ಇಂದು ವಿಶ್ವ ಮಾನವ ಹಕ್ಕುಗಳ ದಿನಾಚರಣೆ: ನಾಗರಿಕರಾಗಿ ಬದುಕಲು ಮಾನವ ಹಕ್ಕುಗಳು ಅನಿವಾರ್ಯ
Team Udayavani, Dec 10, 2020, 8:30 AM IST
ಪ್ರಜಾಪ್ರಭುತ್ವದ ಜೀವಂತಿಕೆ ಇರುವುದೇ ನಾಗರಿಕ ಸಮಾಜದ ಸ್ವತಂತ್ರ ಬದುಕಿನಿಂದ. ಹಾಗಾಗಿ ಸಂವಿಧಾನ ಹಾಗೂ ಕಾನೂನು ನೀಡಿರುವ ಮಾನವ ಹಕ್ಕುಗಳನ್ನು ಬೆಂಬಲಿಸಿ, ಬಾಳಬೇಕಿದೆ.
ಮತ್ತೊಬ್ಬರ ಸ್ವಾತಂತ್ರ್ಯವನ್ನು ಗೌರವಿಸಿ ಬದುಕುವುದೇ ಮಾನವ ಹಕ್ಕುಗಳನ್ನು ಪಾಲನೆ ಮಾಡಿದಂತೆ. ಪ್ರತಿಯೊಬ್ಬ ಪ್ರಜೆಯೂ ಸ್ವತಂತ್ರವಾಗಿ ಜೀವಿಸುವ ಹಕ್ಕನ್ನು ಪಡೆದಿದ್ದು, ಅವುಗಳ ರಕ್ಷಣೆ ಮಾಡುವ ಕಾರಣಕ್ಕಾಗಿ ಡಿಸೆಂಬರ್ 10ರಂದು ವಿಶ್ವ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತಿದೆ. ʼಉತ್ತಮವಾಗಿ ಚೇತರಿಸಿಕೊಳ್ಳಿ; ಮಾನವ ಹಕ್ಕುಗಳಿಗಾಗಿ ನಿಂತುಕೊಳ್ಳಿ’ -ಇದು ಈ ಬಾರಿಯ ಧ್ಯೇಯ ವಾಕ್ಯವಾಗಿದೆ.
ಹಿನ್ನೆಲೆ
ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಘೋಷಿಸಲಾದ ಮಾನವ ಹಕ್ಕುಗಳನ್ನು 1948ರಲ್ಲಿ ವಿಶ್ವಸಂಸ್ಥೆ ಅಂಗೀಕರಿಸಿತು. ಅಂದಿನಿಂದ ಡಿ. 10 ಅನ್ನು “ವಿಶ್ವ ಮಾನವ ಹಕ್ಕುಗಳ ದಿನ’ವಾಗಿ ಆಚರಿಸಲಾಗುತ್ತದೆ. 1950ರ ಡಿಸೆಂಬರ್ 4ರಂದು ಪ್ಯಾರಿಸ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 317ನೇ ಅಧಿವೇಶನದಲ್ಲಿ ಮಾನವ ಹಕ್ಕುಗಳ ದಿನವನ್ನು ಔಪಚಾರಿಕವಾಗಿ ಅಂಗೀಕರಿಸಲಾಯಿತು. ಇದು ಮಾನವ ಹಕ್ಕುಗಳ ಕುರಿತಾದ ಮೊದಲ ಜಾಗತಿಕ ನಿರ್ಣಯ.
ಭಾರತ ಮತ್ತು ಮಾನವ ಹಕ್ಕುಗಳು
ವಿಶ್ವಸಂಸ್ಥೆ ಮಾನವ ಹಕ್ಕುಗಳನ್ನು ಘೋಷಿಸಿದ ಸಂದರ್ಭ ಭಾರತದಲ್ಲಿ ಸಂವಿಧಾನ ರಚನಾ ಪ್ರಕ್ರಿಯೆ ನಡೆಯುತ್ತಿತ್ತು. ವಿಶ್ವಸಂಸ್ಥೆಯ ಈ ನಿರ್ಧಾರದಿಂದ ಪ್ರೇರಣೆ ಪಡೆದು ದೇಶದ ಸಂವಿಧಾನದ ಪ್ರಸ್ತಾವನೆ ಸಹಿತ, ಅನುಚ್ಛೇದದಲ್ಲಿಯೂ ಮಾನವ ಹಕ್ಕುಗಳ ಬಗ್ಗೆ ಉಲ್ಲೇಖೀಸಲಾಯಿತು. ಭಾರತ ಸಂವಿಧಾನದ ಅನುಚ್ಛೇದ 32ರ ಅನುಸಾರ ಮಾನವ ಹಕ್ಕುಗಳ ರಕ್ಷಣೆ ಹಾಗೂ ಅನುಚ್ಛೇದ 226ರ ಪ್ರಕಾರ ಜಾರಿಗೊಳಿಸುವ ಜವಾಬ್ದಾರಿಯನ್ನು ನ್ಯಾಯಾಂಗಕ್ಕೆ ವಹಿಸಲಾಗಿದೆ.
