ವಂಡಾರು; ಸಿಡಿಲು ಬಡಿದು ಸಾಫ್ಟ್ವೇರ್ ಉದ್ಯೋಗಿ ಯುವಕ ಸಾವು
Team Udayavani, Dec 10, 2020, 11:00 PM IST
ಕೋಟ: ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ವಂಡಾರಿನ ಬೋರ್ಡಕಲ್ಲಿನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ನಿವಾಸಿ ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಮೃತಪಟ್ಟ ಯುವಕ.
ಮನೆಯೊಳಗಡೆ ಲ್ಯಾಪ್ಟಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲಿನ ಹೊಡೆತಕ್ಕೆ ಒಳಗಾಗಿ ಗಂಭೀರವಾಗಿ ಅಸ್ವಸ್ಥತಗೊಂಡಿದ್ದು ತತ್ ಕ್ಷಣ ಆತನನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಗೆ ಕರೆದೊಯ್ಯಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಚೇತನ್ ಮೃತಪಟ್ಟಿರುವುದಾಗಿ ತಿಳಿಸಿದರು.
ಈತ ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯ ಉದ್ಯೋಗಿಯಾಗಿದ್ದು ಕೊರೊನಾ ಸಮಸ್ಯೆಯ ಅನಂತರ ಹಲವು ತಿಂಗಳಿಂದ ಮನೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದ. ಈತನದ್ದು ತೀರಾ ಬಡತನದ ಕುಟುಂಬವಾಗಿದ್ದು ಸಾಕಷ್ಟು ಕಷ್ಟಪಟ್ಟು ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಹಾಗೂ ಮನೆಗೆ ಆಧಾರವಾಗಿದ್ದ. ಮೃತನು ತಂದೆ,ತಾಯಿ, ಸಹೋದರಿಯನ್ನು ಕಳೆದು ಅಗಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.