ಗ್ರಾ.ಪಂ. ಚುನಾವಣೆ ಸ್ಥಾನ ಹರಾಜು: ಕಂದಾಯ, ಪೊಲೀಸ್ ತನಿಖೆ ಆರಂಭ
Team Udayavani, Dec 13, 2020, 2:27 PM IST
ವಿಜಯಪುರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧ ಆಯ್ಕೆಗಾಗಿ ಗ್ರಾಮಸ್ಥರು ದೇವಸ್ಥಾನ ಅಭಿವೃದ್ಧಿ ಹೆಸರಿನಲ್ಲಿ ಹಣದ ಮೂಲಕ ಸದಸ್ಯ ಸ್ಥಾನವನ್ನು ಹರಾಜು ಹಾಕಿದ ಪ್ರಕರಣ ಕುರಿತು ಜಿಲ್ಲೆಯಲ್ಲಿ ಕಂದಾಯ, ಪೊಲೀಸ್ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾ.ಪಂ. ಚುನಾವಣೆಯಲ್ಲಿ ಸಿದ್ದಾಪುರದ 3 ವಾರ್ಡ್ ಗಳ ಸದಸ್ಯ ಸ್ಥಾನ ಅವಿರೋಧ ಆಯ್ಕೆಗೆ ಹಣದ ಮೂಲಕ ಹರಾಜು ಆರೋಪ ಕೇಳ ಬಂದಿತ್ತು.
ಈ ಹಿನ್ನೆಲೆಯಲ್ಲಿ ವಿಜಯಪುರ ಕಂದಾಯ ಉಪ ವಿಭಾಗಾಧಿಕಾರಿ ರಾಮಚಂದ್ರ ಗಡಾದೆ ಇವರ ನೇತೃತ್ವದ ಅಧಿಕಾರಿಗಳ ತಂಡ ನಾಗಬೇನಾಳ ಗ್ರಾಮಕ್ಕೆ ತೆರಳು ತನಿಖೆ ಆರಂಭಿಸಿದ್ದಾರೆ.
ನಾಗಬೇನಾಳ ಗ್ರಾ.ಪಂ. ವ್ಯಾಪ್ತಿಯ ಸಿದ್ದಾಪುರ ವಾರ್ಡ್ ನ 3 ಸದಸ್ಯ ಸ್ಥಾನಗಳ ಹರಾಜು ಆರೋಪ ಹಿನ್ನಲೆ ಈ ಭೇಟಿ ನೀಡಿ ವಿಚಾರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಬಂಟ್ವಾಳ: ಗ್ರಾ.ಪಂ. ಚುನಾವಣೆಯನ್ನು ಬಹಿಷ್ಕರಿಸಿ, ರಸ್ತೆಯಲ್ಲಿ ಬ್ಯಾನರ್ ಹಾಕಿದ ಗ್ರಾಮಸ್ಥರು
ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ಚುನಾವಣೆಯಲ್ಲಿ ನೀತಿ ಸಂಹಿತೆ ಪಾಲನೆ ನೋಡಲ್ ಅಧಿಕಾರಿ ಡಾ. ಎನ್.ಬಿ. ಹೊಸಮನಿ, ಚುನಾವಣಾಧಿಕಾರಿ ಐ.ಬಿ.ಹಿರೇಮಠ, ಸಿಪಿಐ ಆನಂದ ವಾಘ್ಮೋಡೆ, ಪಿಎಸ್ ಐ ಮಲ್ಲಪ್ಪ ಮಡ್ಡಿ ಇವರು ಗ್ರಾಮಸ್ಥರು ಮತ್ತು ಅಭ್ಯರ್ಥಿಗಳ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದೇಶ-ವಿದೇಶಗಳಲ್ಲಿ 30,000 ಗಂಟೆ ಉಪನ್ಯಾಸ ಪ್ರವಚನಗೈದ ದಾಖಲೆ: ಬನ್ನಂಜೆ ಸಾಧನೆಯ ಹಾದಿ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.