ಜನವರಿ 22ಕ್ಕೆ ಯುವರತ್ನ ತೆರೆಗೆ?
ಚಿತ್ರರಂಗದಲ್ಲಿ ಹೆಚ್ಚಿದ ಕುತೂಹಲ
Team Udayavani, Dec 7, 2020, 3:00 PM IST
ಡಿಸೆಂಬರ್‌ನಲ್ಲಿ ಸ್ಟಾರ್‌ಗಳ ಸಿನಿಮಾ ರಿಲೀಸ್ ಆಗಬಹುದು ಎಂದು ನಿರೀಕ್ಷೆಯಿಂದ ಕಾಯುತ್ತಿದ್ದ ಸಿನಿಮಾ ಪ್ರೇಮಿಗಳಿಗೆ ನಿರಾಸೆಯಾಗಿದೆ. ಯಾವೊಂದು ಸ್ಟಾರ್ ಸಿನಿಮಾಗಳು ಕೂಡಾ ಬಿಡುಗಡೆ ಮಾಡುವ ಧೈರ್ಯ ಮಾಡಿಲ್ಲ. ಆದರೆ, ಹೊಸಬರು ಮಾತ್ರ ನಿಧಾನವಾಗಿ ಸಿನಿಮಾ ಬಿಡುಗಡೆ ಮಾಡುತ್ತಾ, ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಕರೆಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಹೊಸ ವರ್ಷದಿಂದ ಸ್ಟಾರ್ ಸಿನಿಮಾಗಳ ಅಬ್ಬರ ಶುರುವಾಗಲಿದೆ. ಮೊದಲು ಯಾವ ಸ್ಟಾರ್ ಸಿನಿಮಾ ರಿಲೀಸ್ ಆಗುತ್ತದೆ ಎಂಬ ಕುತೂಹಲ ಅನೇಕರಿಗಿದೆ.
ಈಗಾಗಲೇ “ಪೊಗರು’ ಚಿತ್ರದ ಜನವರಿ ಮೊದಲ ವಾರ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಈಗ ಮತ್ತೂಂದು ಸ್ಟಾರ್ ಸಿನಿಮಾದ ಬಿಡುಗಡೆಯ ಸುದ್ದಿ ಗಾಂಧಿನಗರದಲ್ಲಿ ಜೋರಾಗಿ ಕೇಳಿಬರುತ್ತಿದೆ. ಅದು “ಯುವರತ್ನ’. ಪುನೀತ್ ರಾಜ್ ಕುಮಾರ್ ನಾಯಕರಾಗಿರುವ “ಯುವರತ್ನ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜನವರಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರರಂಗದ ಮೂಲಗಳ ಪ್ರಕಾರ, ಚಿತ್ರ ಜನವರಿ 22 ರಂದು ತೆರೆಗೆ ಬರಲಿದೆ. ಈ ಮೂಲಕ ಅಭಿಮಾನಿಗಳಿಗೆ ಪುನೀತ್ ಬೆಳ್ಳಿತೆರೆ ಮೇಲೆ ದರ್ಶನ ನೀಡಲಿದ್ದಾರೆ ಎನ್ನಲಾಗಿದೆ. ಅಲ್ಲಿಗೆ ಹೊಸ ವರ್ಷದ ಆರಂಭದಲ್ಲೇ ಪವರ್‌ಸ್ಟಾರ್ ಸಿನಿಮಾ ಬಂದಂತಾಗುತ್ತದೆ.
ಇದನ್ನೂ ಓದಿ :ಭಾರತದ ಕೃಷಿ ಕಾಯ್ದೆ ವಿರೋಧಿಸಿ ಅಮೆರಿಕಾದಲ್ಲಿ ಸಿಖ್ ಸಮುದಾಯದಿಂದ ಪ್ರತಿಭಟನೆ
ಈಗಾಗಲೇ ಬಿಡುಗಡೆಯಾಗಿರುವ “ಯುವರತ್ನ’ ಚಿತ್ರದ “ಪವರ್ ಆಫ್ ಯೂತ್’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ವರ್ಷಾರಂಭದಲ್ಲಿ ಬಿಡುಗಡೆಯಾಗಿದ್ದ ಚಿತ್ರದ ಟೀಸರ್ ಮಾಸ್ ಡೈಲಾಗ್ ನಿಂದ ಗಮನ ಸೆಳೆದಿತ್ತು. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರವನ್ನು ಹೊಂಬಾಳೆ ಫಿಲಂಸ್ ಮೂಲಕ ವಿಜಯ್‌ಕಿರಗಂದೂರು ನಿರ್ಮಿಸಿದ್ದು, ಸಂತೋಷ್ ಆನಂದ ರಾಮ್ ನಿರ್ದೇಶನವಿದೆ. ಚಿತ್ರದಲ್ಲಿ ಸಯ್ಯೇಶಾ ನಾಯಕಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.