ಉಗ್ರ ಪರ ಗೋಡೆ ಬರಹ ಪ್ರಕರಣ : ಮಾಹಿತಿ ಸಂಗ್ರಹಿಸಿದ ಎನ್‌ಐಎ
Team Udayavani, Dec 16, 2020, 11:29 PM IST
ಮಂಗಳೂರು: ಭಯೋತ್ಪಾದಕ ಸಂಘಟನೆ ಪರವಾಗಿ ನಗರದಲ್ಲಿ ಗೋಡೆ ಬರಹ ಬರೆದ ಪ್ರಕರಣದ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಪ್ರಾಥಮಿಕ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದ್ದು, ತನಿಖೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಬಂಧಿತ ಆರೋಪಿ ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್‌ಗೆ ಕೆಲವು ಸಂಘಟನೆಗಳ ಸಂಪರ್ಕ ಹಾಗೂ ವಿದೇಶದಲ್ಲಿರುವ ವ್ಯಕ್ತಿ ಯೊಂದಿಗೆ ಸಂಪರ್ಕದಲ್ಲಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಇದೀಗ ಸ್ವತಃ ಎನ್‌ಐಎ ತಂಡ ನಗರಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಪೊಲೀಸ್ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ.
ಸಾಕ್ಷ್ಯಗಳ ವಶ
ದುಷ್ಕೃತ್ಯಕ್ಕೆ ಬಳಸಿದ ಪರಿಕರಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದು, ಅವುಗಳು ಕೂಡ ಪ್ರಕರಣಕ್ಕೆ ಮಹತ್ವದ ಸಾಕ್ಷ್ಯಗಳಾಗಿವೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿಯಲ್ಲಿ ತನ್ನ ತಂದೆಯ ಹೋಲ್‌ಸೇಲ್ ಬಟ್ಟೆ ಅಂಗಡಿಯಲ್ಲಿ ಸೇಲ್ಸ್‌ಮನ್ ಆಗಿದ್ದ ಶಾರೀಕ್ ಆಗಾಗ ಮಂಗಳೂರಿಗೆ ಬರುತ್ತಿದ್ದ. ಮಂಗಳೂರಿನ ಅಪಾರ್ಟ್ ಮೆಂಟ್‌ವೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಮಾಝ್ ಮುನೀರ್ ಅಹಮ್ಮದ್‌ನನ್ನು ಕೂಡ ತನ್ನ ದುಷ್ಕೃತ್ಯಕ್ಕೆ ಸೇರಿಸಿಕೊಂಡಿದ್ದ.
ಇನ್ನೋರ್ವ ಆರೋಪಿ?
ಪ್ರಕರಣದ ಹಿಂದೆ ತೀರ್ಥಹಳ್ಳಿ ಮೂಲದ ಮತ್ತೂಬ್ಬ ಆರೋಪಿ ಕೂಡ ಶಾಮೀಲಾಗಿರುವ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಆತನ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.