ಕುಂದಾಪುರದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಅಗತ್ಯ ಕ್ರಮ: ಸವದಿ
Team Udayavani, Dec 9, 2020, 11:02 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ಒಳಗೊಂಡಂತೆ ಪ್ರತ್ಯೇಕ ಪ್ರಾದೇಶಿಕ ಸಾರಿಗೆ ಕಚೇರಿ ಪ್ರಾರಂಭಿಸುವ ಅಗತ್ಯವಿದ್ದು, ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಮುಂದೆ ಆದ್ಯತೆ ಮೇರೆಗೆ ಕಚೇರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದರು.
ಬುಧವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಬಿ. ಎಂ. ಸುಕುಮಾರ್ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲಾ ಕೇಂದ್ರದಿಂದ ಕುಂದಾಪುರ, ಬೈಂದೂರು ಸುಮಾರು 60ರಿಂದ 80 ಕಿ. ಮೀ. ದೂರದಲ್ಲಿದೆ. ಇಲ್ಲಿಂದ ನಿತ್ಯ ತುಂಬಾ ಮಂದಿ ವಾಹನ ನೋಂದಣಿಗಾಗಿ ಜಿಲ್ಲಾ ಕೇಂದ್ರಕ್ಕೆ ಬರುತ್ತಿದ್ದಾರೆ. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಾರಕ್ಕೊಮ್ಮೆ ನಡೆಸುತ್ತಿದ್ದ ಕ್ಯಾಂಪ್ ಕೂಡ ಸ್ಥಗಿತಗೊಂಡಿದೆ. ಕೂಡಲೇ ಕ್ಯಾಂಪ್ ಅನ್ನು ಮುಂದುವರಿಸಬೇಕು ಹಾಗೂ ಜತೆಗೆ ಶೀಘ್ರವಾಗಿ ಹೊಸ ಕಚೇರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಲಕ್ಷ್ಮಣ ಸವದಿ, ಕುಂದಾಪುರದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ ಪ್ರಾರಂಭಕ್ಕೆ ಹಿಂದಿನಿಂದಲೂ ಬೇಡಿಕೆ ಇದೆ. ಈ ಸಂಬಂಧ ಸರ್ವೆ ನಡೆಸಲಾಗಿದ್ದು, ಕಚೇರಿ ಪ್ರಾರಂಭಿಸುವ ಅಗತ್ಯವಿರುವುದನ್ನು ಮನಗಂಡಿದ್ದೇವೆ. ಕೋವಿಡ್ ಹಿನ್ನೆಲೆಯಲ್ಲಿ ಹೊಸ ಕಚೇರಿ ತೆರೆಯಲು, ಹೊಸ ಹುದ್ದೆ ಸೃಷ್ಟಿಗೆ ಆರ್ಥಿಕ ಇಲಾಖೆಯ ನಿರ್ಬಂಧವಿದೆ. ವಾರಕ್ಕೊಮ್ಮೆ ಕ್ಯಾಂಪ್ ಮುಂದುವರಿಸಲು ಶೀಘ್ರವೇ ಸೂಚನೆ ನೀಡಲಾಗುವುದು ಎಂದು ಹೇಳಿದರು.
ಸಾರಿಗೆ ನೌಕರರನ್ನು ಸರಕಾರಿ ನೌಕರರಾಗಿಸುವ ಚಿಂತನೆ ಇಲ್ಲ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ಆರ್ಥಿಕ ಸಮಸ್ಯೆಗೆ ಸಿಲುಕಿರುವ ಕಾರಣ ಸಾರಿಗೆ ನಿಗಮಗಳ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ಯಾವುದೇ ವಿಚಾರ ಸದ್ಯ ಪರಿಶೀಲನೆಯಲ್ಲಿ ಇಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ಬುಧವಾರ ಜೆಡಿಎಸ್‌ನ ಜಿ.ಟಿ.ದೇವೇಗೌಡ ಪ್ರಸ್ತಾಪಿಸಿದ ವಿಚಾರಕ್ಕೆ ಸಂಬಂಧಿಸಿ ಉತ್ತರಿಸುತ್ತಾ ಈ ಮಾಹಿತಿ ನೀಡಿದರು. ಇದಕ್ಕೂ ಮೊದಲು ಬಿಜೆಪಿಯ ಹರ್ಷವರ್ಧನ್ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮಣ ಸವದಿ, ಸಾರಿಗೆ ನಿಗಮಗಳಲ್ಲಿ ಒಟ್ಟು 1.30 ಲಕ್ಷ ನೌಕರರಿದ್ದು ನವೆಂಬರ್‌ವರೆಗೆ ಎಲ್ಲ ನೌಕರರ ಪೂರ್ಣ ವೇತನ ಪಾವತಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.