ಹಿಂದಿನ ತಹಶೀಲ್ದಾರರಿಂದ ಅಕ್ರಮ: ತನಿಖೆಗೆ ಒತ್ತಾಯ


Team Udayavani, Dec 16, 2020, 4:43 PM IST

ಹಿಂದಿನ ತಹಶೀಲ್ದಾರರಿಂದ ಅಕ್ರಮ: ತನಿಖೆಗೆ ಒತ್ತಾಯ

ಬಂಗಾರಪೇಟೆ: ಭೂ ರಹಿತ ಬಡವರಿಗೆ ಭೂಮಿ ಮಂಜೂರು ಮಾಡಲು ಅರ್ಜಿ ಸಲ್ಲಿಸಿರುವ ರೈತರ ಜಮೀನನ್ನು ಪರಿಶೀಲಿಸಿದನಂತರ ಸಮಿತಿಯಲ್ಲಿಬಡವರಿಗೆ ನೀಡಬೇಕಾದ ಸಾಗುವಳಿ ಚೀಟಿಗಳು ಲಕ್ಷಲಕ್ಷಕ್ಕೆ ಸಾರ್ವಜನಿಕವಾಗಿ ಮಾರಾಟವಾಗುತ್ತಿವೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆರೋಪಿಸಿದರು.

ರೈತ ಸಂಘದಿಂದ ಧರಣಿ ಮಾಡಿ ತಹಶೀಲ್ದಾರ್‌ ಎಂ.ದಯಾನಂದ್‌ ಕಂದಾಯ ಸಚಿವರಿಗೆ ಮನವಿನೀಡಿ ಮಾತನಾಡಿದ, ತಹಶೀಲ್ದಾರ್‌ ಜಯಣ್ಣ,ಸತ್ಯಪ್ರಕಾಶ್‌ ಅವಧಿಯಲ್ಲಿ ತಾಲೂಕಿನಾ ದ್ಯಂತಆಗಿರುವ ಭೂ ಹಗರಣ ಮತ್ತು ಸಾಗುವಳಿ ಚೀಟಿದಂಧೆಯನ್ನು ಸಿಬಿಐಗೆ ಒಪ್ಪಿಸಿ ಪ್ರತಿ ಹಳ್ಳಿಯಜಾನುವಾರುಗಳಿಗೆ 25 ಎಕರೆ ಗೋಮಾಳ ಮೀಸಲಿಡಬೇಕೆಂದು ಆಗ್ರಹಿಸಿದರು.

ಹೆಸರಿಗೆ ಮಾತ್ರ ಬಡವರು ಮಂಜೂರು ಮಾತ್ರ ದೊಡ್ಡ ದೊಡ್ಡ ರಿಯಲ್‌ ಎಸ್ಟೇಟ್‌ ಹಾಗೂ ಜನಪ್ರತಿನಿಧಿಗಳ ಪಾಲಾಗಿದೆ. ಜಿಲ್ಲಾದ್ಯಂತ ತಹಶೀಲ್ದಾರ್‌ ಜಯಣ್ಣ ಕೆಲಸ ನಿರ್ವಹಿಸಿರುವ ಸ್ಥಳಗಳಲ್ಲಿ ನಡೆದಿರುವ ಭೂ ಹಗರಣ ಹಾಗೂ ಅಕ್ರಮ ಸಾಗುವಳಿ ಚೀಟಿ ದಂಧೆ ಇಡೀ ಕಂದಾಯ ಹಾಗೂ ಜಿಲ್ಲಾಡಳಿತವನ್ನೇ ಬೆಚ್ಚಿ ಬೀಳಿಸುತ್ತದೆ ಎಂದರು.