1993ರಲ್ಲಿ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ https://nhrc.nic.in ) ಎಂಬ ಸ್ವಾಯತ್ತ ಸಾರ್ವಜನಿಕ ಸಂಸ್ಥೆಯನ್ನು ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಉತ್ತೇಜನಕ್ಕಾಗಿ ಸ್ಥಾಪಿಸಲಾಗಿದೆ. ಇದು ವ್ಯಕ್ತಿಯ ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಗೆ ಸಂಬಂಧಿಸಿದ ಹಕ್ಕುಗಳ ಮೇಲೆ ಕಾರ್ಯನಿರ್ವಹಿಸುತ್ತದೆ. ಜಾತಿ, ಮತ, ಧರ್ಮ, ಜನಾಂಗ, ಬಣ್ಣ, ಭಾಷೆ ಮತ್ತು ಲಿಂಗ ಎಂಬ ತಾರತಮ್ಯ ಇಲ್ಲದೆ ಪ್ರತಿಯೊಬ್ಬ ಮನುಷ್ಯನೂ ಮೂಲಭೂತ ಹಕ್ಕುಗಳಿಗೆ ಅರ್ಹನಾಗಿರುತ್ತಾನೆ ಮತ್ತು ಯಾರೊಬ್ಬನನ್ನೂ ಈ ಹಕ್ಕುಗಳಿಂದ ವಂಚಿತನಾಗಿಸುವಂತಿಲ್ಲ ಎಂಬುದನ್ನು ಇದು ಸಾರಿ ಹೇಳುತ್ತದೆ. ಬಹುತೇಕ ರಾಜ್ಯಗಳಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮಾನವ ಹಕ್ಕುಗಳ ಆಯೋಗಗಳು ಕಾರ್ಯನಿರ್ವಹಿಸುತ್ತಿವೆ.
ಬದುಕುವ ಹಕ್ಕು ಎಲ್ಲರಿಗೂ ಇದೆ
ಮನುಷ್ಯನಿಗೆ ಮುಖ್ಯವಾಗಿ ಬೇಕಾಗಿರುವುದು ಆಹಾರ, ವಸತಿ ಮತ್ತು ಬಟ್ಟೆ. ಇವುಗಳಿಲ್ಲದೆ ಮನುಷ್ಯನ ಜೀವನವನ್ನು ಊಹಿಸಲೂ ಅಸಾಧ್ಯ. ಈ ಮೂಲ ಸವಲತ್ತುಗಳನ್ನು ಪಡೆಯುವುದು ಪ್ರತಿಯೊಬ್ಬ ಪ್ರಜೆಯ ಜನ್ಮಸಿದ್ಧ ಹಕ್ಕಾಗಿದೆ. ಆದರೆ ಕೆಲವು ಸಂದರ್ಭಗಳಲ್ಲಿ ಮನುಷ್ಯನ ಈ ಮೂಲಭೂತ ಹಕ್ಕುಗಳನ್ನು ದಮನಿಸುವ ಪ್ರಯತ್ನಗಳು ನಡೆಯುತ್ತವೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಇತರರ ಬದುಕಿನ ಹಕ್ಕನ್ನು ಕಸಿಯುವುದು, ಹಿಂಸೆ ನೀಡುವುದು.. ಮೊದಲಾದವುಗಳು ಇದರ ವ್ಯಾಪ್ತಿಯೊಳಗೆ ಬರುತ್ತವೆ. ನಾವು ಪರರ ಸ್ವಾತಂತ್ರ್ಯವನ್ನು ಕೂಡ ಗೌರವಿಸಬೇಕಿದೆ.
ಮಾನವ ಹಕ್ಕುಗಳು ಯಾವುವು?
ಮಾನವ ಹಕ್ಕುಗಳ ರಕ್ಷಣೆ ಮತ್ತು ಪ್ರಚಾರಕ್ಕಾಗಿ ಮಾನವ ಹಕ್ಕುಗಳ ದಿನವನ್ನು ಘೋಷಿಸಲಾಯಿತು. ಈ ದಿನದಂದು ವ್ಯಕ್ತಿಯ ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಗೆ ಸಂಬಂಧಿಸಿದ ಹಕ್ಕುಗಳ ಬಗೆಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಜೀವಿಸುವುದು, ವಾಕ್ ಸ್ವಾತಂತ್ರ್ಯ, ಆಹಾರ, ಶಿಕ್ಷಣ, ಸಾಮಾಜಿಕ ಭದ್ರತೆ, ಸಂಘಟನೆ, ರಾಷ್ಟ್ರೀಯತೆ, ರಕ್ಷಣೆ, ಆರೋಗ್ಯ, ಧಾರ್ಮಿಕ ಸ್ವಾತಂತ್ರ್ಯದ ಜತೆಗೆ ದೌರ್ಜನ್ಯದ ವಿರುದ್ಧ ದನಿ ಎತ್ತುವ ಹಕ್ಕುಗಳು ಮಾನವ ಹಕ್ಕುಗಳ ವ್ಯಾಪ್ತಿಯಲ್ಲಿ ಬರುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.