ಬಹುಗ್ರಾಮ ಕುಡಿವ ನೀರಿಗೆ 166 ರೂ. ಕರಾರು
Team Udayavani, Dec 11, 2020, 3:57 PM IST
ಹನೂರು: ಕ್ಷೇತ್ರ ವ್ಯಾಪ್ತಿಯ 1ನೇ ಹಂತದ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ 166 ಕೋಟಿ ರೂ.ಗೆಕರಾರು ಮಾಡಿಕೊಳ್ಳಲಾಗಿದ್ದು, 51.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಬಾಕಿ ಅನುದಾನವನ್ನು ಭೌತಿಕಪ್ರಗತಿಯ ಅನುಸಾರಬಿಡುಗಡೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್‌ರಾಜ್ ಸಚಿವಕೆ.ಎಸ್.ಈಶ್ವರಪ್ಪ ತಿಳಿಸಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ನರೇಂದ್ರಅವರ ಪ್ರಶ್ನೆಗೆಉತ್ತರಿಸಿದ ಸಚಿವಈಶ್ವರಪ್ಪ, ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ 1ನೇ ಹಂತದ ಕಾಮಗಾರಿ ಆರಂಭವಾಗಿದ್ದು, 166 ಕೋಟಿವೆಚ್ಚದ ಕಾಮಗಾರಿಗೆಕರಾರು ಮಾಡಿಕೊಳ್ಳಲಾಗಿದೆ. ಈ ಪೈಕಿ ಇದೀಗ 51.50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಇನ್ನು 2ನೇ ಹಂತದ ಕುಡಿಯುವ ನೀರಿನ ಯೋಜನೆಯಕಾಮಗಾರಿಯೂ ಸಹ ಟೆಂಡರ್ ಹಂತದಲ್ಲಿದ್ದು ಪ್ರಕ್ರಿಯೆ ಪೂರ್ಣಗೊಂಡು ಗುತ್ತಿಗೆದಾರರುನಿಯೋಜನೆಗೊಂಡ ಬಳಿಕ ಭೌತಿಕ ಪ್ರಗತಿಗನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಉತ್ತರಿಸಿದರು.
ಆಸ್ಪತ್ರೆ ಮೇಲ್ದರ್ಜೆ ಪ್ರಸ್ತಾವನೆ: ವಿಧಾನಸಭಾ ಅಧೀವೇಶನದಲ್ಲಿ ಹನೂರು ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವುದು ತಮ್ಮ ಗಮಕನ್ನೆ ಬಂದಿದೆಯೇ? ಇಲ್ಲಿನ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಕ್ರಮವಹಿಸಲಾಗಿದೆಯೇಎಂದು ಶಾಸಕ ನರೇಂದ್ರ ಪ್ರಶ್ನಿಸಿದ್ದರು.
ಶಾಸಕರ ಪ್ರಶ್ನೆಗೆ ಉತ್ತರಿಸಿದ ಸಚಿವರು2017ರಲ್ಲಿ ಹನೂರನ್ನು ನೂತನ ತಾಲೂಕು ಕೇಂದ್ರವಾಗಿಘೋಷಣೆ ಮಾಡಿರುವುದು ತಮ್ಮ ಗಮನಕ್ಕೆಬಂದಿದೆ. ತಾಲೂಕು ಕೇಂದ್ರವಾಗಿರುವ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಪರಿಶೀಲನೆ ಹಂತದಲ್ಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಸಚಿವ ಡಾ|ಸುಧಾಕರ್ ಲಿಖೀತ ಹೇಳಿಕೆ ನೀಡಿದ್ದಾರೆ.
ಪಶು ಇಲಾಖೆ ಖಾಲಿ ಹುದ್ದೆಗಳು ಶೀಘ್ರಭರ್ತಿ :
ಚಾಮರಾಜನಗರ ಜಿಲ್ಲೆಯಲ್ಲಿನ ಪಶು ಚಿಕಿತ್ಸಾಲಯ ಮತ್ತು ಸಿಬ್ಬಂದಿ ಕೊರೆತೆ ಬಗ್ಗೆ ಸದನದಲ್ಲಿ ಶಾಸಕ ನರೇಂದ್ರ ಅವರ ಪ್ರಶ್ನೆಗೆ ಪಶು ಸಂಗೋಪನೆ ಸಚಿವ ಪ್ರಭುಚವ್ಹಾಣ್ ಉತ್ತರಿಸಿದ್ದಾರೆ. ಜಿಲ್ಲೆಯಲ್ಲಿ 83 ಪಶು ವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು ವಿವಿಧ ಹಂತಗಳ 179 ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳ ಭರ್ತಿಗಾಗಿ ಈಗಾಗಲೇ ಕ್ರಮವಹಿಸಲಾಗಿದ್ದು ಆರ್ಥಿಕ ಇಲಾಖೆಯು ಸಹಮತಿ ನೀಡದ ಹಿನ್ನೆಲೆ ಹೊಸ ನೇಮಕಾತಿಗಳು ಸಾಧ್ಯವಾಗಿಲ್ಲ. ಕೆಲ ಹುದ್ದೆಗಳಿಗೆ ಮುಂಬಡ್ತಿ ಮುಖೇನ ಆದ್ಯತೆ ಮೇರೆಗೆ ಭರ್ತಿ ಮಾಡಲು ಕ್ರಮವಹಿಸಲಾಗಿದೆ.81ಡಿ ದರ್ಜೆಯ ಸಿಬ್ಬಂದಿ ಕೊರತೆಯಿದ್ದು41 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲಾಗಿದೆ ಎಂದು ಲಿಖೀತ ಉತ್ತರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.