ಐತಿಹಾಸಿಕ ಶಿರ್ವ ನಡಿಬೆಟ್ಟು ಸೂರ್ಯ- ಚಂದ್ರ ಕಂಬಳ | Udayavani
Team Udayavani, Dec 14, 2020, 9:52 AM IST
ಶಿರ್ವ: ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ ಶಿರ್ವ ನಡಿಬೆಟ್ಟು ಸೂರ್ಯ- ಚಂದ್ರ ಸಂಪ್ರದಾಯ ಬದ್ಧ ಕಂಬಳ ರವಿವಾರ ನಡೆಯಿತು. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತ ಮೊಕೇಸರ ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ ಜೋಡುಕರೆಗೆ ಕಾಯಿ ಒಡೆಯುವುದರ ಮೂಲಕ ಕಂಬಳವನ್ನು ಉದ್ಘಾಟಿಸಿದರು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಕಂಬಳ ಸಂಪನ್ನಗೊಂಡಿತು. ಅನಾದಿ ಕಾಲದಿಂದಲೂ ಸಂಪ್ರದಾಯಬದ್ಧವಾಗಿ ನಡೆಯುತ್ತಿದ್ದ ಶಿರ್ವ ನಡಿಬೆಟ್ಟು ಕಂಬಳವು 1996ರಿಂದ 2014ರವರೆಗೆ ಸೂರ್ಯಚಂದ್ರ ಜೋಡುಕರೆಯಾಗಿ ನಡೆದು ಪ್ರಸಿದ್ಧಿಯಾಗಿತ್ತು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?