![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Dec 7, 2020, 5:00 PM IST
ಬೆಂಗಳೂರು: ಮಾಜಿ ಕೇಂದ್ರ ಸಚಿವ, ಸದ್ಯ ಕಾಂಗ್ರೆಸ್ ಪಕ್ಷದ ಸಿ.ಎಂ. ಇಬ್ರಾಹಿಂ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದು, ಚರ್ಚೆ ನಡೆಸಿದ್ದಾರೆ. ಈ ಭೇಟಿ ಇದೀಗ ರಾಜಕೀಯ ಪಡಸಾಲೆಯಲ್ಲಿ ಹೊಸ ಚರ್ಚೆಗಳಿಗೆ ಕಾರಣವಾಗಿದೆ.
ಇಂದು ಸಿಎಂ ಇಬ್ರಾಹಿಂ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಕುಮಾರಸ್ವಾಮಿ, ಇಬ್ರಾಹಿಂ ಗೆ ಜೆಡಿಎಸ್ ಗೆ ವಾಪಸ್ ಬರುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ನ ದೌಲತ್ತೇ ಅದರ ದುಸ್ಥಿತಿಗೆ ಕಾರಣ, ನಾವೇನು ಗುಲಾಮರಲ್ಲ: ಕಿಡಿಕಾರಿದ ಎಚ್ ಡಿಕೆ
ಈ ಹಿಂದೆ ಜನತಾ ಪರಿವಾರದಲ್ಲಿದ್ದ ಸಿಎಂ ಇಬ್ರಾಹಿಂ ನಂತರ ಕಾಂಗ್ರೆಸ್ ಸೇರಿದ್ದರು. ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಲ್ಲೂ ಅಂತರ ಕಾಯ್ದುಕೊಂಡಿದ್ದರು. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಆಹ್ವಾನ ನೀಡಿರುವ ಕಾರಣ ಮತ್ತೆ ಜೆಡಿಎಸ್ ಗೆ ಸೇರ್ಪಡೆ ಆಗುತ್ತಾರಾ ಎನ್ನುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.
You seem to have an Ad Blocker on.
To continue reading, please turn it off or whitelist Udayavani.