ವ್ಯಾಜ್ಯಮುಕ್ತ, ಭಯಮುಕ್ತ ರಾಜ್ಯ ನಮ್ಮದಾಗಲಿ…


Team Udayavani, Dec 6, 2020, 6:04 AM IST

Village

ಸಾಂದರ್ಭಿಕ ಚಿತ್ರ

ಬೆಂಗಳೂರು: ಹಳ್ಳಿಗಳ ಆಡಳಿತ ಮತ್ತು ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ “ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ಕ್ಕೆ ಆಮೂಲಾಗ್ರ ತಿದ್ದುಪಡಿಗಳನ್ನು ತಂದು ಕೆಲವೊಂದು ಮಹತ್ತರ ಬದಲಾವಣೆಗಳನ್ನು ಮಾಡಲಾಯಿತು. ಈ ತಿದ್ದುಪಡಿ ಕಾಯ್ದೆಯಡಿ ದೇಶದಲ್ಲಿಯೇ ಮೊದಲ ಬಾರಿಗೆ ಸಂವಿಧಾನದ ಮಾದರಿಯಲ್ಲಿ “ಪಂಚಾಯತ್‌ ನೀತಿ ನಿರ್ದೇಶಕ’ಗಳನ್ನು ಪರಿಚಯಿಸಲಾಯಿತು. ಗ್ರಾಮ ಪಂಚಾಯತ್‌ಗಳಿಗೆ ಈಗ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಓದುಗರು ಅವುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಆಶಯದೊಂದಿಗೆ ಸಂಕಿ³ಪ್ತ ಮಾಹಿತಿ ನೀಡಲಾಗಿದೆ.

ಸಂವಿಧಾನದ 73ನೇ ತಿದ್ದುಪಡಿಯ ಉದ್ದೇಶ ವನ್ನು ಈಡೇರಿಸುವುದಕ್ಕಾಗಿ ಜನರು ಹೆಚ್ಚಿನ ರೀತಿಯಲ್ಲಿ ಗ್ರಾಮ ಸ್ವರಾಜ್‌ನ ಸ್ಥಳೀಯ ಸ್ವಯಂ ಆಡಳಿತದಲ್ಲಿ ಭಾಗವಹಿಸಲು ಗ್ರಾಮ, ತಾಲೂಕು ಮತ್ತು ಜಿಲ್ಲಾ ಹಂತಗಳಲ್ಲಿ ಪಂಚಾಯತ್‌ರಾಜ್‌ ವ್ಯವಸ್ಥೆ ಸ್ಥಾಪನೆ.

ಗ್ರಾಮೀಣ ಜನರ ಜೀವನಮಟ್ಟವನ್ನು ಸುಧಾರಿ ಸಲು ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ.

ವ್ಯಾಜ್ಯ ಮುಕ್ತ, ಶೋಷಣೆ ಮುಕ್ತ, ಭಯ ಮುಕ್ತ ಸಮಾನತಾವಾದಿ ರಾಜ್ಯವನ್ನಾಗಿ ಮಾಡುವುದು.

ಬಯಲು ಬಹಿರ್ದೆಸೆ ಮುಕ್ತ ಸ್ವತ್ಛ ಗ್ರಾಮಗಳನ್ನಾಗಿ ಮಾಡುವುದು. ಮಹಿಳೆಯರನ್ನು ಸಶಕ್ತಗೊಳಿಸುವುದು ಮತ್ತು ಲಿಂಗ ಸಮಾನತೆಯನ್ನು ಸಾಧಿಸಲು ಪಂಚಾಯತ್‌ರಾಜ್‌ ವ್ಯವಸ್ಥೆಯ ಬಲವರ್ಧನೆ.

ಆರ್ಥಿಕ ಪ್ರಗತಿ, ಸಾಮಾಜಿಕ ಸಮಾನತೆಯನ್ನು ಸಾಧಿಸಲು ಸಾಮಾಜಿಕವಾಗಿ ವಂಚಿತರಾದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವುದು. ಆರ್ಥಿಕ ಚಟುವಟಿಕೆಗಳ ಮೂಲಕ ಗ್ರಾಮೀಣ ಜನತೆಗೆ ಪರ್ಯಾಯ ಆದಾಯ ಮೂಲಗಳನ್ನು ಕಲ್ಪಿಸುವುದು. ಮೂಲ ಸೌಕರ್ಯಗಳನ್ನು ಒದಗಿಸಿ ಜನರ ಜೀವನ ಮಟ್ಟದಲ್ಲಿ ಸುಧಾರಣೆ.

ಸೃಜನಶೀಲ, ಹೆಮ್ಮೆಯ, ಸ್ವಾವಲಂಬಿ, ಸಂಪದ್ಭರಿತ ಮತ್ತು ಸಾಮರಸ್ಯ ಸಮಾಜ ನಿರ್ಮಾಣ.

ಜನಸವತಿ ಸಭೆ, ವಾರ್ಡ್‌ ಸಭೆ ಮತ್ತು ಗ್ರಾಮ ಸಭೆಗಳನ್ನು ಗಾಂಧೀಜಿಯವರ ಕನಸಿನ ಗ್ರಾಮ ಸ್ವರಾಜ್ಯ ಸ್ಥಾಪನೆಗೆ ವೇದಿಕೆಗಳನ್ನಾಗಿ ಬಳಸಿಕೊಳ್ಳುವುದು.

ಎಲ್ಲರಿಗೂ ಶುದ್ಧ ಕುಡಿಯುವ ನೀರು, ಆರೋಗ್ಯ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಸಮುದಾಯದ ಜೀವನಮಟ್ಟ ಸುಧಾರಣೆ.

