ರೈತರ ಮೇಲೆ ಕೇಂದ್ರದ ದೌರ್ಜನ್ಯಕ್ಕೆ ಖಂಡನೆ

Team Udayavani, Dec 4, 2020, 12:57 PM IST

ರೈತರ ಮೇಲೆ ಕೇಂದ್ರದ ದೌರ್ಜನ್ಯಕ್ಕೆ ಖಂಡನೆ

ಬನಹಟ್ಟಿ: ಕೃಷಿ ಕಾಯ್ದೆ ವಿರೋಧಿಸಿ ವಿವಿಧ ರಾಜ್ಯಗಳಿಂದ ಪ್ರತಿಭಟನೆನಡೆಸಲು ನವದೆಹಲಿಗೆ ತೆರಳುತ್ತಿರುವ ರೈತರ  ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ಎಸಗುತ್ತಿದೆ ಎಂದು ಆರೋಪಿಸಿ ಗುರುವಾರ ನಗರದ ಗಾಂಧಿ ವೃತ್ತದ ಬಳಿ ರೈತಸಂಘದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಾರ್ಪೋರೇಟ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಕೃಷಿ ಕಾಯ್ದೆ ವಿರುದ್ಧ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರಜಗ್ಗದ ಕಾರಣ ಸಹಸ್ರಾರು ಸಂಖ್ಯೆಯ ರೈತರು ನವದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.ಆದರೆ, ಕೇಂದ್ರ ಸಕಾರ ಅಮಾಯಕ ರೈತರ ಮೇಲೆ ಲಾಠಿ ಪ್ರಹಾರ, ಜಲಫಿರಂಗಿ, ಅಶ್ರುವಾಯು ಸಿಡಿಸಿ ದೌರ್ಜನ್ಯ ಎಸಗಿದೆ. ಅವರಿಗೆ ದೆಹಲಿಯೊಳಗೆ ತೆರಳಲು ಬಿಡುತ್ತಿಲ್ಲ. ಇದು ಪ್ರಧಾನಿ ನರೇಂದ್ರ ಮೋದಿಯವರ ಸರ್ವಾಧಿಕಾರ ಧೋರಣೆ. ಉದ್ಧಟತನದ ಪರಮಾವಧಿ. ಅದಕ್ಕೆ ಭವಿಷ್ಯದಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ. ಮುಗ್ಧ ಮತದಾರರಹಾಗೂ ರೈತರನ್ನು ಪರೀಕ್ಷೆ ಮಾಡಬೇಡಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕೃಷಿ ಕಾಯ್ದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ವಿದ್ಯುತ್‌ ತಿದ್ದುಪಡಿ ಮಸೂದೆ, ಕಾರ್ಮಿಕ ವಿರೋಧಿ  ಸಂಹಿತೆ ಕೂಡಲೇ ಹಿಂಪಡೆಯಬೇಕು. ಬೆಂಬಲ ಬೆಲೆ ನಿಗದಿಪಡಿಸುವ ಡಾ| ಎಂ.ಎಸ್‌.ಸ್ವಾಮಿನಾಥನ್‌ ನೇತೃತ್ವದ ಕೃಷಿ ಆಯೋಗದ ಸಲಹೆ ಜಾರಿಗೆ ತರಬೇಕು. ಕೋವಿಡ್‌ ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೊಳಗಾದ ಬಡತನ ರೇಖೆಗಿಂತ ಕೆಳಗಿರುವ ಎಲ್ಲ ಕುಟುಂಬಗಳಿಗೆ ಆರ್ಥಿಕ ನೆರವು  ನೀಡುವಂತೆ ಒತ್ತಾಯಿಸಿದರು.

ಮಹಾಲಿಂಗಪುರ ಘಟನೆಗೆ ಖಂಡನೆ: ಮಹಿಳೆಯ ಮೇಲೆ ಬಿಜೆಪಿ ಶಾಸಕ ಸಿದ್ದು ಸವದಿ ಹಾಗು ಬೆಂಬಲಿಗರಿಂದ ದೌರ್ಜನ್ಯ ಎಸಗಿರುವುದನ್ನು ರೈತ ಸಂಘವು ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ತಾಲೂಕಾಧ್ಯಕ್ಷ ಮಾಯಪ್ಪ ತುರಾದಿ, ಉಪಾಧ್ಯಕ್ಷ ಬಸು ಮೇಲೋಡಿ, ಅಯ್ಯಪ್ಪ ಸಸಾಲಟ್ಟಿ, ಸಿದ್ದು ಉಳ್ಳಾಗಡ್ಡಿ, ಭೀಮಸಿಎಡತ್ತಿ, ಶಿವು ನಾಗನೂರ, ದುಂಡಪ್ಪ ಕುಡಚಿ,ಅಲ್ಲಪ್ಪ ಬಳಗಾರ, ನಿಂಗಪ್ಪ ಗುರವ, ಶಿವನಿಂಗ ಮರೆಗುದ್ದಿ ಅನೇಕರಿದ್ದರು.

ಟಾಪ್ ನ್ಯೂಸ್

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.