ಅಧಿಕಾರ ಕಳೆದುಕೊಂಡ ಕಾಂಗ್ರೆಸ್‌ನಿಂದ ಗೂಂಡಾಗಿರಿ
Team Udayavani, Dec 17, 2020, 1:17 PM IST
ಬೆಳಗಾವಿ: ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ದೇಶ ಹಾಗೂ ರಾಜ್ಯದಲ್ಲಿ ಗೂಂಡಾಗಿರಿ ನಡೆಸುತ್ತಿದ್ದು, ಉಪಸಭಾಪತಿಯನ್ನು ಎಳೆದು ತಂದು ಗೂಂಡಾಗಿರಿ ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ಟೀಕಾ ಪ್ರಹಾರ ನಡೆಸಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗೂಂಡಾಗಿರಿ ರಾಜ್ಯವನ್ನು ನಿರ್ಮಾಣ ಮಾಡಿದೆ. ಇತಿಹಾಸದಲ್ಲಿ ಕಾಂಗ್ರೆಸ್ ಮಾಡಿರುವ ಗೂಂಡಾಗಿರಿ ಬಹಳಷ್ಟಿದೆ. ಹದಿನೇಳು ಜನ ಶಾಸಕರು ಬಿಜೆಪಿಗೆ ಬರುವ ವೇಳೆ ವಿಧಾನಸಭೆಯಲ್ಲೇ ಸುಧಾಕರ್ ಮೇಲೆ ಹಲ್ಲೆ ಮಾಡಿ ಗೂಂಡಾಗಿರಿ ನಡೆಸಿದ್ದರು. ಈಗ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಗೂಂಡಾಗಿರಿ ಮಾಡಿದೆ ಎಂದು ವಾಗ್ಧಾಳಿ ನಡೆಸಿದರು.
ಕಾಂಗ್ರೆಸ್‌ಗೆ ಯಾವತ್ತೂ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಹಳೆ ಕಾಂಗ್ರೆಸ್, ಈಗಿನ ಕಾಂಗ್ರೆಸ್ ಬೇರೆ ಬೇರೆಯಾಗಿದೆ. ಅಧಿ ಕಾರ ಇಲ್ಲದಿದ್ದಾಗ ಬೆಂಕಿ ಹಾಕಿ, ಗಲಭೆ ಸೃಷ್ಟಿಸಿದ ಅನೇಕ ಉದಾಹರಣೆಗಳಿವೆ ಎಂದು ಕಿಡಿಕಾರಿದರು. ಪ್ರತಿ ಸಲವೂ ನನ್ನ ವಿರುದ್ಧ ವಾಗ್ಧಾಳಿ ನಡೆಸುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ನನ್ನ ಮೇಲೆ ತುಂಬಾ ಪ್ರೀತಿ ಇರಬೇಕು ಎಂದು ಕಟೀಲ್ ವ್ಯಂಗ್ಯವಾಡಿದರು. ವಿಧಾನ ಪರಿಷತ್‌ನಲ್ಲಿ ಗಲಾಟೆಯಾದ ವಿಷಯಕ್ಕೆ ಸಂಬಂಧಿಸಿ, ಬಿಜೆಪಿ ಹಾಗೂ ಸರ್ಕಾರ ಕಾನೂನು ಹೋರಾಟಕ್ಕೆ ಪ್ರಯತ್ನ ಮಾಡಿದೆ.
ಇದನ್ನೂ ಓದಿ:ಐಷಾರಾಮಿ ಬಸ್ ಸಂಚಾರ ಹೆಚ್ಚಳ
ಕಾನೂನು ತಜ್ಞರ ಸಲಹೆ ಪಡೆದು ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದೇವೆ ಎಂದರು. ಉಪಸಭಾಪತಿಯನ್ನು ಎಳೆದು ಹೊರ ಹಾಕುವುದರ ಮೂಲಕ ಗೂಂಡಾಗಿರಿಯನ್ನು ವಿಧಾನ ಪರಿಷತ್ ಒಳಗೆ ತರಲಾಗಿದೆ. ಬಿಜೆಪಿ ಸಭಾಪತಿ ಮೇಲೆ ಅವಿಶ್ವಾಸ ಮಂಡನೆ ನಿರ್ಣಯ ಮಂಡಿಸಿತ್ತು.
ಒಂದು ಸಾರಿ ಅವಿಶ್ವಾಸ ಮಂಡನೆಯಾದ ಬಳಿಕ ಸಭಾಪತಿ ಸ್ಥಾನದಲ್ಲಿ ಕೂರಬಾರದು. ಹಾಗೇನಾದ್ರೂ ಇದ್ದರೆ ಕಾನೂನು ಹೋರಾಟ ಮಾಡಬೇಕಿತ್ತು ಎಂದರು. ಡಿ. 20ರಂದು ಬೆಂಗಳೂರಿನಲ್ಲಿ ಬಿಜೆಪಿ ಪದಾ ಧಿಕಾರಿಗಳ ಸಭೆ ನಡೆಯಲಿದೆ. ಸಭೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ಗೆ ಆಹ್ವಾನ ನೀಡಲಾಗಿದೆ. ಸಂಪುಟ ವಿಸ್ತರಣೆ ಕುರಿತು ಚರ್ಚೆ ಆಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.