ಮನೆಯಲ್ಲಿ ಖಾಲಿ ಇಟ್ಟಿರುವ ಪುಸ್ತಕ ಜೋಳಿಗೆಗೆ ಹಾಕಿ


Team Udayavani, Dec 12, 2020, 7:12 PM IST

ಮನೆಯಲ್ಲಿ ಖಾಲಿ ಇಟ್ಟಿರುವ ಪುಸ್ತಕ ಜೋಳಿಗೆಗೆ ಹಾಕಿ

ದೋಟಿಹಾಳ: ಮನೆಯಲ್ಲಿ ಓದದೇ ಖಾಲಿ ಇಟ್ಟಿರುವ ಪುಸ್ತಕಗಳನ್ನು ಹಾಳು ಮಾಡದೇ,ಮನೆ ಬಾಗಿಲಿಗೆ ಬಂದ ಜೋಳಿಗೆಗೆ ಪುಸ್ತಕಹಾಕುವುದರ ಮೂಲಕ ಬಡ ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಲು ಪ್ರತಿಯೊಬ್ಬರೂ ಮುಂದೆ ಬರಬೇಕು ಎಂದು ಪಿಡಿಒ ಚಂದ್ರಶೇಖರ ಕಂದಕೂರ ಹೇಳಿದರು.

ಕಿಲ್ಲಾರಹಟ್ಟಿ ಗ್ರಾಪಂ ವತಿಯಿಂದ ಪುಸ್ತಕ ಜೋಳಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪುಸ್ತಕಗಳು ವಿದ್ಯಾರ್ಥಿಗಳ ಉಜ್ಜಲ ಭವಿಷ್ಯ ರೂಪಿಸುತ್ತವೆ. ಗ್ರಾಮೀಣ ಭಾಗದ ಅನೇಕ ಕಡೆಗಳಲ್ಲಿ ಪುಸ್ತಕಗಳು ಸಿಗದೇ ಓದುಗರು ನಿರಾಸೆ ಅನುಭವಿ ಸುತ್ತಿದ್ದಾರೆ. ಕೋವಿಡ್‌-19 ಇರುವುದರಿಂದ ಶಾಲೆಗಳಿಗೆ ರಜೆ ನೀಡಲಾಗಿದೆ. ಶಾಲಾ ಮಕ್ಕಳಲ್ಲಿ ಓದುವ ಹವ್ಯಾಸಕಡಿಮೆಯಾಗುತ್ತಿದೆ. ಹೀಗಾಗಿ ಗ್ರಂಥಾಲಯಗಳಲ್ಲಿ ಶಾಲಾ ಮಕ್ಕಳ ಹೆಸರು ನೋಂದಾಯಿಸಿಕೊಂಡುಅವರಿಗೆ ಓದುವ ಹವ್ಯಾಸ ಹೆಚ್ಚಿಸಬಹುದು. ಅದಕ್ಕಾಗಿ ಪುಸ್ತಕಗಳನ್ನು ಹಾಳು ಮಾಡದೇ, ಮನೆಬಾಗಿಲಿಗೆ ಬಂದ ಜೋಳಿಗೆಗೆ ಪುಸ್ತಕ ಹಾಕಿರಿ. ಇವುಗಳನ್ನು ಗ್ರಂಥಾಲಯದಲ್ಲಿ ಸುರಕ್ಷಿತವಾಗಿಇಟ್ಟು ವಿದ್ಯಾರ್ಥಿಗಳಿಗೆ ಮತ್ತು ಓದುಗಾಗರಿಗೆಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಜೋಳಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಈ ವೇಳೆ ಶಾಲಾ ಮಕ್ಕಳು, ಗ್ರಾಮಸ್ಥರು ಮತ್ತು ಗ್ರಾಪಂ ಸಿಬ್ಬಂದಿ ಇದ್ದರು.

ಮಕ್ಕಳ ಶೈಕ್ಷಣಿಕ ಬದುಕಿಗೆ ಓದುವ ಬೆಳಕು ಸ್ಫೂರ್ತಿ :

ಕಾರಟಗಿ: ಮಕ್ಕಳ ಸ್ನೇಹಿ ಗ್ರಾಪಂ ಮತ್ತು “ಓದುವ ಬೆಳಕು’ ಕಾರ್ಯಕ್ರಮದಡಿ ತಾಲೂಕಿನ ಸಿದ್ದಾಪುರ ಗ್ರಾಪಂ ವತಿಯಿಂದ ಗುರುವಾರ ಪುಸ್ತಕ ಜೋಳಿಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಜಿಪಂ ಮಾಜಿ ಅಧ್ಯಕ್ಷ ವಿಶ್ವನಾಥರೆಡ್ಡಿ ಹೊಸಮನಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಹೊಸ ಹೊಸ ಕಾರ್ಯಕ್ರಮಗಳನ್ನು ರೂಪಿಸಿ, ಮಕ್ಕಳ ಶೈಕ್ಷಣಿಕ ಬದುಕಿಗೆ ಸ್ಫೂರ್ತಿ ನೀಡಲಿ. ಆ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು. ನಂತರ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ಶಿಕ್ಷಕ ವೃಂದ, ಗ್ರಾಪಂ ಸಿಬ್ಬಂದಿ, ಅಂಗನವಾಡಿ, ಆಶಾ, ಆರೋಗ್ಯ ಇಲಾಖೆಯ ಸಿಬ್ಬಂದಿ, ವಸತಿ ನಿಲಯಗಳ ವಾರ್ಡ್‌ನ್‌, ಸಿಬ್ಬಂದಿ ಹಾಗೂ ಬಿಎಲ್‌ಒಗಳು ಗ್ರಾಮದ ಪ್ರತಿಯೊಂದು ವಾರ್ಡ್ ಗಳ ಮೂಲಕ ತೆರಳಿ ನಾಗರಿಕರಿಂದ ಸುಮಾರು 300ಕ್ಕೂ ಹೆಚ್ಚು ಪುಸ್ತಕಗಳನ್ನು ಜೋಳಿಗೆಯಲ್ಲಿ ಸಂಗ್ರಹಿಸಿ ಗ್ರಂಥಾಲಯಕ್ಕೆ ಒಪ್ಪಿಸಲಾಯಿತು. ಕಾರಟಗಿ ತಾಪಂ ಅಧ್ಯಕ್ಷ ಪ್ರಕಾಶ ಭಾವಿ, ಸಿದ್ದಾಪುರ ಪ್ರಭಾರಿ ಸಿಆರ್‌ಪಿ ಶಶಿಧರ ಸ್ವಾಮಿ, ಉಳೇನೂರು ಸಿಆರ್‌ಪಿ ನಜೀರ್‌ ಅಹಮ್ಮದ್‌,ಚಂದ್ರ ಶೇಖರ ಗಣವಾರಿ, ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷೆ, ಪಿಡಿಒ ಸಾಯಿನಾಥ, ಗ್ರಾಪಂ ಸರ್ವ ಸದಸ್ಯರು ಇದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.