![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 14, 2020, 7:00 PM IST
ಧಾರವಾಡ : ಯೋಗೀಶಗೌಡ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಹಾಗೂ ವಿಶೇಷ ಸಿಬಿಐ ನ್ಯಾಯಾಲಯ, ಸೋಮವಾರ ವಜಾಗೊಳಿಸಿದೆ.
ನ. 27ರಂದು ವಿನಯ ಕುಲಕರ್ಣಿ ಪರ ವಕೀಲರು ಜಾಮೀನು ಮಂಜೂರು ಮಾಡುವಂತೆ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಕಳೆದ ಹಲವು ವಿಚಾರಣೆಯಲ್ಲಿ ಸಿಬಿಐ ಹಾಗೂ ವಿನಯ ಪರ ವಕೀರ ವಾದ ಆಲಿಸಿದ್ದ ನ್ಯಾಯಾಲಯ, ಡಿ. 14ಕ್ಕೆ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಸೋಮವಾರ ನಡೆದ ವಿಚಾರಣೆ ವೇಳೆ ನ್ಯಾಯಾಲಯ, ಅರ್ಜಿದಾರರು ಪ್ರಕರಣದಲ್ಲಿ ಗಂಭೀರ ಸ್ವರೂಪದ ಆರೋಪ ಎದುರಿಸುತ್ತದ್ದಾರೆ. ಜೊತೆಗೆ ಸಾಕ್ಷಿ ನಾಶ ಮಾಡಿದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿದ್ದು, ಪ್ರಭಾವಿ ವ್ಯಕ್ತಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಇನ್ನು ನಡೆಯುತ್ತಿದ್ದು, ಈ ವೇಳೆ ಜಾಮೀನು ಮಂಜೂರು ಮಾಡುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟು, ವಿನಯ ಕುಲಕರ್ಣಿಯವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿತು
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.