ಮಳಿಗೆಗಳ ಬಳಿ ಶೇ.100 ತ್ಯಾಜ್ಯ ವಿಲೇವಾರಿ ಕಡ್ಡಾಯ


Team Udayavani, Dec 16, 2020, 4:32 PM IST

ಮಳಿಗೆಗಳ ಬಳಿ ಶೇ.100 ತ್ಯಾಜ್ಯ ವಿಲೇವಾರಿ ಕಡ್ಡಾಯ

ಚಿಕ್ಕಬಳ್ಳಾಪುರ: ನಗರದಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳ ಮುಂದೆ ಶೇ.100ರ ತ್ಯಾಜ್ಯ ವಿಲೇವಾರಿ ಮಾಡುವ ಮೂಲಕ ಚಿಕ್ಕಬಳ್ಳಾಪುರವನ್ನು ಸ್ವತ್ಛ,ಸುಂದರ ನಗರವನ್ನಾಗಿ ಮಾಡಲು ವರ್ತಕರು ಹಾಗೂವ್ಯಾಪಾರಸ್ಥರ ಸಹಕಾರ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಆರ್‌.ಲತಾ ಹೇಳಿದರು.

ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ನಗರದ ವರ್ತಕರು ಹಾಗೂ ವ್ಯಾಪಾರಸ್ಥರಿಗೆ ಸ್ವತ್ಛತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ವಚ್ಛ ಸರ್ವೇಕ್ಷಣಾ 2020ರ ದಕ್ಷಿಣಾ ವಲಯದಲ್ಲಿ ಚಿಕ್ಕಬಳ್ಳಾಪುರವು 9ನೇ ಸ್ಥಾನದಲ್ಲಿದೆ. ಅದನ್ನು ಪ್ರಥಮ ಸ್ಥಾನಕ್ಕೆ ತರಲು ಎಲ್ಲಾ ವರ್ತಕರು, ವ್ಯಾಪಾರಸ್ಥರುಹಾಗೂ ಸ್ಥಳೀಯ ಎಲ್ಲಾ ನಾಗರಿಕರು ಸಹಕಾರ ನೀಡಬೇಕು. ತಮ್ಮ ಅಂಗಡಿ ಮುಂಗಟ್ಟುಗಳ ಮುಂದೆ ಬಿದ್ದ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಪ್ರತಿಯೊಬ್ಬರೂ ಕಸದ ಬುಟ್ಟಿಯನ್ನು ಇಟ್ಟುಕೊಂಡು, ಪ್ರತಿದಿನವೂ ನಗರಸಭೆ ವಾಹನಕ್ಕೆ ನೀಡಬೇಕು. ಒಮ್ಮೆ ಬಳಸಬಹುದಾದ ಪ್ಲಾಸ್ಟಿಕ್‌ಅನ್ನು ಯಾವುದೇ ಕಾರ ಣಕ್ಕೂ ಮರುಬಳಕೆ ಮಾಡಬಾರದು ಎಂದರು.

