ಕೋವಿಡ್ 19: ಚೇತರಿಕೆ ಪ್ರಮಾಣ ಶೇ.94, ಮೊದಲ ಬಾರಿಗೆ 4 ಲಕ್ಷಕ್ಕಿಂತ ಕಡಿಮೆ ಪ್ರಕರಣ ದಾಖಲು
ಸುಮಾರು 140 ದಿನಗಳ ನಂತರ ದಾಖಲಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದ ಕೇಂದ್ರ
Team Udayavani, Dec 7, 2020, 4:28 PM IST
ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕಿನ ಚೇತರಿಕೆ ಪ್ರಮಾಣ ತೀವ್ರಗತಿಯಲ್ಲಿ ಹೆಚ್ಚಳವಾಗಿದ್ದು, ಕಳೆದ ಜುಲೈ20ರ ನಂತರ ಇದೇ ಮೊದಲ ಬಾರಿಗೆ ಭಾರತದಲ್ಲಿ 4 ಲಕ್ಷಕ್ಕಿಂತ ಕಡಿಮೆ ಪ್ರಮಾಣದ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ(ಡಿಸೆಂಬರ್ 07, 2020) ತಿಳಿಸಿದೆ.
2020ರ ಜುಲೈ 20ರಂದು ಭಾರತದಲ್ಲಿ 3,90,459 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿತ್ತು. ಕಳೆದ 24ಗಂಟೆಯಲ್ಲಿ ದೇಶದಲ್ಲಿ 32, 981 ನೂತನ ಕೋವಿಡ್ ಸೋಂಕು ಪ್ರಕರಣ ದಾಖಲಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 97 ಲಕ್ಷಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶ ವಿವರಿಸಿದೆ.
ಭಾರತ ಇಂದು ಪ್ರಮುಖ ಸಾಧನೆಗೆ ಸಾಕ್ಷಿಯಾಗಿದೆ. ಭಾರತದ ಒಟ್ಟು ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣ 3,96, 792 ಪತ್ತೆಯಾಗುವ ಮೂಲಕ 4 ಲಕ್ಷಕ್ಕಿಂತ ಕಡಿಮೆ ಪ್ರಮಾಣ ದಾಖಲಾಗಿದೆ. ಸುಮಾರು 140 ದಿನಗಳ ನಂತರ ದಾಖಲಾದ ಅತೀ ಕಡಿಮೆ ಪ್ರಮಾಣದ ಪ್ರಕರಣವಾಗಿದೆ ಎಂದು ಕೇಂದ್ರ ಬಿಡುಗಡೆಗೊಳಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಖ್ಯಾತ ರಂಗಕರ್ಮಿ, ಲೇಖಕ ಉದ್ಯಾವರ ಮಾಧವ ಆಚಾರ್ಯ ನಿಧನ
ಕಳೆದ 24ಗಂಟೆಯಲ್ಲಿ 39,109 ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ ದೇಶದಲ್ಲಿ 91,39,901 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಒಟ್ಟು 14,05,573 ಮಂದಿ ಸಾವನ್ನಪ್ಪಿದ್ದಾರೆ. ಕೋವಿಡ್ 19 ಸೋಂಕಿನಿಂದ ಶೇ.94ರಷ್ಟು ಚೇತರಿಕೆ, ಸಕ್ರಿಯ ಪ್ರಕರಣಗಳು ಶೇ.1.45ರಷ್ಟು ಇದ್ದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.