ಕೋವಿಡ್19: ದೇಶದಲ್ಲಿ 30ಸಾವಿರ ಹೊಸ ಪ್ರಕರಣ; 391 ಸಾವು, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ !
Team Udayavani, Dec 13, 2020, 11:00 AM IST
ನವದೆಹಲಿ: ಭಾರತದಲ್ಲಿ ಭಾನುವಾರದ (ಡಿ.13) ವೇಳೆಗೆ ಕೋವಿಡ್ ಸೋಂಕಿತರ ಸಂಖ್ಯೆ 98,57,029 ತಲುಪಿದ್ದು, ಕಳೆದ 24 ಗಂಟೆಗಳಲ್ಲಿ 30,254 ಹೊಸ ಪ್ರಕರಣಗಳು ದಾಖಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಈಗಾಗಲೇ 93,57,464 ಮಂದಿ ಸೋಂಕಿತರು ಗುಣಮುಖರಾಗಿದ್ದು, 3,56,546 ಸಕ್ರಿಯ ಪ್ರಕರಣಗಳಿವೆ. ಕಳೆದ ಒಂದು ದಿನದಲ್ಲಿ ಸುಮಾರು 391 ಮಂದಿ ಈ ವೈರಸ್ ನಿಂದ ಮೃತಪಟ್ಟಿದ್ದು, ಒಟ್ಟಾರೆ ಸಾವನ್ನಪ್ಪಿದವರ ಸಂಖ್ಯೆ 1,43,019ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೋವಿಡ್ ಸೋಂಕಿತರ ಮತ್ತು ಮೃತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಇದೊಂದು ಆಶಾದಾಯಕ ಬೆಳವಣಿಗೆಯೆಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಸ್ತುತ ಭಾರತದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 3.6% ಇದ್ದು, ಗುಣಮುಖರಾಗುವವರ ಪ್ರಮಾಣ ಶೇ. 94.89% ಇದೆ. ಇನ್ನೂ ಮೃತರ ಪ್ರಮಾಣ 1.45% ರಷ್ಟಿದೆ.
ಇದನ್ನೂ ಓದಿ: ಸಂಸತ್ ಮೇಲಿನ ದಾಳಿಗೆ 19 ವರ್ಷ: ಹೇಡಿತನದ ಕೃತ್ಯವನ್ನು ಎಂದಿಗೂ ಮರೆಯಲ್ಲ ಎಂದ ಪ್ರಧಾನಿ !
ಕಳೆದ 6 ದಿನಗಳಿಂದ ಮಹಾರಾಷ್ಟ್ರ, ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ದೆಹಲಿಯಲ್ಲಿ ಹೊಸ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ದೇಶದಲ್ಲಿ ಹೊಸ ಸೋಂಕಿತರಿಂಗಿಂತ ಗುಣಮುಖರಾಗುವವರ ಪ್ರಮಾಣವೇ ಅಧಿಕವಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಖಲಿಸ್ತಾನ್ ಬೆಂಬಲಿಗರಿಂದ ದುಷ್ಕೃತ್ಯ: ರೈತ ಬೆಂಬಲಿತ ಹೋರಾಟದ ವೇಳೆ ಗಾಂಧಿ ಪ್ರತಿಮೆ ವಿರೂಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.