ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ JDS ಬೆಂಬಲ:ನಿರ್ಣಯ ಮಂಡನೆಗೂ ಮುನ್ನ BJPಗೆ ಮೇಲುಗೈ
Team Udayavani, Dec 15, 2020, 11:21 AM IST
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಅವರು ಸದನವನ್ನು ಸರಿಯಾಗಿ ನಡೆಸಿಲ್ಲ. ಸಭಾಪತಿಗಳು ತಮ್ಮ ಮನಸ್ಸಿಗೆ ಬಂದಹಾಗೆ ಸದನ ನಡೆಸಬಾರದು. ಹೀಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡಿದ್ದೇವೆ ಎಂದು ಪರಿಷತ್ ಸದಸ್ಯ, ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಹೇಳಿದರು.
ಇಂದು ನಡೆಯಲಿರುವ ಒಂದು ದಿನದ ಕಲಾಪಕ್ಕೂ ಮುನ್ನ ಹೊರಟ್ಟಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ತಮ್ಮ ಪಕ್ಷ ಬೆಂಬಲ ನೀಡಲಿದೆ ಎಂದರು.
ಸದನದಲ್ಲಿ ನಡೆಯುತ್ತಿರುವ ವಿಷಯದಲ್ಲಿ ವಿಷಯಾಧಾರಿತವಾಗಿ ಬೆಂಬಲ ನೀಡಬೇಕಾಗುತ್ತದೆ. ಅದರಿಂದ ವಿಷಯಾಧಾರಿತವಾಗಿ ಬಿಜೆಪಿಗೆ ಬೆಂಬಲ ನೀಡಿದ್ದೇವೆ. ಸದನದ ಹೊರಗಿನ ವಿಚಾರ ಬೇರೆ, ಸದನದ ಒಳಗಿನ ವಿಚಾರ ಬೇರೆ. ದೇವೇಗೌಡರು ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಒಪ್ಪಿದ್ದಾರೆಯೇ- ಇಲ್ಲವೊ ಗೊತ್ತಿಲ್ಲ ಸಭಾಪತಿ ಅವರು ಸದನವನ್ನು ಸರಿಯಾಗಿ ನಡೆಸಿಲ್ಲ ಎಂದರು.
ಸಭಾಪತಿಯವರು ಸಂವಿಧಾನ ರೀತಿ ನಡೆದುಕೊಳ್ಳಬೇಕು. ಬಿಜೆಪಿಯವರು ಕೊಟ್ಟ ಪತ್ರ ಸರಿಯಿಲ್ಲ ಎಂದು ಹೇಳಬಾರದು. ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಮೇಲೆ ಅದರ ಮೇಲೆ ಚರ್ಚೆ ಮಾಡಿ ಇತಿಶ್ರೀ ಹಾಡಬೇಕು. ಸಭಾಪತಿಗಳು ತಮ್ಮ ಮನಸ್ಸಿಗೆ ಬಂದಹಾಗೆ ಸದನ ನಡೆಸಬಾರದು. ಹೀಗಾಗಿ ಬಿಜೆಪಿ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ನೀಡಿದ್ದೇವೆ ಎಂದು ಬಸವರಾಜ ಹೊರಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.