ಸಾರಿಗೆ ನೌಕರರ ಮುಷ್ಕರಕ್ಕೆ ಸಾರ್ವಜನಿಕರ ಆಕ್ರೋಶ!
Team Udayavani, Dec 11, 2020, 8:47 AM IST
ವಿಜಯಪುರ: ಸರ್ಕಾರಿ ಸಾರಿಗೆ ಸಂಸ್ಥೆಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ನಿರಾಕರಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸರ್ಕಾರಿ ಸಾರಿಗೆ ನೌಕರರು ಪ್ರತಿಭಟಿಸಲು ಮುಂದಾಗಿದ್ದಕ್ಕೆ ಜಿಲ್ಲೆಯಲ್ಲಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಮುದ್ದೇಬಿಹಾಳ ಬಸ್ ನಿಲ್ದಾಣದಲ್ಲಿ ಸಾರಗೆ ಸಂಸ್ಥೆ ನೌಕರರು ಶುಕ್ರವಾರ ಬೆಳಿಗ್ಗೆ ದಿಢೀರ್ ಮುಷ್ಕರಕ್ಕೆ ಮುಂದಾಗಿದ್ದರು. ಸೇವೆಗೆ ಹಾಜರಾಗಲು ನಿಲ್ದಾಣಕ್ಕೆ ಬಸ್ ತಂದು ನಿಲ್ಲಿಸಿದ ಸಿಬ್ಬಂದಿ ವಿರುದ್ಧ ಹೋರಾಟ ಬೆಂಬಲಿತ ನೌಕರರು ಸಂಚಾರ ತಡೆಯಲು ಮುಂದಾದರು.
ಈ ಹಂತದಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಸಾರಿಗೆ ಸಂಸ್ಥೆ ನೌಕರರ ಸಂಘದ ಪದಾಧಿಕಾರಿಗಳ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ರಾಜ್ಯ ಸಾರಿಗೆ ನೌಕರರ ಮುಷ್ಕರ: ಬಸ್ ಬಂದ್, ಜನರ ಪರದಾಟ
ಈ ಹಂತದಲ್ಲಿ ಸ್ಥಳಕ್ಕೆ ಆಗಮಿಸಿದ ಘಟಕ ವ್ಯವಸ್ಥಾಪಕ ರಾಹುಲ್ ಹೊನಸೂರೆ, ಪೂರ್ವ ಮಾಹಿತಿ ನೀಡದೇ ದಿಢೀರನೆ ಮುಷ್ಕರ ನಡೆಸಲು ಮುಂದಾಗಿದ್ದ ತಮ್ಮ ಸಿಬ್ಬಂದಿಗೆ ಬುದ್ದಿವಾದ ಹೇಳಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ಸಾರ್ವಜನಿಕರ ಮಧ್ಯೆ ನಡೆಸಯುತ್ತಿದ್ದ ವಾಗ್ವಾದ ನಡೆಯುವ ಮಾಹಿತಿ ಅರಿತ ಪಿಎಸೈ ಮಲ್ಲಪ್ಪ ಮಡ್ಡಿ ಸಾರಿಗೆ ಸಂಸ್ಥೆ ನೌಕರ ಸಂಘದ ಪದಾಧಿಕಾರಿಗಳ ಮನವೊಲಿಸಲು ಮುಂದಾದರು.
ದಿಢೀರ್ ಮುಷ್ಕರದಿಂದ ಒಂದು ಗಂಟೆಗೂ ಹೆಚ್ಚು ಮುದ್ದೇಬಿಹಾಳ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.