ದೇಗುಲ ಅಭಿವೃದ್ಧಿಗೆ ಗ್ರಾಪಂ ಸದಸ್ಯ ಸ್ಥಾನ ಹರಾಜು!
Team Udayavani, Dec 11, 2020, 7:20 PM IST
ಚಳ್ಳಕೆರೆ: ದೇವಾಲಯದ ಜೀರ್ಣೋದ್ಧಾರಕ್ಕೆ ಗ್ರಾಪಂ ಸದಸ್ಯ ಸ್ಥಾನಗಳನ್ನು ಹರಾಜು ಹಾಕಿ ಹಣ ಸಂಗ್ರಹಿಸಿ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ನಡೆದಿದೆ.
ಯಾದಲಗಟ್ಟೆ ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು ನಾಲ್ಕು ಸ್ಥಾನಗಳಿವೆ. ಅದರಲ್ಲಿ ಎರಡುಸಾಮಾನ್ಯ ಮಹಿಳೆ, ಒಂದು ಸಾಮಾನ್ಯ ಪುರುಷ ಹಾಗೂ ಒಂದು ಪರಿಶಿಷ್ಟ ಪಂಗಡದ ಪುರುಷ ಮೀಸಲಾತಿ ಇದೆ. ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಗ್ರಾಮಸ್ಥರು ಸಭೆ ಸೇರಿ ಚುನಾವಣೆ ಮೂಲಕ ಆಯ್ಕೆ ಮಾಡುವುದುಬೇಡ, ಚುನಾವಣೆಯಾದರೆ ಅನಗತ್ಯವಾಗಿ ಗ್ರಾಮದಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಎಂಬ ಉದ್ದೇಶದಿಂದ ದೇವಸ್ಥಾನ ಅಭಿವೃದ್ಧಿಗೆ ಇಂತಿಷ್ಟುಹಣ ನೀಡುವಂತೆ ಆಕಾಂಕ್ಷಿಗಳ ಮನವೊಲಿಸಿ ಒಟ್ಟು ನಾಲ್ಕು ಜನ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಸಾಮಾನ್ಯ ವರ್ಗದ ಪುರುಷ ಸ್ಥಾನಕ್ಕೆ ಭೀಮಣ್ಣ, ಪರಿಶಿಷ್ಟ ಪಂಗಡ ಸ್ಥಾನಕ್ಕೆ ಬೊಮ್ಮಜ್ಜ, ಸಾಮಾನ್ಯ ಮಹಿಳೆ ಎರಡು ಸ್ಥಾನಗಳಿಗೆ ಲಕ್ಷ್ಮಿದೇವಿ ತಿಪ್ಪೇಸ್ವಾಮಿ, ಶಾಂತಮ್ಮ ಭೀಮಣ್ಣ ಅವರನ್ನು ಆಯ್ಕೆಮಾಡಲಾಗಿದೆ. ಪ್ರತಿಯೊಬ್ಬರೂ ದೇವಸ್ಥಾನದ ಅಭಿವೃದ್ಧಿಗೆ 3.50 ಲಕ್ಷ ರೂ. ನೀಡಬೇಕೆಂದುಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಆಯ್ಕೆಯಾದ ನಾಲ್ವರು 50 ಸಾವಿರ ರೂ.ಗಳನ್ನು ಮುಂಗಡವಾಗಿ ನೀಡಿದ್ದಾರೆ.
ವರದಿ ನೀಡಲು ಸೂಚನೆ: ಯಾದಲಗಟ್ಟೆ ಗ್ರಾಮದ ನಾಲ್ಕು ಸ್ಥಾನಗಳಿಗೆ ನಿಯಮಬಾಹಿರವಾಗಿಗ್ರಾಮಸ್ಥರು ನಾಲ್ಕು ಜನ ಸದಸ್ಯರನ್ನು ಆಯ್ಕೆಮಾಡಿದ ಬಗ್ಗೆ ಮಾಹಿತಿ ಪಡೆದ ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್, ಗ್ರಾಮಕ್ಕೆ ತೆರಳಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ತಳಕು ವಿಭಾಗದ ಕಂದಾಯಾಧಿಕಾರಿ ರಫಿ ಅವರಿಗೆ ಸೂಚಿಸಿದ್ದಾರೆ. ತಹಶೀಲ್ದಾರ್ ಸೂಚನೆ ಮೇರೆಗೆ ಯಾದಲಗಟ್ಟೆ ಗ್ರಾಮಕ್ಕೆ ಕಂದಾಯಾಧಿಕಾರಿ ರಫಿ ಮತ್ತು ಗ್ರಾಮ ಲೆಕ್ಕಿಗ ಜಯಣ್ಣ ಭೇಟಿ ನೀಡಿದ್ದರು. ನಿಯಮ ಮೀರಿ ಗ್ರಾಪಂ ಸದಸ್ಯರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಕಾನೂನು ಬಾಹಿರ. ಹಾಗಾಗಿ ನಿಮ್ಮೆಲ್ಲರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.