ತಾಲೂಕು ಅಧ್ಯಕ್ಷ ಐತಂಡಹಳ್ಳಿ ಮಂಜುನಾಥ ಮಾತನಾಡಿ, ತಾಲೂಕಿನಲ್ಲಿ ಕೆಲಸ ನಿರ್ವಹಿಸಿದಂತಹ ದಿವಂಗತ ಸತ್ಯಪ್ರಕಾಶ್‌ ಅವಧಿಯಲ್ಲಿ ಸಾವಿರಾರು ಎಕೆರೆ ಅಕ್ರಮ ಮಂಜೂರು ಮಾಡುವ ಜೊತೆಗೆ ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದಾರೆ. ನಂತರ ಕೆಲಸ ನಿರ್ವಹಿಸುತ್ತಿದ್ದ ಜಯಣ್ಣನವರು ಕಾಮ ಸಮುದ್ರ, ಬೂದಿಕೋಟೆ, ಕಸಬಾ ಹೋಬಳಿಗಳಲ್ಲಿ ಸಾವಿರಾರು ಎಕರೆ ಸರ್ಕಾರಿ ಜಮೀನುಗಳನ್ನು ಜನ ಪ್ರತಿನಿಧಿಗಳಿಗೆ ಹಾಗೂ ಅವರ ಬೆಂಬಲಿಗರಿಗೆ ಮತ್ತು ರಿಯಲ್‌ ಎಸ್ಟೇಟ್‌ ಉದ್ದಿಮೆಗಳಿಗೆ ಮಂಜೂರು ಮಾಡಿರುವ ಆರೋಪಗಳು ಹೆಚ್ಚಾಗಿರುವುದರಿಂದ ವಿಶೇಷ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ತಹಶೀಲ್ದಾರ್‌ ಜಯಣ್ಣ ಹಾಗೂ ಸತ್ಯಪ್ರಕಾಶ್‌ಅವಧಿಯಲ್ಲಿ ಆಗಿರುವ ಭೂ ಹಗರಣ ಮತ್ತು ಅಕ್ರಮ ಸಾಗುವಳಿ ಚೀಟಿ ದಂಧೆಯನ್ನು ಸಿಬಿಐಗೆ ಒಪ್ಪಿಸಿ ಅದರಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಿ ಪ್ರತಿ ಹಳ್ಳಿ ಜಾನು ವಾರುಗಳು ಮೇಯಿಸಲು 25 ಎಕರೆ ಗೋಮಾಳಜಮೀನು ಮೀಸಲಿಡಬೇಕು.ಜೊತೆಗೆ ಭೂ ಹಗರಣವನ್ನು ಒಂದು ತಿಂಗಳ ಒಳಗೆ ಸಿಬಿಐಗೆ ಒಪ್ಪಿಸದೆ ಹೋದರೆ ಬಂಗಾರಪೇಟೆ ತಾಲೂಕು ಬಂದ್‌ ಮಾಡುವ ಎಚ್ಚರಿಕೆಯನ್ನು ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐತಂಡಹಳ್ಳಿ ಮುನ್ನಾ, ಹಸಿರು ಸೇನೆ ತಾಲೂಕು ಅಧ್ಯಕ್ಷ ಚಾಂದ್‌ ಪಾಷ, ಯುವ ಮುಖಂಡ ಕಿರಣ್‌, ಸ್ವಸ್ತಿಕ್‌ ಶಿವು, ಜಮೀರ್‌ಪಾಷ, ನವಾಜ್‌, ಜಾವಿದ್‌, ಗೌಸ್‌ಪಾಷ, ಮಹಮದ್‌ ಷೋಯಿಬ್‌ ಇತರರಿದ್ದರು.

ಹಿಂದಿನ ತಹಶೀಲ್ದಾರ್‌ ಅವಧಿಯಲ್ಲಿ ನಡೆದಿರುವ ಭೂ ಹಗರಣದ ಬಗ್ಗೆ ನನಗೆ ಮಾಹಿತಿ ಇಲ್ಲ. ನಿಮ್ಮ ಮನವಿಯನ್ನು ದೂರು ಎಂದು ಪರಿಗಣಿಸಿ ಪರಿಶೀಲನೆನಡೆಸುವ ಜೊತೆಗೆ ಸರ್ಕಾರಕ್ಕೆ ನಿಮ್ಮ ಮನವಿಯನ್ನುಕಳುಹಿಕೊಡಲಾಗುವುದು. ಎಂ.ದಯಾನಂದ್‌, ತಹಶೀಲ್ದಾರ್‌

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.