ಸರ್ಕಾರ ಮಾತುಕತೆಗೆ ಸದಾ ಸಿದ್ದವಿದೆ; ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸವದಿ ಮನವಿ
Team Udayavani, Dec 12, 2020, 8:55 PM IST
ಬೆಂಗಳೂರು: ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಸ್ಥಗಿತಗೊಂಡಿರುವುದು, ಮುಷ್ಕರ ನಡೆಯುವಂತಾಗಿರುವುದು ಮತ್ತು ಬಸ್ಸುಗಳಿಗೆ ಕಲ್ಲು ತೂರಾಟ ಹಾಗೂ ಹಾನಿಗೊಳಿಸುವಿಕೆಯಂತಹ ಅಹಿತಕರ ಘಟನೆ ನಡೆದಿರುವುದು ನಿಜಕ್ಕೂ ದುರ್ದೈವದ ಸಂಗತಿಯಾಗಿದೆ. ಈ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಸುಮಾರು 1.30 ಲಕ್ಷ ನೌಕರರ ಹಿತಾಸಕ್ತಿ ರಕ್ಷಿಸಲು ನಮ್ಮ ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಸಾರಿಗೆ ಸಿಬ್ಬಂದಿಗಳ ಬಗ್ಗೆ ನನಗೆ ಮತ್ತು ನಮ್ಮ ಸರ್ಕಾರಕ್ಕೆ ಯಾವತ್ತೂ ಸಹಾನುಭೂತಿ ಇದೆ. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿದ್ದರೂ ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿಯೂ ಸಹ ಎಲ್ಲಾ ಸಿಬ್ಬಂದಿಗಳಿಗೆ ಯಾವುದೇ ಕಡಿತವಿಲ್ಲದೇ ಸಂಬಳ ನೀಡಿದ್ದು ಇದಕ್ಕೆ ನಿದರ್ಶನವಾಗಿದೆ.
ಕೋವಿಡ್ ನಿಂದಾಗಿ ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ನೌಕರರ ಕುಟುಂಬದವರಿಗೆ ಇನ್ನು 15 ದಿನಗಳೊಳಗಾಗಿ 30 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಮತ್ತೊಮ್ಮೆ ನಾನು ಭರವಸೆ ನೀಡಿದ್ದೇನೆ. ಇನ್ನು ಸಿಬ್ಬಂದಿಗಳ ಉಳಿದ ಬೇಡಿಕೆಗಳ ಬಗ್ಗೆ ಚರ್ಚಿಸಿ ಮಾರ್ಗೋಪಾಯಗಳನ್ನು ಕಂಡುಹಿಡಿಯಲು ನಮ್ಮ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸಲು ಸದಾ ಸಿದ್ಧವಿದೆ. ಆದ್ದರಿಂದ ಕೋಟ್ಯಂತರ ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಈ ಮುಷ್ಕರವನ್ನು ಕೈಬಿಟ್ಟು ತಮ್ಮ ಕರ್ತವ್ಯಕ್ಕೆ ವಾಪಸಾಗಬೇಕೆಂದು ನಾನು ನಮ್ಮ ಸಾರಿಗೆ ಸಂಸ್ಥೆಗಳ ಎಲ್ಲಾ ನೌಕರ ಬಾಂಧವರಲ್ಲಿ ಮತ್ತೊಮ್ಮೆ ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.