ಅಗತ್ಯ ಗ್ರಾಮೀಣ ಸೌಲಭ್ಯಗಳನ್ನು ಒದಗಿಸಿ ಗ್ರಾಮೀಣ ಸಮುದಾಯಗಳು ಮತ್ತು ಸಂಘಟನೆಗಳು ಗ್ರಾಮದ ಸುಧಾರಣೆ ಮತ್ತು ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು.

ಗ್ರಾಮ ವಾಸಿಗಳ ಆರ್ಥಿಕ, ಸಾಮಾಜಿಕ ಮತ್ತು ಪರಿಸರಾತ್ಮಕ ಗುಣಮಟ್ಟವನ್ನು ವೃದ್ಧಿಸುವುದಕ್ಕಾಗಿ ಆಸ್ತಿಗಳ ನಿರ್ವಹಣೆ ಮತ್ತು ಸುಸ್ಥಿರ ಅಭಿವೃದ್ಧಿ ಗಾಗಿ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸಮುದಾ ಯವನ್ನು ತೊಡಗಿಸಿಕೊಳ್ಳುವುದು.

ಪಂಚಾಯತ್‌ ಅಧೀನದಲ್ಲಿರುವ ಸಂಪನ್ಮೂಲ ಗಳನ್ನು ಬಳಕೆ ಮಾಡಿಕೊಂಡು ಪಂಚಾಯತ್‌ ವ್ಯಾಪ್ತಿಯ ಅರಣ್ಯ ಮತ್ತು ವನ್ಯಜೀವಿಗಳ ಸುಸ್ಥಿರ ಅಭಿವೃದ್ಧಿ ಹಾಗೂ ಮುಂದಿನ ಪೀಳಿಗೆಗಾಗಿ ಅವುಗಳನ್ನು ಸಂರಕ್ಷಣೆ.

ಸ್ಥಳೀಯ ಸಮುದಾಯ ಕಲೆ, ಸಂಸ್ಕೃತಿ, ಪರಂಪರೆ ಗಳನ್ನು ರಕ್ಷಿಸಿ ಪ್ರವಾಸೋದ್ಯಮಕ್ಕೆ ಉತ್ತೇಜನ.

ನವಣೆ, ಸಜ್ಜೆ, ಬಿಳಿ ಜೋಳ, ಸಾಮೆ, ಸಾವೆ, ಕೋರ್ಲಿ ಇತ್ಯಾದಿ ಮತ್ತು ಔಷಧೀಯ ಮೌಲ್ಯವುಳ್ಳ ಗಿಡಮೂಲಿಕೆಗಳಂತಹ ದೇಸಿ ವೈವಿಧ್ಯವುಳ್ಳ ಬೀಜಗಳ ಸಂರಕ್ಷಣೆ ಮತ್ತು ಅಭಿವೃದ್ಧಿ.

ಕೃಷಿ-ಕೈಗಾರಿಕೆ ಕೇಂದ್ರಗಳನ್ನು ಗ್ರಾಮೀಣ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ಉದ್ಯೋಗಳನ್ನು ಸೃಷ್ಟಿ ಮಾಡುವುದು ಮತ್ತು ಕೈಗಾರಿಕೆ-ವಾಣಿಜ್ಯ ಚಟುವಟಿಕೆಗಳ ಅರ್ಜಿ ಸ್ವೀಕಾರಕ್ಕೆ ಏಕಗವಾಕ್ಷಿ ವ್ಯವಸ್ಥೆ ಜಾರಿ.

ರಾಷ್ಟ್ರೀಯ ಮತ್ತು ರಾಜ್ಯ ಕಾರ್ಯ ನೀತಿಗಳಿಗೆ ಅನುಸಾರವಾಗಿ ತಳಮಟ್ಟದಲ್ಲಿ ಸಹಕಾರಿ ಸಂಸ್ಥೆಗಳನ್ನು ಪ್ರೋತ್ಸಾಹಿಸುವ ಮೂಲಕ ಸಹಕಾರಿ ಮನೋಭಾವ ಮತ್ತು ವಾತಾವರಣ ನಿರ್ಮಾಣ.

ಗ್ರಾಮೀಣ ಪ್ರದೇಶಗಳಲ್ಲಿನ ಕೌಶಲ, ಜ್ಞಾನ, ಇತರ ಸಾಮರ್ಥಯಗಳಿಗೆ ಅನುಗುಣವಾಗಿ ಗ್ರಾಮೀಣ ಸಂಪನ್ಮೂಲಗಳ ಅಭಿವೃದ್ಧಿ ಮತ್ತು ಸಶಕ್ತೀಕರಣ.

ಶಾಂತಿಯುತ ಸಮಾಜ ಮತ್ತು ಕೋಮು ಸೌಹಾರ್ದವನ್ನು ಸಂರಕ್ಷಿಸುವ ಹಾಗೂ ಎಲ್ಲ ರೀತಿಯ ಹಿಂಸೆಗಳನ್ನು ತಡೆಗಟ್ಟುವ ಸುರಕ್ಷಿತ ಮತ್ತು ಸಹನಶೀಲ ಸಮುದಾಯವನ್ನು ಪೋಷಿಸುವುದು.

ಗ್ರಾಮಗಳಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಹಾನಿ ಉಂಟು ಮಾಡುವ ಬೆಳವಣಿಗೆಗಳು ನಡೆದಾಗ ಅವುಗಳನ್ನು ತಡೆಗಟ್ಟಬೇಕು. ಸಾಲಬಾಧೆ, ಬಡತನ ಮತ್ತಿತರ ಕಾರಣಗಳಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಯುವುದು.

ಟಾಪ್ ನ್ಯೂಸ್

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.