ಹಣ ಇಲ್ಲದ ಖಾತೆಯಿಂದ 7 ಲಕ್ಷ ಡ್ರಾ!
Team Udayavani, Dec 16, 2020, 1:43 PM IST
ಸಾಮದರ್ಭಿಕ ಚಿತ್ರ
ಬೆಂಗಳೂರು: ಸಾಮಾನ್ಯವಾಗಿ ನಕಲಿ ಎಟಿಎಂ ಕಾರ್ಡ್ ಬಳಸಿ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ಹಣ ಲೂಟಿ ಮಾಡುವ ಪ್ರಕರಣ ನೋಡಿದ್ದೇವೆ. ಆದರೆ, ಇಲ್ಲೊಂದು ಅಪರೂಪದ ಪ್ರಕರಣ ದಾಖಲಾಗಿದೆ.
ಹಣವೇ ಇಲ್ಲದ ಖಾತೆಯಿಂದ 7 ಲಕ್ಷರೂ. ಡ್ರಾ ಆಗಿರುವ ಬಗ್ಗೆ ಗ್ರಾಹಕರೊಬ್ಬರ ಮೊಬೈಲ್‌ಗೆ ಸಂದೇಶ ಬಂದಿದ್ದು, ಅದರಿಂದ ಅಚ್ಚರಿಗೊಂಡ ಗ್ರಾಹಕರು ಬ್ಯಾಂಕ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.ಈ ಸಂಬಂಧ ಅಶ್ವತ್ಥನಗರ ಡಾಲರ್ ಕಾಲೋನಿ ನಿವಾಸಿ ಸದಾಶಿವನಗರದಖಾಸಗಿ ಬ್ಯಾಂಕ್‌ನ ವ್ಯವಸ್ಥಾಪಕ ಶಿಲ್ಲಿ ಕುರಿಯನ್ ಎಂಬವರ ಕೊಟ್ಟ ದೂರಿನ ಮೇರೆಗೆ ಉತ್ತರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಖಾಸಗಿ ಬ್ಯಾಂಕಿನಲ್ಲಿ ಬ್ಲೂ ಮೂನ್ ಎಂಬ ಗ್ರಾಹಕರು ಖಾತೆ ಹೊಂದಿದ್ದಾರೆ. ಗ್ರಾಹಕರ ಖಾತೆಯಲ್ಲಿ ಕೇವಲ 19 ರೂ. ಮಾತ್ರ ಇತ್ತು. ಆದರೆ, ಡಿ.9ರಂದು ಅವರ ಎಟಿಎಂ ಕಾರ್ಡ್ ಬಳಸಿ ಹಂತ-ಹಂತವಾಗಿ ಅಪರಿಚಿತರು 7.20 ರೂ. ಡ್ರಾ ಮಾಡಿಕೊಂಡಿದ್ದಾರೆ. ಈ ಸಂಬಂಧ ಬ್ಲೂಮೂನ್ ಅವರ ಮೊಬೈಲ್‌ಗೆ ಸಂದೇಶ ಬಂದಿವೆ. ಅದರಿಂದ ಅಚ್ಚರಿಗೊಂಡ ಅವರು, ಕೂಡಲೇ ಬ್ಯಾಂಕ್‌ಅಧಿಕಾರಿಗಳಗಮನಕ್ಕೆ ತಂದಿದ್ದಾರೆ. ಬಳಿಕ ಖಾತೆಯಲ್ಲಿ ಹಣ ಇಲ್ಲದಿದ್ದರೂ ಹೇಗೆ 7 ಲಕ್ಷ ಬಂದಿತ್ತು ಎಂಬುದರ ಬಗ್ಗೆ ಬ್ಯಾಂಕ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಬ್ಯಾಂಕ್ ಸಿಬ್ಬಂದಿಯಿಂದಲೂ ಮಾಹಿತಿ ಪಡೆದುಕೊಳ್ಳಲಾಗುವುದುಎಂದು ಸಿಇಎನ್ ಠಾಣೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.