ಪರಿಷತ್ ನಲ್ಲಿ ನಡೆದ ಘಟನೆಗೆ ಕಾಂಗ್ರೆಸ್ ಕಾರಣ: ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ
Team Udayavani, Dec 15, 2020, 2:17 PM IST
ಶಿವಮೊಗ್ಗ: ಇಂದು ಪರಿಷತ್ ನಲ್ಲಿನಡೆದ ಘಟನೆ ದುರಾದೃಷ್ಟಕರ. ಎಂದೂ ಇಂಥ ಘಟನೆಗಳು ನಡೆಯಬಾರದು. ಇಂದಿನ ಘಟನೆಗೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಆರಂಭದಲ್ಲಿ ಮಾಡಿದ ತಪ್ಪಿನಿಂದಾಗಿ ಇಂಥ ಘಟನೆ ನಡೆದಿದೆ. ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಈ ರೀತಿಯ ಪ್ರವೃತ್ತಿ ನಡೆಸಿಕೊಂಡು ಬಂದಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಕಲಾಪದಲ್ಲಿಂದು ನಡೆದ ತಳ್ಳಾಟ ಘಟನೆಯನ್ನು ಟೀಕಿಸಿದರು.
ಈ ಹಿಂದೆ ನಾನು ಸಭಾಪತಿಯಾಗಿದ್ದಾಗಲೂ ಇದೇ ಪರಿಸ್ಥಿತಿ ಅನುಭವಿಸಿದ್ದೆ. ನನ್ನ ವಿರುದ್ಧವೂ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಆಗ ನಾನು ಸಭಾಪತಿ ಸ್ಥಾನದಿಂದ ಕೆಳಗಿಳಿದು ಬಂದು ಕುಳಿತು ಆ ಸ್ಥಾನದಲ್ಲಿ ಉಪಸಭಾಪತಿಯನ್ನು ಕೂರಿಸಿದ್ದೆ. ಬಳಿಕ ಚುನಾವಣೆ ನಡೆದು ನನಗೆ ಬಹುಮತ ಸಿಕ್ಕಿದಾಗ ಮತ್ತೆ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದೆ ಎಂದು ಇಂದಿನ ಬಿಜೆಪಿ ನಡೆಯನ್ನು ಸಮರ್ಥಿಸಿಕೊಂಡರು.
ಇದನ್ನೂ ಓದಿ:ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:’ಚಿಂತಕರ ಚಾವಡಿ’ಯಲ್ಲಿ ನಡೆದಿದ್ದಿಷ್ಟು
ಕಾಂಗ್ರೆಸ್ ನಾಯಕರು ಅಧಿಕಾರ ನಡೆಸುವುದು ತಮ್ಮ ಆಜನ್ಮ ಸಿದ್ಧ ಹಕ್ಕು ಎಂದುಕೊಂಡಿದ್ದಾರೆ. ನೆಹರೂ ಕುಟುಂಬದವರು ಹಾಗೂ ವಂಶ ಪಾರಂಪರ್ಯವಾಗಿ ಅಧಿಕಾರ ನಡೆಸಬೇಕು ಎಂಬ ಮನೋಭಾವ ಕಾಂಗ್ರೆಸ್ ನವರದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.