ರೈತರು ಸ್ವಾಭಿಮಾನಿಗಳು,ಹೇಡಿಗಳಲ್ಲ: ಶಾಸಕ

Team Udayavani, Dec 7, 2020, 7:42 PM IST

ರೈತರು ಸ್ವಾಭಿಮಾನಿಗಳು,ಹೇಡಿಗಳಲ್ಲ: ಶಾಸಕ

ದೇವನಹಳ್ಳಿ: ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳಲ್ಲ. ಇಂತಹ ಹೇಳಿಕೆ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್‌ಗೆ ಶೋಭೆ ತರುವಂತದ್ದಲ್ಲ ಎಂದು ಶಾಸಕಎಲ್‌.ಎನ್‌.ನಾರಾಯಣ ಸ್ವಾಮಿ ತಿರುಗೇಟು ನೀಡಿದರು.

ತಾಲೂಕಿನ ಹೆಗ್ಗನಹಳ್ಳಿ ಗ್ರಾಮದಲ್ಲಿ ಗ್ರಾಪಂ ಚುನಾವಣಾ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಪೊನ್ನಂ ಪೇಟೆ ಅರಣ್ಯ ಮಹಾವಿದ್ಯಾ ಲಯದಲ್ಲಿ ನಡೆದ ಬಿದಿರು ಸಂಸ್ಕರಣಾ ಮತ್ತು ಮೌಲ್ಯವರ್ಧನಾ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿ.ಸಿ. ಪಾಟೀಲ್‌ ಆತ್ಮಹತ್ಯೆಗೆ ಶರಣಾಗುವ ರೈತರು ಹೇಡಿಗಳು ಎಂದು ಹೇಳಿಕೆ ನೀಡಿರುವುದು, ಇಡೀ ರೈತ ಸಮುದಾಯಕ್ಕೆ ಅವಮಾನ ಮಾಡಿದಂತಾಗಿದೆ ಎಂದರು.

ಸರ್ಕಾರದ ಉನ್ನತ ಸ್ಥಾನದಲ್ಲಿರುವ ಕೃಷಿ ಸಚಿವರು ಇಂತಹ ಹೇಳಿಕೆಗಳನ್ನುನೀಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಬೇಜವಾಬ್ದಾರಿಯ ಹೇಳಿಕೆಯನ್ನು ನೀಡುವುದು ಸಮಂಜಸ ವಲ್ಲ. ಕೂಡಲೇ ಮುಖ್ಯಮಂತ್ರಿಗಳು ಕೃಷಿ ಸಚಿವರನ್ನು ಸಚಿವ ಸಂಪುಟ ದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಕ್ಷಮೆ ಕೇಳಿ: ರೈತ ಹುಟ್ಟು ಸ್ವಾಭಿಮಾನಿ ಮತ್ತು ಮರ್ಯಾದಸ್ತನಾಗಿದ್ದಾನೆ. ಸಾಲ ಸೋಲಮಾಡಿಕೊಂಡುಕೃಷಿಚಟುವಟಿಕೆ ನಡೆಸು ತ್ತಾರೆ. ಆದರೆ, ಬೆಳೆ ನಷ್ಟ, ಸಾಲಗಾರರ ಸುಳಿಯಲ್ಲಿ ಸಿಲುಕಿ ಮರ್ಯಾದೆಗೆ ಅಂಜಿ ದಿಕ್ಕುತೋಚದಂತಾಗಿ ಆತ್ಮ ಹತ್ಯೆಗೆ ಮುಂದಾಗುತ್ತಾರೆ. ಸರ್ಕಾರ ಕೂಡಲೇ ರೈತರ ಪರವಾಗಿದ್ದರೆ, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದರೆ, ಏಕೆ ಆತ್ಮಹತ್ಯೆಗೆ ಮುಂದಾಗುತ್ತಾರೆ. ಕೂಡಲೇ ಕೃಷಿಸಚಿವ ಬಿ.ಸಿ. ಪಾಟೀಲ್‌ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಹೇಳಿದರು.

ಕೃಷಿ ಸಚಿವರು ರೈತರಿಗೆ ಆತ್ಮಹತ್ಯೆ ಮಾಡಿಕೊಳ್ಳದಂತೆ, ಧೈರ್ಯ ತುಂಬುವ ಕೆಲಸ ಮಾಡಬೇಕೇ ವಿನಃ, ಇಂತಹ ಹೇಳಿಕೆ ನೀಡಿ, ಅನ್ನದಾತರಿಗೆ ಅಪಮಾನ ‌ ಮಾಡಿರುವುದು ಎಷ್ಟರ‌ ಮಟ್ಟಿಗೆ ಸರಿ, ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ರೈತರ ಸಂಕಷ್ಟಗಳನ್ನು ಅರಿತು, 25 ಸಾವಿರ ‌ಕೋಟಿ ರೂ. ರೈತರ ಸಾಲ ಮನ್ನಾ ಮಾಡಿ ನೆರವಾಗಿದ್ದರು. ಈಗೀನ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ರೈತ ವಿರೋಧಿ ಕಾನೂನುಗಳನ್ನು ತಂದುಅನ್ಯಾಯ ಮಾಡಲಾಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳಿಗೆ ಜನಸಾಮಾನ್ಯರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಆರೋಪಿಸಿದರು.

ಟಾಪ್ ನ್ಯೂಸ್

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.