ನಿಜವಾದ ಪೋಕರಿಗಳು, ಕಾಡು ಜನ ಯಾರು ಎಂದು ಸಾಬೀತಾಗಿದೆ: ನಳೀನ್ ಕಟೀಲ್
Team Udayavani, Dec 15, 2020, 2:48 PM IST
ಮಂಗಳೂರು: ಈ ಹಿಂದೆ ಕಾಂಗ್ರೆಸ್ ಸದಸ್ಯರುಗಳು ಬಿಜೆಪಿಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿದ್ದರು. ಈಗ, ನಿಜವಾದ ‘ಪೋಕರಿ’ಗಳು ಯಾರು ಅನಾಗರಿಕರು ಯಾರು, ಕಾಡುಜನ ಯಾರು ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟೀಕಿಸಿದರು.
ವಿಧಾನಪರಿಷತ್ ನಲ್ಲಿ ಇಂದು ನಡೆದ ಘಟನೆಗೆ ಸಂಬಂಧಿಸಿ ಟ್ವೀಟ್ ಮಾಡಿದ ಅವರು, ಈಗೀಗ ಪೋಕರಿ ವರ್ತನೆಯಿಂದಲೇ ಜಾಸ್ತಿ ಹೆಸರು ಮಾಡುತ್ತಿರುವ ಕಾಂಗ್ರೆಸ್ ಸದಸ್ಯರು ಈ ಹಿಂದೆ ಬಿಜೆಪಿಯ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿದ್ದರು. ಈಗ, ನಿಜವಾದ ‘ಪೋಕರಿ’ಗಳು ಯಾರು, ಅನಾಗರಿಕರು ಯಾರು, ಕಾಡುಜನ ಯಾರು ಎಂಬುದನ್ನು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಾಬೀತು ಪಡಿಸಿದ್ದಾರೆ ಎಂದರು.
ಇದನ್ನೂ ಓದಿ:ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:’ಚಿಂತಕರ ಚಾವಡಿ’ಯಲ್ಲಿ ನಡೆದಿದ್ದಿಷ್ಟು
ಘಟನೆಯ ಕುರಿತಂತೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ನಾಯಕರು ವಿಧಾನ ಸಭೆ, ವಿಧಾನ ಪರಿಷತ್ನ ಹೊರಗೆ ಗೂಂಡಾಗಿರಿ ಮಾಡುತ್ತಿದ್ದರು. ಈಗ ಒಳಗೂ ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಈ ಮೂಲಕ ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.