ಶೋಷಿತರು,ಅಶಕ್ತರಿಗೆ ದನಿಯಾಗಿ
Team Udayavani, Dec 6, 2020, 7:06 PM IST
ನಂಜನಗೂಡು: ಸಮಾಜದಲ್ಲಿನ ಶೋಷಿತರು, ಅಶಕ್ತರ ಧ್ವನಿಯಾಗುವುದೇ ನಿಜವಾದ ಪತ್ರಕರ್ತರ ಕರ್ತವ್ಯ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಹೇಳಿದರು.
ನಗರದ ಶ್ರಾವಣ ಮಂಟಪದಲ್ಲಿ ತಾಲೂಕು ಪತ್ರಕರ್ತರ ಸಂಘವು ಶನಿವಾರ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಪ್ರದಾನ ಸಮಾರಂಭದಲ್ಲಿ ಮಾತನಾಡಿದಅವರು, ಪತ್ರಿಕೋದ್ಯಮದ ಘನತೆ ಗೌರವವನ್ನು ಪ್ರೋತ್ಸಾಹಿಸಲು ಸೂತ್ತೂರು ಮಠ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಯನ್ನು ಸ್ಥಾಪಿಸಿದೆ. ಶ್ರೀ ಮಠದ ಉದ್ದೇಶವನ್ನು ನಾವೆಲ್ಲ ಸಾಕಾರಗೊಳಿಸಬೇಕಿದೆ ಎಂದರು.
ಕ್ಷೇತ್ರದ ಶಾಸಕರು ಸೂರಿಲ್ಲದ ಪತ್ರಕರ್ತರಿಗೆ ಸೂರು ಕಲ್ಪಿಸಲು ಸಹಕಾರ ನೀಡ ಬೇಕೆಂದು ಅವರು ಇದೇ ಸಂದರ್ಭದಲ್ಲಿ ಕೋರಿದರು. ಶಾಸಕ ಹರ್ಷವರ್ಧನ್ ಮಾತನಾಡಿ, ಪತ್ರಕರ್ತರು ಓಲೈಕೆ ಬಿಟ್ಟು ವಸ್ತುನಿಷ್ಠ ವರದಿಗೆ ಮಹತ್ವ ನೀಡಿದಾಗ ಮಾತ್ರ ಈ ವೃತ್ತಿಯ ಘನತೆ ಗೌರವ ಉಳಿಯುತ್ತದೆ ಎಂದರು. ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ದೀಪಕ್ ಮಾತನಾಡಿ, ರಾಷ್ಟ್ರದ ಮೊಟ್ಟ ಮೊದಲ ಮಹಿಳಾ ಪತ್ರಕರ್ತೆ ನಂಜನಗೂಡು ತಿರುಮಲಾಂಬ ಅವರನ್ನು ಈ ವೇದಿಕೆಯಲ್ಲಿ ಸ್ಮರಿಸದಿದ್ದರೆ ಪತ್ರಿಕಾ ದಿನಾಚರಣೆಗೆ ಅರ್ಥವೇ ಇಲ್ಲ ದಂತಾಗುತ್ತದೆ ಎಂದರು.
ವೇದಿಕೆಯಲ್ಲಿ ಜೆಎಸ್‌ಎಸ್ ಸಂಸ್ಥೆಯ ಆಡಳಿತ ನಿರ್ದೇಶಕ ಶಂಕರಪ್ಪ, ರಾಜ್ಯ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಎನ್.ಆರ್.ಕೃಷ್ಣಪ್ಪ ಗೌಡ, ನಗರ ಸಭಾ ಅಧ್ಯಕ್ಷ ಮಹದೇವ ಸ್ವಾಮಿ, ಜಿಲ್ಲಾ ಪತ್ರಕರ್ತರ ಸಂಘದ ನೂತನ ಕಾರ್ಯದರ್ಶಿ ಸುಬ್ರಮಣ್ಯ, ನಿರ್ದೇಶಕ ಹುಲ್ಲಹಳ್ಳಿ ಶ್ರೀನಿವಾಸ್, ತಾಲೂಕು ಸಂಘದ ಅಧ್ಯಕ್ಷ ಮೊಹನ್, ತಾಲೂಕು ಕಾರ್ಯದರ್ಶಿ ಪ್ರತಾಪ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.