ಇದನ್ನೂ ಓದಿ: ತೀವ್ರ ಸ್ವರೂಪ ಪಡೆದ ಸಾರಿಗೆ ನೌಕರರ ಮುಷ್ಕರ: ಅಧಿಕಾರಿಗಳ ಮನವಿ ಯತ್ನ ವಿಫಲ
ನಮ್ಮ ಸಾರಿಗೆ ಸಂಸ್ಥೆಗಳ ಯಾವುದೇ ಒಕ್ಕೂಟಕ್ಕೆ ಸೇರಿಲ್ಲದವರು ಏಕಾಏಕಿಯಾಗಿ ಯಾವುದೇ ಮುನ್ಸೂಚನೆ ನೀಡದೇ ಬಸ್ ಸಂಚಾರ ಸ್ಥಗಿತಗೊಳ್ಳುವಂತೆ ಮುಷ್ಕರಕ್ಕೆ ಕರೆಕೊಟ್ಟಿರುವುದು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ತವ್ಯಕ್ಕೆ ಬಂದ ಕೆಲವು ಸಿಬ್ಬಂದಿಗಳಿಗೆ ತೊಂದರೆ ನೀಡಿರುವುದು ಹಾಗೂ ಸಾರಿಗೆ ಸಂಸ್ಥೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಯಾಗುವಂತೆ ವರ್ತಿಸಿರುವುದು ದುರದೃಷ್ಟಕರವಾಗಿದೆ.
ಇಂತಹ ಬೆಳವಣಿಗೆಗಳಿಂದ ಸಾರಿಗೆ ಸಂಸ್ಥೆಗಳ ನೌಕರರಿಗೆ ದೊಡ್ಡ ಹಾನಿಯಾಗುವುದಲ್ಲದೇ ಸಾರ್ವಜನಿಕರಿಗೆ ಅನವಶ್ಯಕವಾಗಿ ತೊಂದರೆ ಉಂಟಾಗುವುದಕ್ಕೆ ಕಾರಣವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸಾರಿಗೆ ಮಿತ್ರರು ಸರ್ಕಾರದೊಂದಿಗೆ ಪರಸ್ಪರ ಸಹಕಾರದೊಂದಿಗೆ ತಮ್ಮ ದೈನಂದಿನ ಕರ್ತವ್ಯ ಮುಂದುವರೆಸಬೇಕೆಂದು ನಾನು ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇನೆ.
ಸಾರಿಗೆ ಸಿಬ್ಬಂದಿಗಳೆಂದರೆ ನನಗೆ ನನ್ನ ಕುಟುಂಬವಿದ್ದಂತೆ, ಅವರ ಸಂಕಷ್ಟಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ. ಹಿಂದೆಯೂ ಅನೇಕ ಸಂದರ್ಭಗಳಲ್ಲಿ ಇದನ್ನು ಸಾರಿಗೆ ಸಿಬ್ಬಂದಿಗಳು ಮನಗಂಡಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳೂ ಸಹ ಸಾರಿಗೆ ಇಲಾಖೆಯ ಎಲ್ಲಾ ನೌಕರರ ಬೇಡಿಕೆಗಳ ಬಗ್ಗೆ ಉದಾರವಾಗಿ ನಡೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಮುಂದೆಯೂ ನಮ್ಮ ಸಾರಿಗೆ ಸಿಬ್ಬಂದಿಗಳು ತಮ್ಮ ಬೇಡಿಕೆಗಳನ್ನು ತಿಳಿಸಬೇಕೆಂದರೆ ನನ್ನ ಬಳಿ ಬರುವುದಕ್ಕೆ ಸದಾ ಮುಕ್ತ ಅವಕಾಶವಿದೆ. ಈ ಬಗ್ಗೆ ಯಾವುದೇ ಆತಂಕ ಬೇಡ. ನಮ್ಮ ಸಾರಿಗೆ ಒಕ್ಕೂಟಗಳು ಮತ್ತು ಸಿಬ್ಬಂದಿಗಳು ನನ್ನನ್ನು ಭೇಟಿ ಮಾಡಿ ತಮ್ಮ ಕಷ್ಟಸುಖಗಳನ್ನು ಹೇಳಿಕೊಳ್ಳುವುದಕ್ಕೆ ಸದಾ ಸ್ವಾಗತವಿದೆ ಎಂದು ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಕೃಷಿ ಕಾಯ್ದೆ ವಿರೋಧಿಸಿ ಡಿ.14ರಂದು ರೈತ ಮುಖಂಡರಿಂದ ಉಪವಾಸ ಸತ್ಯಾಗ್ರಹ: ವರದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.