ಪ್ಯಾಸೆಂಜರ್‌ ರೈಲು ಮತ್ತೆ ಸಂಚಾರ


Team Udayavani, Dec 9, 2020, 5:30 PM IST

ಪ್ಯಾಸೆಂಜರ್‌ ರೈಲು ಮತ್ತೆ ಸಂಚಾರ

ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗೌರಿಬಿದನೂರು, ದೊಡ್ಡಬಳ್ಳಾಪುರ ತಾಲೂಕುಗಳ ಜನರಿಗೆ ಅನುಕೂಲವಾಗುವಂತೆ ಹಿಂದೂಪುರದಿಂದ ಯಶವಂತಪುರದವರೆಗೆ ಮತ್ತೆ ಪ್ಯಾಸೆಂಜರ್‌ ರೈಲು ಸಂಚಾರ ಆರಂಭಿಸಲಾಗಿದ್ದು,ಈ ರೈಲು ಪರೀಕ್ಷಾರ್ಥವಾಗಿ 10 ದಿನಗಳ ಕಾಲ ಸಂಚರಿಸಲಿದೆ ಎಂದು ಸಂಸದ ಬಿ.ಎನ್‌.ಬಚ್ಚೇಗೌಡ ತಿಳಿಸಿದ್ದಾರೆ.

ಸೋಮವಾರ ಆರಂಭವಾಗಿರುವ ಹಿಂದೂಪುರ- ಯಶವಂತಪುರ ರೈಲು ಸಂಚಾರದ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರೈಲು ಸಂಚಾರ ಸೇವೆಗೆ ರೈಲ್ವೆ ಇಲಾಖೆ ಮತ್ತೆ ಹಂತ ಹಂತವಾಗಿ ಚಾಲನೆ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗೌರಿಬಿದನೂರು, ತೊಂಡೇಬಾವಿ ಮತ್ತು ದೊಡ್ಡಬಳ್ಳಾಪುರದ ಮೂಲಕ 10 ದಿನಗಳ ಕಾಲ ಪರೀಕ್ಷಾರ್ಥವಾಗಿ ಹಿಂದೂಪುರ-ಯಶವಂತಪುರ ಪ್ಯಾಸೆಂಜರ್‌ ರೈಲು ಸಂಚರಿಸಲಿದೆ.

ವೇಳಾಪಟ್ಟಿ: ಹಿಂದೂಪುರದಿಂದ ಬೆಳಗ್ಗೆ 6 ಗಂಟೆಗೆ ಹೊರಡಲಿರುವ 6 ಗಂಟೆ 25 ನಿಮಿಷಕ್ಕೆ ಗೌರಿಬಿದನೂರು ತಲುಪಲಿದೆ. 6.41 ಕ್ಕೆ ತೊಂಡೇಬಾವಿ ತಲುಪಿ ನಂತರ 7ಗಂಟೆ 17 ನಿಮಿಷಕ್ಕೆ ದೊಡ್ಡಬಳ್ಳಾಪುರ ತಲುಪಲಿದೆ. 8 ಗಂಟೆ 25 ನಿಮಿಷಕ್ಕೆಯಶವಂತಪುರ ರೈಲು ನಿಲ್ದಾಣ ತಲುಪಲಿದೆ. ಇದೇ ರೈಲು ಮತ್ತೆ ಸಂಜೆ 6 ಗಂಟೆಗೆ ಯಶವಂತಪುರ ರೈಲು ನಿಲ್ದಾಣದಿಂದ ಅದೇ ಮಾರ್ಗದಲ್ಲಿ ಹೊರಟು ರಾತ್ರಿ8 ಗಂಟೆ25 ನಿಮಿಷಕ್ಕೆ ಹಿಂದೂಪುರ ತಲುಪಲಿದೆ ಎಂದು ತಿಳಿಸಿದರು.

ಹಂತಹಂತವಾಗಿ ಸಂಚಾರ ಸೇವೆ :

ನೈರುತ್ಯ ರೈಲ್ವೆ ವಲಯದ ಹಿರಿಯ ವ್ಯವಸ್ಥಾಪಕ ಎ.ಎನ್‌. ಕೃಷ್ಣಾರೆಡ್ಡಿ ಮಾಹಿತಿ ನೀಡಿ ಲಾಕ್‌ಡೌನ್‌ ತೆರವುಗೊಂಡ ನಂತರಕೇಂದ್ರ ಸರ್ಕಾರದ ಆದೇಶದಂತೆ ನೈರುತ್ಯ ರೈಲ್ವೆ ಹಂತ ಹಂತವಾಗಿ ಸಂಚಾರ ಸೇವೆ ಆರಂಭಿಸುತ್ತಿದ್ದು, ಈ ಹಿಂದೆ ನೈರುತ್ಯ ವಲಯದಲ್ಲಿ ಕಾಯ್ದಿರಿಸಲ್ಪಡುವ ಆಯ್ದಕೆಲವು ರೈಲುಗಳಸಂಚಾರ ಸೇವೆ ಪುನರಾರಂಭಿಸಲಾಗಿತ್ತು. ಈಗಕಾಯ್ದಿರಿಸದಟಿಕೆಟ್‌ ಅಂದರೆ ಪ್ಯಾಸೆಂಜರ್‌  ರೈಲುಗಳ ಸಂಚಾರ ಸೇವೆಯನ್ನೂ10 ದಿನಗಳ ಕಾಲ ಪರೀಕ್ಷಾರ್ಥವಾಗಿ ಸೋಮವಾರ ದಿಂದ ಆರಂಭಿಸಲಾಗಿದೆ. ಇದರಿಂದ ರೈತರು, ಜನಸಾಮಾನ್ಯರು ಹಾಗೂ ಖಾಸಗಿ ಮತ್ತು ಸರ್ಕಾರಿ ನೌಕರರು ತಮ್ಮ ದಿನನಿತ್ಯದ ಕೆಲಸಗಳಲ್ಲಿ ತೊಡಗಿಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. ಪರೀಕ್ಷಾರ್ಥವಾಗಿ ಸಂಚರಿಸುವ ರೈಲುಗಳ ಸೇವೆ ನೋಡಿಕೊಂಡು ನಂತರ ನಿಗದಿತ ಮಾರ್ಗಗಳಲ್ಲಿ ಸಂಚಾರ ಮುಂದುವರಿಸಲುಕ್ರಮಕೈಗೊಳ್ಳಲಾಗುವುದು. ಪರೀಕ್ಷಾರ್ಥ ಸಂಚರಿಸುವ ರೈಲು ಭಾನುವಾರ ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲಿಯೂ ಸಂಚರಿಸಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.