194 ಜಾತಿಗೂ ನಿಗಮ ಮಾಡಿ : ಲಕ್ಷ್ಮಿನಾರಾಯಣ
ಬಿಜೆಪಿ ಸರ್ಕಾರದಿಂದ ಓಬಿಸಿ ವರ್ಗಕ್ಕೆ 320 ಕೋಟಿ ಕಡಿತ ಆರೋಪ
Team Udayavani, Dec 7, 2020, 6:36 PM IST
ಸಾಂದರ್ಭಿಕ ಚಿತ್ರ
ಬಾಗಲಕೋಟೆ : ರಾಜ್ಯ ಸರ್ಕಾರ ಬೆಳಗಾವಿ ಲೋಕಸಭೆ ಹಾಗೂ ರಾಜ್ಯದ ವಿವಿಧ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕನ್ನಡಿಗರಿಗೆ ಅವಮಾನಿಸುವ ರೀತಿ ಕೆಲವು ನಿಗಮ ಮಂಡಳಿ ರಚನೆ ಮಾಡಿದ್ದು, ಸರ್ಕಾರ ಎಲ್ಲ ಜಾತಿ-ಜನಾಗಂಗಳನ್ನು ಸಮಾನತೆ ದೃಷ್ಠಿಯಿಂದ ನೋಡುವುದಾದರೆ ಕೂಡಲೇ ಓಬಿಸಿ ಅಡಿ ಬರುವ 102 ಹಾಗೂ ಪ್ರವರ್ಗ 1ರಡಿ ಬರುವ 92 ಜಾತಿಗಳಿಗೂ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಅಧ್ಯಕ್ಷ, ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಡಿ. ಲಕ್ಷ್ಮಿನಾರಾಯಣ ಒತ್ತಾಯಿಸಿದರು.
ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಓಬಿಸಿ ಅಡಿ 102 ಉಪ ಜಾತಿಗಳಿವೆ. ಪ್ರವರ್ಗ 1ರಡಿ 92 ಜಾತಿಗಳಿವೆ.
ಅಲ್ಲದೇ ಓಬಿಸಿ ಅಡಿ 29 ನೇಕಾರ ಉಪ ಜಾತಿಗಳಿವೆ. ನೇಕಾರ ಅಭಿವೃದ್ಧಿ ನಿಗಮ ಹಾಗೂ ಎಲ್ಲ ಉಪ ಜಾತಿಗಳಿಗೂ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು. ಈ ಕುರಿತು ಡಿ. 15ರೊಳಗಾಗಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮಕ್ಕೆ ವಾರ್ಷಿಕ 400 ಕೋಟಿ
ಅನುದಾನ ನೀಡುತ್ತಿದ್ದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ 80 ಕೋಟಿಗೆ ಇಳಿಸಲಾಗಿದೆ. ಹಿಂದುಳಿದವರಿಗೆ 320 ಕೋಟಿ ಅನುದಾನ ಕಡಿತಗೊಳಿಸಿ, ವಂಚಿಸಲಾಗಿದೆ. ಇದರಿಂದ ಇಡೀ ರಾಜ್ಯದ ಹಿಂದುಳಿದ ವರ್ಗಗಳು ತೀವ್ರ ಅಸಮಾಧಾನಗೊಂಡಿವೆ ಎಂದರು.
ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ, ಮರಾಠಾ ಅಭಿವೃದ್ಧಿ ನಿಮಗಕ್ಕೆ 50 ಕೋಟಿ ಅನುದಾನ ನೀಡಲಾಗಿದೆ. ಈ
ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ, ಕರ್ನಾಟಕದಲ್ಲಿ ಕನ್ನಡಿಗರಿಗೆ ಅವಮಾನವಾಗುವ ರೀತಿ ಬೇರೆ ಸಮಾಜಕ್ಕೆ ನಿಗಮ ಮಾಡಿ, ಅನುದಾನ
ಕೊಡಲಾಗಿದೆ. ಆದರೆ, ಇಲ್ಲಿನ ಹಿಂದುಳಿದ ವರ್ಗಗಳಿಗೆ ಆದ್ಯತೆ ಕೊಟ್ಟಿಲ್ಲ. ಸರ್ಕಾರ ಹೀಗೆಯೇ ಜಾತಿ ಮಧ್ಯೆ ಒಡಕು ಮೂಡಿಸುವ ಕೆಲಸ
ಮಾಡುತ್ತಿದ್ದರೆ ಮುಂದೆ ತಮಿಳು, ತೆಲುಗು ಭಾಷಿಕರೂ ರಾಜ್ಯದಲ್ಲಿ ನಿಗಮಕ್ಕೆ ಒತ್ತಾಯ ಇಡುತ್ತಾರೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.