ಗೋಹತ್ಯೆ ನಿಷೇಧ ವಿಧೇಯಕ ವಿರೋಧಿಸುವ ದೇವೇಗೌಡರ ಹೇಳಿಕೆ ವಿಷಾದನೀಯ: ಪ್ರಭು ಚವ್ಹಾಣ್
Team Udayavani, Dec 16, 2020, 1:24 PM IST
ಬೆಂಗಳೂರು: ಗೋಹತ್ಯೆ ನಿಷೇಧ ಮಸೂದೆ ಯಾವುದೇ ಒಂದು ಸಮುದಾಯವನ್ನು ಇಟ್ಟುಕೊಂಡು ರೂಪಿಸಿದ್ದಲ್ಲ, ಈ ಮಸೂದೆಯಿಂದ ದೇಶಿ ಗೋವು ತಳಿಗಳ ವೃದ್ಧಿ ಮತ್ತು ಸಂವರ್ಧನೆಗೆ ಹೆಚ್ಚು ಅವಕಾಶ ಕಲ್ಪಿಸಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
ಗೋಹತ್ಯೆ ನಿಷೇಧ ವಿಧೇಯಕದಿಂದ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಆಗುತ್ತದೆ ಎಂಬ ಮಾಜಿ ಪ್ರಧಾನಿ ದೇವೆಗೌಡರ ಹೇಳಿಕೆಗೆ ಸ್ಪಷ್ಟನೆ ನೀಡಿದರು.
ದೇವೇಗೌಡ ಅವರ ಹೇಳಿಕೆ ವಿಷಾದನೀಯ, ಗೋವು ರೈತನೊಂದಿಗೆ ಇದ್ದಷ್ಟು ಅವಧಿ ಅವನ ಆದಾಯದಲ್ಲಿ ವೃದ್ಧಿ ಆಗುತ್ತದೆ ವಿನಃ ನಷ್ಟ ಆಗುವುದಿಲ್ಲ. ಈ ಮಸೂದೆಯಿಂದ ರೈತರ ಗೋವುಗಳ ಕಳ್ಳ ಸಾಗಣೆಗೆ ಕಡಿವಾಣ ಬಿಳುವುದರಿಂದ ರೈತ ನಿಶ್ಚಿಂತೆಯಿಂದ ಪಶುಸಂಗೋಪನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಮುಂಬರುವ ದಿನಗಳಲ್ಲಿ ಉತ್ತರಪ್ರದೇಶ ಮಾದರಿಯಲ್ಲಿ ಗೋವುಗಳ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಗೋವು ಕೇವಲ ನಮ್ಮ ಸಂಸ್ಕೃತಿಯ ಒಂದು ಭಾಗವಲ್ಲ ರೈತನ ಜೀವನಾಧಾರ ಹೀಗಾಗಿ ಈ ಮಸೂದೆಯಿಂದ ರೈತರಿಗೆ ಅನುಕೂಲ ಆಗಲಿದೆ ಎಂದರು.
ಇದನ್ನೂ ಓದಿ:ಸಾವಿರಾರು ಹಾವುಗಳನ್ನು ರಕ್ಷಿಸಿದ ಸ್ನೇಕ್ ಡ್ಯಾನಿಯಲ್ ನಾಗರ ಹಾವು ಕಚ್ಚಿ ಸಾವು
ಮಹಾತ್ಮಾ ಗಾಂಧಿಯವರು ಸಹ ಗೋವುಗಳ ಸಂರಕ್ಷಣೆ ಬಗ್ಗೆ ಹೇಳಿದ್ದರು. ”ಗೋ ವಧೆಯನ್ನು ಬರಿಯ ಕಾನೂನಿನ ಮೂಲಕ ತಡೆಯಲು ಸಾಧ್ಯವಿಲ್ಲ. ಇದಕ್ಕೆ ತಿಳಿವಳಿಕೆ, ಶಿಕ್ಷಣ, ಕರುಣೆ, ಸಹಾನುಭೂತಿಯೂ ಅಗತ್ಯ,” ಎಂದು ಹೇಳಿದ್ದರು. ಭಾರತೀಯ ಸಂವಿಧಾನದಲ್ಲೂ ರಾಜ್ಯ ಸರಕಾರಗಳನ್ನು, ಗೋವು ಹಾಗೂ ಗೋವುಗಳ ನಾನಾ ತಳಿಗಳನ್ನು ಸಂರಕ್ಷಿಸಲು ಹಾಗೂ ವರ್ಧಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ತಿಳಿಸಲಾಗಿದೆ. ಹೀಗಿದ್ದಾಗ ಗೋವುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಬೇಕು ಎಂದು ಸಚಿವ ಪ್ರಭು ಚವ್ಹಾಣ್ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ 2010 ರಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಇದ್ದ ಆಕ್ಷೇಪಣೆಗಳನ್ನು ಈಗಿನ ಮಸೂದೆಯಲ್ಲಿ ಸರಿಪಡಿಸಲಾಗಿದೆ. ಹಳೆಯ ಮಸೂದೆಯಲ್ಲಿ ಎಮ್ಮೆ /ಕೋಣಗಳ ಹತ್ಯೆಗೂ ನಿಷೇಧವಿತ್ತು. ಆದರೆ 2020ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದಲ್ಲಿ 13 ವರ್ಷಕ್ಕಿಂತ ಮೀರಿದ ಎಮ್ಮೆ/ಕೋಣಗಳನ್ನು ಕೈಬಿಡಲಾಗಿದೆ. ವರ್ಷದಿಂದ ವರ್ಷಕ್ಕೆ ಗೋವುಗಳ ಸಂತತಿ ಕಡಿಮೆ ಆಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ ಆಗಿದ್ದು ಈ ಮೂಸುದೆ ಅವುಗಳ ಸಂತತಿ ವೃದ್ಧಿಗೂ ಅವಕಾಶ ಕಲ್ಪಿಸಿಕೊಡಲಿದೆ. 19 ನೇ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ ಒಟ್ಟು ಗೋವು ಮತ್ತು ಎಮ್ಮೆಗಳ ಸಂಖ್ಯೆ 1,29 ಕೋಟಿ ಇತ್ತು ಆದರೆ 20ನೇ ಜಾನುವಾರುಗಳ ಗಣತಿ ಪ್ರಕಾರ 1.14 ಕೋಟಿಗೆ ಇಳಿಗೆ ಆಗಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿದಾಗ ಮಸೂದೆ ಗೋವುಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಅನುಕೂಲ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.