿಗಾಗಿಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿಸುವುದೇ ತಮ್ಮ ಧ್ಯೆಯ ಎಂದರು.

ಪಕ್ಷ ಸಂಘಟನೆಗೆ ಸೂಚನೆ: ತಾಲೂಕು, ಜಿಲ್ಲಾ ಅಧ್ಯಕ್ಷರ ಸಭೆ ನಡೆಸಿ ಪ್ರತಿ ಗ್ರಾಮದಲ್ಲೂ ಪಕ್ಷ ಸಂಘಟನೆ, ಮುಂಬರುವ ಚುನಾವಣೆಗೆ ಇಂದಿನಿಂದಲೇ ಕಾರ್ಯಕರ್ತರನ್ನು ಸಿದ್ಧಗೊಳಿಸುತ್ತೇವೆ. ಈಗಾಗಲೇ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜಿಲ್ಲಾಧ್ಯಕ್ಷರು, ಶಾಸಕರು, ಮಾಜಿ ಸಚಿವರ ಸಭೆ ನಡೆಸಿ, ಪಕ್ಷ ಸಂಘಟನೆಗೆಸೂಚಿಸಿದ್ದಾರೆ. ಎಲ್ಲಾ ವರ್ಗದವರನ್ನು ವಿಶ್ವಾಸಕ್ಕೆತೆಗೆದುಕೊಂಡು ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ. ಈ ಸಂಬಂಧ ಮಾಜಿ ಪ್ರಧಾನಿಎಚ್‌.ಡಿ. ದೇವೇಗೌಡ ಅವರು ತಮಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.

ಸ್ವತಂತ್ರವಾಗಿ ಜೆಡಿಎಸ್‌ ಸ್ಪರ್ಧೆ: ಪ್ರಸಕ್ತ ಎದುರಾಗಿರುವ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವು ಸ್ವತಂತ್ರವಾಗಿ ಚುನಾವಣೆ ಎದುರಿಸಲಿದೆ. ಸ್ಥಳೀಯ ಚುನಾವಣೆಯಲ್ಲಿ ಕಾರ್ಯಕರ್ತರ ಪರ ಕರ್ತವ್ಯ ನಿರ್ವಹಿಸಿ ಶಕ್ತಿ ತುಂಬುವ ಕೆಲಸಕ್ಕೆ ಮುಂದಾಗಲು ಸ್ಥಳೀಯ ಶಾಸಕರೊಂದಿಗೆ ಚರ್ಚಿಸುತ್ತೇವೆ ಎಂದು ಹೇಳಿದರು.

ರೈತರ ಅಭಿವೃದ್ಧಿಗಾಗಿ ಮೈತ್ರಿ: ಜಿಲ್ಲೆಯ ರೈತರ ‌ ಅಭಿವೃದ್ಧಿಗಾಗಿ ಡಿಸಿಸಿ ಬ್ಯಾಂಕ್‌ನಲ್ಲಿ ಜೆಡಿಎಸ್‌ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತೆ ಹೊರತು, ಯಾವ ಉದ್ದೇಶವಿಲ್ಲ. ಈ ಸಂಬಂಧ ಬಿಜೆಪಿ ವರಿಷ್ಠರೊಂದಿಗೆ ಕುಮಾರಸ್ವಾಮಿ ಅವರುಚರ್ಚಿಸಿ, ತೀರ್ಮಾನ ‌ ಕೈಗೊಂಡಿದ್ದಾರೆ. ಇದರಿಂದ ಮುಂದಿನ ‌ದಿನಗಳಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಿದೆ ಸ್ವತಂತ್ರ ಪ‌ಕ್ಷವಾಗಿ ಚುನಾವಣೆ ಎದುರಿಸಲಿದೆ. ಮುಂದಿನ ವಿಧಾನ ‌ಸಭಾ ಚುನಾವಣೆಯಲ್ಲಿ ಕಾರ್ಯಕರ್ತರ ತೀರ್ಮಾನವೇ ಅಂತಿಮ. ಮಂಡ್ಯ, ರಾಮನಗರ ಎರಡು ಕಣ್ಣುಗಳಿದ್ದಂತೆ. ಪಕ್ಷವಿರುವುದು ಕಾರ್ಯಕರ್ತರಿಂದಲೇ ಹೊರತು ನಮ್ಮಿಂದಲ್ಲ ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ತಾವು ಬದ್ಧರಾಗಿದ್ದೇವೆ ಎಂದರು.

ಪುರಸಭೆ ಅಧ್ಯಕ್ಷ ಸುರೇಶ್‌, ಉಪಾಧ್ಯಕ್ಷೆ ಸುಮಿತ್ರ ರಮೇಶ್‌, ಸದಸ್ಯರಾದ ಸಿದ್ದರಾಜು, ಬಸವರಾಜು,ವನಿತಾ, ಪ್ರಮೀಳಾ, ಜೆಡಿಎಸ್‌ ಘಟಕದ ತಾಲೂಕು ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಮುಖಂಡರಾದ ಡಿ.ಟಿ.ಸಂತೋಷ್‌, ಕೆ. ದಾಸೇಗೌಡ, ಯೋಗೇಶ್‌, ಮರಿಮಾದೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.