ಲಾಟರಿಯಲ್ಲಿ ಒಲಿದ ಅದೃಷ್ಟ: ಭಕ್ತರಹಳ್ಳಿ MPCSನಲ್ಲಿ ಮತ್ತೊಮ್ಮೆ ಜೆಡಿಎಸ್‍ಗೆ ಅಧಿಕಾರ
Team Udayavani, Dec 8, 2020, 6:16 PM IST
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯೊಬ್ಬರಿಗೆ ಲಾಟರಿಯಲ್ಲಿ ಅಧ್ಯಕ್ಷರ ಸ್ಥಾನ ಒಲಿದು ಬಂದಿದ್ದು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಕ್ಷದ ಪಾಲಾಗಿದೆ.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ಬಿಟಿ ನಾಗೇಶ್ ಹಾಗೂ ಜೆಡಿಎಸ್ ಪಕ್ಷದಿಂದ ಬಿಎನ್ ವಿಜಯ್‍ಕುಮಾರ್ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಕೋಟೆ ಬಿಕೆ ಚನ್ನೇಗೌಡ ಹಾಗೂ ಜೆಡಿಎಸ್ ಪಕ್ಷದಿಂದ ರುಕ್ಮಿಣಿಯಮ್ಮ ನಾಮಪತ್ರವನ್ನು ಸಲ್ಲಿಸಿದರು.
ಚುನಾವಣೆಯ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಎನ್ ವಿಜಯ್‍ಕುಮಾರ್ ಮತ್ತು ಬಿಟಿ ನಾಗೇಶ್ ಪರವಾಗಿ ತಲಾ 06 ಮತಗಳು ಬಂದಿದವು ಒಂದು ಮತ ತಿರಸ್ಕೃತಗೊಂಡಿತು ಈ ಹಿನ್ನೆಲೆಯಲ್ಲಿ ನಡೆದ ಲಾಟರಿ ಪ್ರಕ್ರಿಯೆಯಲ್ಲಿ ಜೆಡಿಎಸ್ ಪಕ್ಷದ ಬಿಎನ್ ವಿಜಯ್‍ಕುಮಾರ್ ಅವರಿಗೆ ಅದೃಷ್ಟ ಲಕ್ಷ್ಮಿ ಒಲಿದು ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‍ನ ಕೋಟೆ ಬಿಕೆ ಚನ್ನೇಗೌಡ ಅವರಿಗೆ 07 ಮತಗಳು ಬಂದಿದ್ದು ಅವರು ತಮ್ಮ ಸಮೀಪದ ಸ್ಪರ್ಧಿ ರುಕ್ಮಿಣಿಯಮ್ಮ ಅವರನ್ನು ಒಂದು ಮತದ ಅಂತರದಿಂದ ಪರಾಭವಗೊಳಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಇದನ್ನೂ ಓದಿ:ಕೇಂದ್ರ v/s ರೈತರ ಬಿಕ್ಕಟ್ಟು ಅಂತ್ಯವಾಗುತ್ತಾ? 7ಗಂಟೆಗೆ ರೈತ ಮುಖಂಡರ ಜತೆ ಶಾ ಚರ್ಚೆ
ಇತ್ತೀಚೆಗೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತರು 07 ನಿರ್ದೇಶಕರು ಮತ್ತು ಜೆಡಿಎಸ್ ಪಕ್ಷದ ಬೆಂಬಲಿತರು 05 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದರು (ಒಬ್ಬರು ಅವಿರೋಧ ಆಯ್ಕೆ ಹೊರತುಪಡಿಸಿ). ಇದರಿಂದ ಕಳೆದ 15 ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವ ಲಕ್ಷಣಗಳು ಕಂಡು ಬಂದಿತು ಆದರೆ ಇಂದು ನಡೆದ ಚುನಾವಣೆಯಲ್ಲಿ ಲಾಟರಿಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯೊಬ್ಬರಿಗೆ ಅದೃಷ್ಟ ಒಲಿದು ಬಂದಿದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಇದರಿಂದ 15 ವರ್ಷದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯುವ ಕಾಂಗ್ರೆಸ್ ಪಕ್ಷದ ಕನಸು ಭಗ್ನವಾಗಿದೆ.
ಬಹುಮತ ಹೊಂದಿರುವ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಬಹುದೆಂಬ ಲೆಕ್ಕಾಚಾರ ಉಲ್ಟಾವಾಗಿದ್ದು ಕಾಂಗ್ರೆಸ್ ಬೆಂಬಲಿತ ನಿರ್ದೇಶಕರೊಬ್ಬರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್ ಮತ್ತು ಕಾಂಗ್ರೆಸ್ ಬೆಂಬಲಿತರಿಗೆ ಮತದಾನ ಮಾಡಿದ ಹಿನ್ನಲೆಯಲ್ಲಿ ಅವರ ಮತವನ್ನು ಚುನಾವಣಾಧಿಕಾರಿ ಬಿಎನ್ ಲೀಲಾವತಿ ಅವರು ತಿರಸ್ಕøತಗೊಳಿಸಿದರು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ತಲಾ 06 ಮತಗಳು ಪಡೆದಿರುವುದರಿಂದ ಚುನಾವಣಾಧಿಕಾರಿ ಲಾಟರಿ ಪ್ರಕ್ರಿಯೆ ನಡೆಸಿದರು ಅದರಲ್ಲಿ ಜೆಡಿಎಸ್ ಬೆಂಬಲಿತ ಬಿಎನ್ ವಿಜಯ್‍ಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಜೆಡಿಎಸ್ ಬೆಂಬಲಿತ ಬಿಎನ್ ವಿಜಯ್‍ಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಜೆಡಿಎಸ್ ಕಾರ್ಯಕರ್ತರು ನೂತನ ಅಧ್ಯಕ್ಷರಿಗೆ ಸಿಹಿ ತಿನ್ನಿಸಿ ಮಾಲಾರ್ಪಣೆ ಮಾಡಿ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು ನೂತನ ಅಧ್ಯಕ್ಷ ವಿಜಯ್‍ಕುಮಾರ್ ಮಾತನಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಲಭಿಸಿದ್ದು ತಮ್ಮ ಅವಧಿಯಲ್ಲಿ ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಹೇಳಿ ಎಲ್ಲಾ ಹಾಲು ಉತ್ಪಾದಕರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಂಪಿಸಿಎಸ್ ನಿರ್ದೇಶಕರಾದ ಎಸಿ ಚಂದ್ರಶೇಖರ್, ಕೆಸಿ ಕೇಶವಮೂರ್ತಿ, ಸು. ನಾರಾಯಣಸ್ವಾಮಿ, ರುಕ್ಮಿಣಿಯಮ್ಮ, ಭಕ್ತರಹಳ್ಳಿ ಯುವ ಮುಖಂಡರಾದ ಛಲವಾದಿ ಆನಂದ್, ಭಕ್ತರಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಸ್‍ಎನ್ ವೆಂಕಟೇಶ್, ಮಳ್ಳೂರು ಎಸ್‍ಎಫ್‍ಸಿಎಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಎಸ್ ನಾರಾಯಣಸ್ವಾಮಿ, ಜೆವಿ.ಮುನಿರಾಜು, ಮಂಜುನಾಥ್, ರಘುರಾಜ್, ಎಂಪಿಸಿಎಸ್ ಮಂಜು ರವಿಚಂದ್ರ,ಹಾಲು ಪರಿವೀಕ್ಷಕ ಅಶೋಕ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.