ಖಡಕ್‌ ಎಚ್ಚರಿಕೆ: ಅಂಗಡಿಗಳ ಮುಂದೆ 2 ಕಸದ ಬುಟ್ಟಿಗಳನ್ನು ಕಡ್ಡಾಯವಾಗಿ ಇಟ್ಟು, ಹಸಿ ಮತ್ತು ಒಣತ್ಯಾಜ್ಯವಾಗಿ ವಿಂಗಡಣೆ ಮಾಡಬೇಕು. ಈ ನಿಯಮ ಗಳನ್ನು ಉಲ್ಲಂಘಿಸಿ ರಸ್ತೆ ಅಥವಾ ಅಂಗಡಿ ಮುಂಭಾಗ ಕಸ ಹಾಕುವವರ ವಿರುದ್ಧ ದೊಡ್ಡ ಮಟ್ಟದಲ್ಲಿ ದಂಡ ಹಾಕಲಾಗುತ್ತದೆ. ಎರಡನೇ ಬಾರಿಗೂ ಇದು ಮರು ಕಳುಹಿಸಿದರೆ ಅಂಗಡಿಯನ್ನು ಮುಚ್ಚಿಸಲಾಗುವುದು ಎಂದು ಖಡಕ್‌ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳು, ಮಂಗಳವಾರದಿಂದಲೇ ನಗರದಲ್ಲಿ ಶೇ.100ರಕಸ ವಿಲೇವಾರಿ ಆಗಬೇಕಿದ್ದು, ಬುಧವಾರದಿಂದನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ದಂಢ ವಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೀದಿ ಬದಿ ವ್ಯಾಪಾರಿಗಳಿಂದ ದಟ್ಟಣೆ : ಜಿಲ್ಲಾ ಪೊಲೀಸ್‌ ವರಿಷ್ಠಾಕಾರಿ ಜಿ.ಕೆ.ಮಿಥುನ್‌ಕುಮಾರ್‌ ಮಾತನಾಡಿ, ನಗರದಲ್ಲಿ ಬೀದಿಬದಿಯ ವ್ಯಾಪಾರಿಗಳು ನಗರಸಭೆಯವರು ನಿಗಪಡಿಸಿರುವ ಜಾಗಗಳಲ್ಲಿಮಾತ್ರವೇ ವ್ಯಾಪಾರ ಮಾಡಬೇಕು. ಆದರೆ, ಕೆಲವು ಕಡೆಇದು ಆಗುತ್ತಿಲ್ಲ. ತಳ್ಳುವ ಗಾಡಿಯವರು ರಸ್ತೆಗೆಅಂಟಿಕೊಂಡಂತೆ ಗಾಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದು,ಇದರಿಂದ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ ಎಂದರು. ನಗರಸಭೆ ಆಯುಕ್ತ ಲೋಹಿತ್‌ ಕುಮಾರ್‌ ಮಾತ ನಾಡಿ,ಚಿಕ್ಕಬಳ್ಳಾಪುರ ನಗರದಲ್ಲಿ ಒಟ್ಟು2,240 ವ್ಯಾಪಾರಸ್ಥರು ಇದ್ದು, 14902 ಕುಟುಂಬಗಳಿವೆ. ಈ ನಿಟ್ಟಿನಲ್ಲಿ ನಗರಸಭೆ ವ್ಯಾಪ್ತಿಯಲ್ಲಿರುವ ರಸ್ತೆಗಳಲ್ಲಿ ಸಾರ್ವಜನಿಕರು ಕಸ ಹಾಕದಂತೆ ತಡೆಗಟ್ಟಲು 26 ಮಂದಿ ಸ್ವಚ್ಛತಾ ಕ್ಯಾಪ್ಟನ್‌ಗಳನ್ನು ನೇಮಿಸಲಾಗಿದೆ. ಇವರು ಪ್ರತಿ ನಿತ್ಯ ಬೆಳಗ್ಗೆ 6.30 ರಿಂದ 8.30ಗಂಟೆಯವರೆಗೆ ತಮಗೆ ಹಂಚಿಕೆ ಮಾಡಿರುವ ವಾರ್ಡ್‌ಗಳಲ್ಲಿ ಸಂಚರಿಸಿರಸ್ತೆಗೆ ಕಸ ಹಾಕದಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಜತೆಗೆ ಉಲ್ಲಂಘಿಸುವವರ ವಿರುದ್ಧದಂಡಹಾಕಲಿದ್ದಾರೆ. ತ್ಯಾಜ್ಯ ಸಮಸ್ಯೆ ದೂರಿಗಳಿದ್ದಲ್ಲಿ 08156-275557 ಸಹಾಯವಾಣಿಗೆ ಸಂಪರ್ಕಿಸಲು ತಿಳಿಸಿದರು.

ನಗರಸಭೆ ಅಧ್ಯಕ್ಷರಾದ ಆನಂದ್‌ರೆಡ್ಡಿ(ಬಾಬು),ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದರೇಣುಕಾ, ಡಿವೈಎಸ್‌ಪಿ ರವಿಶಂಕರ್‌ ಹಾಗೂ ನಗರದ ವಿವಿಧ ವರ್ತಕರು ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.